Breaking News

ಸದ್ಯ ಬಿಜೆಪಿ ಜೊತೆ ಯಾವುದೇ ಮೈತ್ರಿ ಇಲ್ಲ: ಎಐಎಡಿಎಂಕೆ

Spread the love

ಚೆನ್ನೈ(ತಮಿಳುನಾಡು) : ಲೋಕಸಭೆ ಚುನಾವಣೆ ಹಿನ್ನೆಲೆ ಬಿಜೆಪಿ, ಕಾಂಗ್ರೆಸ್ ಸೇರಿದಂತೆ ವಿವಿಧ ಪಕ್ಷಗಳು ಭರದ ಸಿದ್ಧತೆ ನಡೆಸುತ್ತಿವೆ.

ಈ ನಡುವೆ ವಿವಿಧ ಪಕ್ಷಗಳ ಮೈತ್ರಿ ಬಗ್ಗೆಯೂ ಸುದ್ದಿಗಳು ಹರದಾಡುತ್ತಿದೆ. ಇದರ ಬೆನ್ನಲ್ಲೇ ಬಿಜೆಪಿಯ ಮಿತ್ರ ಪಕ್ಷ ಎಐಎಡಿಎಂಕೆ(ಅಲ್​ ಇಂಡಿಯಾ ದ್ರಾವಿಡ ಮುನ್ನೇತ್ರ ಕಳಗಂ) ಭಾರತೀಯ ಜನತಾ ಪಕ್ಷದೊಂದಿಗೆ ಸದ್ಯ ಯಾವುದೇ ಮೈತ್ರಿ ಇಲ್ಲ ಎಂದು ಹೇಳಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಎಐಎಡಿಎಂಕೆ ನಾಯಕ ಡಿ. ಜಯಕುಮಾರ್​, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಚುನಾವಣಾ ಸಂದರ್ಭದಲ್ಲಿ ನಿರ್ಧರಿಸಲಾಗುವುದು. ಸದ್ಯ ಬಿಜೆಪಿಯೊಂದಿಗೆ ಯಾವುದೇ ಮೈತ್ರಿ ಇಲ್ಲ ಎಂದು ಹೇಳಿದ್ದಾರೆ. ಇದು ಪಕ್ಷದ ನಿರ್ಧಾರವೇ ಹೊರತು ವೈಯಕ್ತಿಕ ನಿರ್ಧಾರ ಅಲ್ಲ. ಅದಾಗ್ಯೂ ಬಿಜೆಪಿಯು ಎಐಎಡಿಎಂಕೆ ಜೊತೆಗೆ ಮೈತ್ರಿ ಮಾಡಿಕೊಳ್ಳಲು ಬಯಸುತ್ತದೆಯಾದರೂ, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ಬಯಸುವುದಿಲ್ಲ ಎಂದು ಹೇಳಿದ್ದಾರೆ.

ಅಣ್ಣಾಮಲೈ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಜಯಕುಮಾರ್​, ನಮ್ಮ ನಾಯಕರ ಮೇಲಿನ ಟೀಕೆಗಳನ್ನು ನಮಗೆ ಒಪ್ಪಲು ಸಾಧ್ಯವಿಲ್ಲ. ಅಣ್ಣಾಮಲೈ ಈಗಾಗಲೇ ನಮ್ಮ ನಾಯಕಿ ಜಯಲಲಿತಾ ಅವರನ್ನು ಟೀಕಿಸಿದ್ದಾರೆ. ಈ ಸಂಬಂಧ ಅಣ್ಣಾಮಲೈ ವಿರುದ್ಧ ನಾವು ಸುತ್ತೋಲೆ ಹೊರಡಿಸಿದ್ದೆವು. ಅಣ್ಣಾಮಲೈ ಇಷ್ಟಕ್ಕೆ ನಿಲ್ಲಿಸಬೇಕಿತ್ತು. ಆದರೆ ತನ್ನ ವರಸೆಯನ್ನು ಮುಂದುವರೆಸಿ ಮತ್ತೆ ಅಣ್ಣಾ, ಪೆರಿಯಾರ್ ಮೊದಲಾದವರನ್ನು ಟೀಕಿಸಿದ್ದಾರೆ. ನಮ್ಮ ಪಕ್ಷದ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಒಪ್ಪಿಕೊಳ್ಳುವುದಿಲ್ಲ. ನಾಳೆ ನಾವು ಜನರ ಬಳಿ ತೆರಳಿ ಕೆಲಸ ಮಾಡಬೇಕು. ಆದ್ದರಿಂದ ಯಾವುದೇ ಆಯ್ಕೆಯಿಲ್ಲದೆ ಈ ನಿರ್ಧಾರವನ್ನು ಘೋಷಿಸಿದ್ದೇವೆ ಎಂದು ತಿಳಿಸಿದರು.

ಈ ನಿರ್ಧಾರದಿಂದ ನಮ್ಮ ಪಕ್ಷಕ್ಕೆ ಯಾವುದೇ ನಷ್ಟ ಉಂಟಾಗುವುದಿಲ್ಲ. ನಾವು ಖಂಡಿತವಾಗಿಯೂ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದಕ್ಕೂ ಮುನ್ನ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಮಾಜಿ ಸಿಎಂ ದಿವಂಗತ ಸಿ ಎನ್​​ ಅಣ್ಣಾದೊರೈ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದು ಉಭಯ ಪಕ್ಷಗಳ ತಿಕ್ಕಾಟಕ್ಕೆ ಕಾರಣವಾಗಿತ್ತು. ಬಿಜೆಪಿ ಮತ್ತು ಎಐಎಡಿಎಂಕೆ ಪರಸ್ಪರ ವಾಕ್ಸಮರ ನಡೆಸಿದ್ದವು.


Spread the love

About Laxminews 24x7

Check Also

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನು ಪಡೆದಿದ್ದ ಏಳು ಆರೋಪಿಗಳ ಪೈಕಿ ಇಬ್ಬರಿಗೆ ಶ್ಯೂರಿಟಿ ಸಿಕ್ಕಿಲ್ಲ.

Spread the loveಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಪಾಲಾಗಿ ಜಾಮೀನು ಪಡೆದಿದ್ದ ಏಳು ಮಂದಿ ಆರೋಪಿಗಳ ಪೈಕಿ ಇಬ್ಬರಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ