Breaking News

ಡಾ ರಾಜ್ ಕುಮಾರ್ ಅಕಾಡೆಮಿ ಜೊತೆ ಸರ್ಕಾರ ಒಡಂಬಡಿಕೆ : ವಿದ್ಯಾರ್ಥಿಗಳ ವಿಕಾಸವೇ ನಮ್ಮ ಮುಖ್ಯ ಗುರಿ.. ಸಚಿವ ಬಿ ನಾಗೇಂದ್ರ

Spread the love

ಬೆಂಗಳೂರು : ಡಾ. ರಾಜ್ ಕುಮಾರ್ ಅವರ ಇಡೀ ಕುಟುಂಬ ಸಮಾಜ ಸೇವೆಯ ಜೊತೆಗೆ ಶಿಕ್ಷಣದ ಮೌಲ್ಯಗಳನ್ನು ಹೆಚ್ಚಿಸಲು ರಾಜ್​ಕುಮಾರ್ ಅಕಾಡೆಮಿಯನ್ನು ಹುಟ್ಟುಹಾಕಿದೆ.

ಇಂತಹ ಸಂಸ್ಥೆಯೊಂದಿಗೆ ನಾವು ಇಂದು ಒಡಂಬಡಿಕೆ ಮಾಡಿಕೊಂಡಿದ್ದು ಬಹಳ ಸಂತಸ ತಂದಿದೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ ನಾಗೇಂದ್ರ ಹೇಳಿದರು.

ವಿಕಾಸಸೌಧದಲ್ಲಿ ಇಂದು ರಾಜ್ಯ ಎನ್‌ಎಸ್‌ಎಸ್ ಕೋಶ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಡಾ. ರಾಜ್​ಕುಮಾರ್ ಅಕಾಡೆಮಿಯ ನಡುವೆ ಹೊಸ ಒಡಂಬಡಿಕೆ ನಡೆಯಿತು. ಇದರ ಪ್ರಕಾರ, ವಿಶ್ವವಿದ್ಯಾಲಯ / ನಿರ್ದೇಶನಾಲಯಗಳಲ್ಲಿ ಲರ್ನಿಂಗ್ ಆಪ್ ಮತ್ತು ಉಚಿತ ತರಬೇತಿಯನ್ನು ಅನುಷ್ಠಾನಗೊಳಿಸಿ ಯುಪಿಎಸ್ ಸಿ ಮತ್ತು ಕೆ ಪಿ ಎಸ್ ಸಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತದೆ.

ಈ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ನಾಗೇಂದ್ರ, ರಾಷ್ಟ್ರೀಯ ಸೇವಾ ಯೋಜನೆಯ ರಾಜ್ಯದ 65 ವಿಶ್ವವಿದ್ಯಾಲಯ ಹಾಗೂ 4 ನಿರ್ದೇಶನಾಲಯಗಳ ಸುಮಾರು 6.40ಲಕ್ಷಕ್ಕೂ ಹೆಚ್ಚು ಸ್ವಯಂಸೇವಕ / ಸೇವಕಿಯರಿಗೆ ಮತ್ತು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲು ಇದು ಸಹಕಾರಿಯಾಗಿದೆ. ಇದರ ಜೊತೆಗೆ ಲರ್ನಿಂಗ್ ಆಪ್​ನಿಂದ ಆನ್ಲೈನ್ ಮೂಲಕ ತಮಗೆ ಬೇಕಾದ ಮಾಹಿತಿಯನ್ನು ಪಡೆಯಬಹುದು ಎಂದು ಹೇಳಿದರು.

ನಾಡು ಕಂಡ ನಟ ಡಾ. ರಾಜ್​ಕುಮಾರ್ ಅವರು ತಮ್ಮ ನಟನೆ ಮತ್ತು ಸಮಾಜ ಸೇವೆಯಿಂದ ಹೆಸರುವಾಸಿಯಾಗಿದ್ದರು. ಈ ಮೂಲಕ ರಾಜ್ಯ ಹಾಗೂ ದೇಶಕ್ಕೆ ಮಾದರಿಯಾಗಿದ್ದರು. ಅದೇ ಮಾರ್ಗದಲ್ಲಿ ಇಡೀ ಕುಟುಂಬ ಸಾಗುತ್ತಿದ್ದು, ಸಮಾಜ ಸೇವೆ ಮಾಡುವ ಉದ್ದೇಶದಿಂದ ಡಾ. ರಾಜ್​ಕುಮಾರ್ ಅವರ ಹೆಸರಿನಲ್ಲಿ ಒಂದು ವಿದ್ಯಾವಿಕಾಸ ಸಂಸ್ಥೆಯಲ್ಲಿ ಸ್ಥಾಪಿಸಿದ್ದಾರೆ. ಈ ಸಂಸ್ಥೆಯಿಂದ ಹಲವರು ಐಎಎಸ್ ಮತ್ತು ಐಪಿಎಸ್ ಆಗಿದ್ದಾರೆ. ಇಂತಹ ಸಂಸ್ಥೆಯ ಜೊತೆಗೆ ನಮ್ಮ ಇಲಾಖೆ ಒಡಂಬಡಿಕೆ ಮಾಡಿಕೊಂಡಿದ್ದು ಸಂತೋಷ ತಂದಿದೆ. ನಮ್ಮ ಸರ್ಕಾರ ಸದಾ ಡಾ. ರಾಜ್ ಕುಮಾರ್ ಅಕಾಡೆಮಿ ಮತ್ತು ಕುಟುಂಬ ವರ್ಗದ ಋಣಿಯಾಗಿರುತ್ತದೆ ಎಂದು ಹೇಳಿದರು.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ