Breaking News

ಸನಾತನ ಧರ್ಮದ ಕುರಿತು ಮತ್ತೊಮ್ಮೆ ಅವಹೇಳನಕಾರಿಯಾಗಿ ಮಾತಾಡಿದ ಉದಯನಿಧಿ!

Spread the love

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಪುತ್ರ, ಅಲ್ಲಿನ ಸಚಿವ ಉದಯನಿಧಿ ಸ್ಟಾಲಿನ್ ಇದೀಗ ಇನ್ನೊಮ್ಮೆ ಸನಾತನ ಧರ್ಮದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಈ ಮೂಲಕ ಅವರು ಮತ್ತೊಮ್ಮೆ ಹಿಂದೂಗಳ ಕೆಂಗಣ್ಣಿಗೆ ಗುರಿ ಆಗುವಂತಾಗಿದೆ.

ಜನ್ಮದಿನ ಆಚರಿಸಿಕೊಳ್ಳುವವರಿಗೆ ವಂಡರ್ಲಾದಲ್ಲಿ ಉಚಿತ ಟಿಕೆಟ್​; ಇಲ್ಲಿದೆ ವಿವರ..

ಸನಾತನ ಧರ್ಮ ಡೆಂಘಿ-ಮಲೇರಿಯಾ ಇದ್ದ ಹಾಗೆ ಎಂದು ಕೆಲವು ದಿನಗಳ ಹಿಂದೆ ಹೇಳಿದ್ದ ಉದಯನಿಧಿ, ಆ ಬಳಿಕ ಅದನ್ನು ಸಮರ್ಥಿಸಿಕೊಂಡಿದ್ದರು. ಸನಾತನ ಧರ್ಮದ ಕುರಿತು ಉದಯನಿಧಿ ಹೀಗೆ ಅವಹೇಳನಕಾರಿಯಾಗಿ ಮಾತನಾಡಿದ್ದರ ಬಗ್ಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

ಉದಯನಿಧಿಯ ಅವಹೇಳನಕಾರಿ ಹೇಳಿಕೆಯನ್ನು ಅನೇಕ ನಾಯಕರು ಖಂಡಿಸಿದ್ದರು. ಮಾತ್ರವಲ್ಲ ಹಿಂದೂಪರ ಸಂಘಟನೆಗಳು ಪ್ರತಿಭಟನೆಯನ್ನೂ ನಡೆಸಿದ್ದವು. ಅದಾಗ್ಯೂ ಉದಯನಿಧಿ ಇನ್ನೊಮ್ಮೆ ಸನಾತನ ಧರ್ಮದ ಬಗ್ಗೆ ಅಪಮಾನಕಾರಿಯಾಗಿ ಮಾತನಾಡಿದ್ದಾರೆ. ಸನಾತನ ಧರ್ಮವನ್ನು ನಿರ್ಮೂಲನೆಗೊಳಿಸಿದರೆ ಅಸ್ಪ್ರಶ್ಯತೆ ತೊಲಗುತ್ತದೆ ಎಂದು ಅವರು ಹೇಳಿದ್ದಾರೆ. ಮಾಧ್ಯಮದವರ ಜತೆ ಮಾತನಾಡುವಾಗ ಉದಯನಿಧಿ ಈ ರೀತಿ ಹೇಳಿದ್ದಾರೆ. 


Spread the love

About Laxminews 24x7

Check Also

ಸಿಟಿ ರವಿ ಪ್ರಕರಣ ಮುಗಿದ ಅಧ್ಯಾಯ:ಹೊರಟ್ಟಿ

Spread the loveಬೆಂಗಳೂರು, ಡಿಸೆಂಬರ್ 23: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಎಂಎಲ್​ಸಿ ಸಿಟಿ ರವಿ ಅವಾಚ್ಯ ಶಬ್ದ ಬಳಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ