ಶಾಸಕ ರಮೇಶ್ ಜಾರಕಿಹೊಳಿಯವರು ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
ನಾಳೆ ಕುಮಾರಸ್ವಾಮಿ ದೆಹಲಿಗೆ ಹೊರಡುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ಜೆಪಿ ನಗರದಲ್ಲಿರುವ ನಿವಾಸದಲ್ಲಿ ಜಾರಕಿಹೊಳಿ ಭೇಟಿಯಾಗಿದ್ದಾರೆ.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ರಮೇಶ್ ಜಾರಕಿಹೊಳಿ, ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರವನ್ನು ನಾನು ಹೈಕಮಾಂಡ್ ನಿರ್ಧಾರಕ್ಕೆ ಸ್ವಾಗತಿಸುತ್ತೇನೆ.
ಆದಷ್ಟು ಬೇಗ ಮೈತ್ರಿ ಆದರೆ ಒಳ್ಳೆಯದಾಗುತ್ತದೆ. ಈಗಿನ ಸರ್ಕಾರ ಬೀಳಿಸುವುದನ್ನು ಈಗ ಹೇಳಲು ಆಗುವುದಿಲ್ಲ ಎಂದು ತಿಳಿಸಿದರು.ಮೈತ್ರಿಯಿಂದ ಈ ಕೆಟ್ಟ ಸರ್ಕಾರ ತೆಗೆಯಲು ಮುಂದಿನ ಹೋರಾಟ ಮಾಡಲು ಶಕ್ತಿ ಬರುತ್ತದೆ, ಕುಮಾರಸ್ವಾಮಿ ಅವರು ಹೋರಾಟ ಮಾಡಿಕೊಂಡು ಬಂದಿದ್ದಾರೆ ಎಂದು ಅವರು ಹೇಳಿದರು.
Laxmi News 24×7