ಗೋಕಾಕ: ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಲೋಕೋಪಯೋಗಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ವಿತರಿಸಿದರು.
ನಗರದ ಹಿಲ್ ಗಾರ್ಡನ್ ಕಛೇರಿಯಲ್ಲಿ ಯಮಕನಮರಡಿ ಮತಕ್ಷೇತ್ರದ ವಿಧಾನ ಸಭಾ ಮತಕ್ಷೇತ್ರದ ಅನುದಾನ ಅಡಿಯಲ್ಲಿ ಫಲಾನುಭವಿಗಳಿಗೆ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ವಿತರಿಸಿದರು.
ಈ ಸಂದರ್ಭದಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ ಹಾಗೂ ಅಂಗವಿಕಲ ಕಲ್ಯಾಣ ಅಧಿಕಾರಿ ನಾಮದೇವ ಬಿಲ್ಕರ ಹಾಗೂ ಅಧಿಕಾರಿಗಳು , ಕ್ಷೇತ್ರದ ಜನರು, ಹಿಲ್ ಗಾರ್ಡನ್ ಸಿಬ್ಬಂದಿಗಳು ಉಪಸ್ಥಿತರಿದ್ದರು.