ಕೋಲಾರ: ಪ್ರೀತಿಸಲು ನಿರಾಕರಿಸಿದ ಹಿನ್ನೆಲೆ ಪಾಗಲ್ ಪ್ರೇಮಿಯೊಬ್ಬ ಕಾಲೇಜು ವಿದ್ಯಾರ್ಥಿನಿ ಮೇಲೆ ಬ್ಲೇಡ್ ನಿಂದ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಕೆಜಿಎಫ್ನ ಚಾಂಪಿಯನ್ ರೀಫ್ ನಗರದಲ್ಲಿರುವ ಖಾಸಗಿ ಕಾಲೇಜು ಕ್ಯಾಂಪಸ್ನಲ್ಲಿ ನಡೆದಿದೆ.
ದ್ವಿತೀಯ ವರ್ಷದ ಮೆಕಾನಿಕಲ್ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ಪ್ರೀತಮ್ ಪ್ರಭು ಎಂಬ ಯುವಕ, ಪ್ರಥಮ ವರ್ಷದ ಮೆಕಾನಿಕಲ್ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಗೆ ಪ್ರೀತಿಸುವಂತೆ ಪೀಡಿಸುತ್ತಿದ್ದ. ಅದರಂತೆ ಇಂದು ಸಹ ಆಕೆಯನ್ನು ಹಿಂಬಾಲಿಸಿಕೊಂಡು ಬಂದು ಪ್ರೀತಿ ಮಾಡುವಂತೆ ಒತ್ತಾಯಿಸಿದ್ದ.
ಆದರೆ ವಿದ್ಯಾರ್ಥಿನಿ ಪ್ರೀತಿಯನ್ನು ನಿರಾಕರಿಸಿದ್ದಳು. ಇದರಿಂದ ಕೋಪಗೊಂಡ ಯುವಕ ವಿದ್ಯಾರ್ಥಿನಿಯ ಕುತ್ತಿಗೆಗೆ ಬ್ಲೇಡ್ ನಿಂದ ಇರಿದಿದ್ದಾನೆ. ಗಾಯಗೊಂಡ ವಿದ್ಯಾರ್ಥಿನಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ರವಾನಿಸಲಾಗಿದೆ. ಸದ್ಯ ವಿದ್ಯಾರ್ಥಿನಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂಬ ಮಾಹಿತಿ ಸಿಕ್ಕಿದೆ. ಹಲ್ಲೆಗೊಳಗಾಗಿರುವ ವಿದ್ಯಾರ್ಥಿನಿ ಮೂಲತಃ ಬೆಂಗಳೂರಿನವಳಾಗಿದ್ದು, ವಿದ್ಯಾಭ್ಯಾಕ್ಕಾಗಿ ಕೆಜಿಎಫ್ನಲ್ಲಿರುವ ತನ್ನ ಚಿಕ್ಕಪ್ಪನ ಮನೆಯಲ್ಲಿ ನೆಲೆಸಿದ್ದಳು. ಘಟನಾ ಸ್ಥಳಕ್ಕೆ ಉರಿಗಾಂ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.