Breaking News

ಮೊಬೈಲ್ ಸಿಗ್ನಲ್‍ಗಾಗಿ ಗುಡ್ಡ ಏರಿದವನಿಗೆ ಗುಂಡೇಟು!

Spread the love

ಕಾರವಾರ: ಮೊಬೈಲ್ ಸಿಗ್ನಲ್‍ಗಾಗಿ ಗುಡ್ಡ ಏರಿ ಕುಳಿತಿದ್ದ ಯುವಕ ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡ ಘಟನೆ ಸಿದ್ದಾಪುರ ತಾಲೂಕಿನ ಕವಲಕೊಪ್ಪ ಗ್ರಾಮದ ಗೊಂಟನಾಳದಲ್ಲಿ ನಡೆದಿದೆ.

ಕುಂಬಾರಕುಳಿ ಮೂಲದ ಹಾಲಿ ಗೊಂಟನಾಳದ ನಿವಾಸಿ ಪ್ರದೀಪ್ ನಾರಾಯಣ್ ಗೌಡ (19) ಗಾಯಗೊಂಡ ಯುವಕ. ನಾರಾಯಣ್ ಗೌಡ ಮೊಬೈಲ್ ನೆಟ್‍ವರ್ಕ್ ಸಂಪರ್ಕ ಅರಸಿ ಗುಡ್ಡ ಏರಿ ಕುಳಿತು ಮೊಬೈಲ್ ನೋಡುತ್ತಾ ಕುಳಿತಿದ್ದರು. ಇದೇ ವೇಳೆ ಚಟವುಳ್ಳ ಕವಲಕೊಪ್ಪ ಗೊಂಟನಾಳದ ರಾಮಾ ಕನ್ನಾ ನಾಯ್ಕ ಕಾಡು ಪ್ರಾಣಿಗಳನ್ನು ಬೇಟೆಯಾಡುತ್ತಿದ್ದ. ಪ್ರದೀಪ್ ಅವರನ್ನು ಪ್ರಾಣಿ ಎಂದು ರಾಮಾ ಕನ್ನಾ ಗುಂಡು ಹಾರಿಸಿದ್ದಾನೆ.

ಆರೋಪಿ

ಯುವಕ ಪ್ರದೀಪ್ ಅವರ ಬಲ ಮೊಣಕಾಲು ಹಾಗೂ ಹೊಟ್ಟೆಯ ಭಾಗಕ್ಕೆ ಗುಂಡು ತಗುಲಿ ಗಾಯಗೊಂಡಿದ್ದಾರೆ. ಈ ಸಂಬಂಧ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.


Spread the love

About Laxminews 24x7

Check Also

ಪ್ರೇಮ ವಿಫಲ ಅಗಿದೆ ಎಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಹಳಿಯಾಳದ ಪ್ರೇಮಿಗಳು

Spread the loveಪ್ರಿಯತಮೆಗೆ ಬೇರೆ ಮದುವೆ ಮಾಡಿದ್ದ ಪೋಷಕರು : ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು ಹಳಿಯಾಳದ ಪ್ರೇಮಿಗಳಿಬ್ಬರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ