Breaking News

ಹಣದ ಆಸೆಗೆ ಮಾಲೀಕನನ್ನೇ ಹತ್ಯೆ ಮಾಡಿದ್ದ ಮೂವರು ಆರೋಪಿಗಳನ್ನು ಬನವಾಸಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

Spread the love

ಶಿರಸಿ(ಉತ್ತರ ಕನ್ನಡ): ಹಣದ ಆಸೆಗಾಗಿ ಕೆಲಸ ನೀಡಿದ ಮಾಲೀಕನನ್ನೇ ಬರ್ಬರವಾಗಿ ಹತ್ಯೆ ಮಾಡಿದ್ದ ಮೂವರು ಆರೋಪಿಗಳನ್ನು ಶಿರಸಿಯ ಬನವಾಸಿ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆ ನಡೆದ 48 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಅಪರಿಚಿತ ವ್ಯಕ್ತಿಯ ಶವ ಶಿರಸಿಯ ವಡ್ಡಿನಕೊಪ್ಪ ಅರಣ್ಯ ಭಾಗದಲ್ಲಿ ಪತ್ತೆಯಾಗಿತ್ತು. ಕೊಲೆ ಎಂದು ಪ್ರಾಥಮಿಕ ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ನಂತರ ತನಿಖೆ ಕೈಗೊಂಡ ಬನವಾಸಿ ಠಾಣೆ ಪೊಲೀಸರು ಕೊಲೆಯಾದ ವ್ಯಕ್ತಿಯ ಗುರುತು ಪತ್ತೆ ಹಚ್ಚಿ, ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ.

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹೊಸಗೆಜ್ಜೆಹಳ್ಳಿಯ ಅಶೋಕ ಗಿರಿಯಪ್ಪ ಉಪ್ಪಾರ (48) ಕೊಲೆಯಾದ ವ್ಯಕ್ತಿ. ಈತನ ಬಳಿಯೇ ಕೆಲಸ ಮಾಡಿಕೊಂಡಿದ್ದ ಕಿರಣ ಪರಶುರಾಮ ಸುರಳೇಶ್ವರ, ನಿರಂಜನ ಗೊವಿಂದಪ್ಪ ತಳವಾರ ಹಾಗೂ ಗುಡ್ಡಪ್ಪ ಅಲಿಯಾಸ್ ಗುಡ್ಯ ತಿಳುವಳ್ಳಿ ಬಂಧಿತ ಕೊಲೆ ಆರೋಪಿಗಳು. ಎಲ್ಲರೂ ಸಹ ಕೊಲೆಯಾದ ವ್ಯಕ್ತಿಯ ಗ್ರಾಮದವರೇ ಆಗಿದ್ದು, ಕೊಲೆ ರಹಸ್ಯವನ್ನು ಕೇವಲ ಎರಡೇ ದಿನಗಳಲ್ಲಿ ಪೊಲೀಸರು ಭೇದಿಸಿದ್ದಾರೆ.

 


Spread the love

About Laxminews 24x7

Check Also

ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟುವ ಸಲುವಾಗಿಯೇ ಅಕ್ಕಪಡೆ ರಚನೆ: ಲಕ್ಷ್ಮೀ ಹೆಬ್ಬಾಳಕರ್

Spread the loveಬೆಂಗಳೂರು: ಮಹಿಳೆಯರು ಹಾಗೂ ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಗಟ್ಟುವ ಸಲುವಾಗಿಯೇ ಅಕ್ಕಪಡೆ ರಚಿಸಲಾಗಿದ್ದು, ದಿನದಲ್ಲಿ 12 ಗಂಟೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ