ನವದೆಹಲಿ: ದೆಹಲಿಯಲ್ಲಿ ಇಂದು (ಶುಕ್ರವಾರ) ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ.
ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಔಪಚಾರಿಕ ಮಾತುಕತೆ ನಡೆಸುವ ಮೂಲಕ ರಾಜ್ಯದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯನ್ನು ಖಚಿತ ಪಡಿಸಿದ್ದಾರೆ. ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಗೋವಾ ಸಿಎಂ ಪ್ರಮೋದ್ ಸಾವಂತ್ ಹಾಗೂ ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಉಪಸ್ಥಿತರಿದ್ದರು.
ಯಾವುದೇ ಬೇಡಿಕೆ ಇಟ್ಟಿಲ್ಲ- ಹೆಚ್ಡಿಕೆ: ಇಂದು ನಾವು ಬಿಜೆಪಿಯೊಂದಿಗೆ ಕೈಜೋಡಿಸುವ ಬಗ್ಗೆ ಔಪಚಾರಿಕವಾಗಿ ಚರ್ಚೆ ಮಾಡಿದ್ದೇವೆ. ನಾವು ಪ್ರಾಥಮಿಕ ವಿಷಯಗಳನ್ನು ಔಪಚಾರಿಕವಾಗಿ ಚರ್ಚಿಸಿದ್ದೇವೆ. ಆದರೆ, ಅವರ ಮುಂದೆ ಯಾವುದೇ ಬೇಡಿಕೆ ಇಟ್ಟಿಲ್ಲ ಎಂದು ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
”ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ ಭಾಗವಾಗಲು ಜೆಡಿಎಸ್ ನಿರ್ಧರಿಸಿರುವುದು ನನಗೆ ಖುಷಿ ತಂದಿದೆ. ನಾವು ಅವರನ್ನು ಎನ್‌ಡಿಎಗೆ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇವೆ. ಇದು ಎನ್‌ಡಿಎ ಮತ್ತು “ಹೊಸ ಭಾರತ, ಬಲಿಷ್ಠ ಭಾರತ” ಎಂಬ ಪ್ರಧಾನಿಯವರ ದೃಷ್ಟಿಯನ್ನು ಮತ್ತಷ್ಟು ಬಲಪಡಿಸುತ್ತದೆ” ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಸಾಮಾಜಿಕ ಜಾಲತಾಣವಾದ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
2019ರ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿತ್ತು. ಆದರೆ, ಕರ್ನಾಟಕದ 28 ಸ್ಥಾನಗಳಲ್ಲಿ ಬಿಜೆಪಿ 25 ಸ್ಥಾನಗಳನ್ನು ಗೆದ್ದುಕೊಂಡಿದ್ದರಿಂದ ಮತ್ತು ಮಂಡ್ಯ ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಸ್ವತಂತ್ರ ಅಭ್ಯರ್ಥಿಯೂ ಗೆಲುವು ಸಾಧಿಸಿದ್ದರಿಂದ ಪಕ್ಷಗಳು ಹೀನಾಯವಾಗಿ ಸೋತಿದ್ದವು. ರಾಜ್ಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಎರಡರೊಂದಿಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಮೇ ತಿಂಗಳಲ್ಲಿ ನಡೆದ ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ 19 ಸ್ಥಾನಗಳನ್ನು ಗೆದ್ದಿದೆ. ಇದು ಪಕ್ಷದ ಇತಿಹಾಸದಲ್ಲಿ ಪಡೆದ ಅತ್ಯಂತ ಕಡಿಮೆ ಸ್ಥಾನಗಳಾಗಿವೆ.