Breaking News

ಕಾವೇರಿ ವಿವಾದದ ಬಗ್ಗೆ ಅಮಿತ್ ಶಾ ಜೊತೆ ಚರ್ಚಿಸಿರುವೆ,

Spread the love

ದೇವನಹಳ್ಳಿ(ಬೆಂ.ಗ್ರಾಮಂತರ): “ನಾನು ಕೂಡ ಮಂಡ್ಯಗೆ ಹೋಗುತ್ತಿದ್ದೇನೆ. ರೈತರ ಹೋರಾಟಕ್ಕೆ ಬಿಜೆಪಿ ಮತ್ತು ಜೆಡಿಎಸ್ ಬೆಂಬಲ ಕೊಟ್ಟಿದೆ.

ಈಗ ನಾನು ರೈತರ ಹೋರಾಟಕ್ಕೆ ಸಾಂಕೇತಿಕವಾಗಿ ಬೆಂಬಲ ಸೂಚಿಸಲು ಹೊರಟಿದ್ದೇನೆ ಎಂದು ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿಮಂಡ್ಯ ಬಂದ್​ ವಿಚಾರಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ.

ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಜೊತೆ ಜನತಾ ದಳ (ಜಾತ್ಯತೀತ) ಮೈತ್ರಿ ಮಾಡಿಕೊಂಡ ಬಳಿಕ ಕುಮಾರಸ್ವಾಮಿ ಮತ್ತು ನಿಖಿಲ್​ ಕುಮಾರಸ್ವಾಮಿ ರಾಜ್ಯಕ್ಕೆ ವಾಪಸ್​ ಆಗಿದ್ದಾರೆ. ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕ ಹೆಚ್‌.ಡಿ. ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಔಪಚಾರಿಕ ಮಾತುಕತೆ ನಡೆಸುವ ಮೂಲಕ ರಾಜ್ಯದಲ್ಲಿ ಜೆಡಿಎಸ್​ ಹಾಗೂ ಬಿಜೆಪಿ ಮೈತ್ರಿಯನ್ನು ಖಚಿತ ಪಡಿಸಿದ್ದರು. ನಿನ್ನೆ ನಡೆದ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಗೋವಾ ಸಿಎಂ ಪ್ರಮೋದ್ ಸಾವಂತ್ ಉಪಸ್ಥಿತರಿದ್ದರು.

ಮೈತ್ರಿ ಮಾತುಕತೆ ಮುಗಿಸಿ ಕುಮಾರಸ್ವಾಮಿ ಮತ್ತು ನಿಖಿಲ್​ ಕುಮಾರಸ್ವಾಮಿ ದೆಹಲಿಯಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಬಂದಿಳಿದರು. ಏರ್ ಇಂಡಿಯಾ ವಿಮಾನದ ಮೂಲಕ ಆಗಮಿಸಿರುವ ತಂದೆ ಮಗನನ್ನು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಮುನಿರತ್ನ ಸ್ವಾಗತಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಅಮಿತ್ ಶಾ ಹಾಗೂ ನಡ್ಡಾ ಜೊತೆ ನಡೆದ ಚರ್ಚೆಗಳ ಬಗ್ಗೆ ದೆಹಲಿಯಲ್ಲಿ ಹೇಳಿದ್ದೇನೆ. ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ ಅತ್ಯಂತ ಸೌಹಾರ್ದಯುತವಾಗಿ ನಡೆದಿದೆ. ಲಾಂಗ್ ರಿಲೇಷನ್ ಶಿಪ್ ಮುಂದುವರೆಸುವ ಬಗ್ಗೆ ಚರ್ಚೆಗಳು ನಡೆದಿವೆ ಎಂದರು.

ನಮ್ಮಲ್ಲಿ ಸೀಟು ಹೊಂದಾಣಿಕೆ ಬಗ್ಗೆ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ. ನಾಡಿನ ಜನತೆ ಹಿತರಕ್ಷಣೆ ದೃಷ್ಟಿಯಿಂದ ಕೆಲ ವಿಷಯಗಳು ಸಾರ್ವಜನಿಕವಾಗಿ ಹೇಳಲು ಸಾಧ್ಯವಿಲ್ಲ. ಕೆಲವು ವಿಷಯಗಳಲ್ಲಿ ನಮ್ಮ ನಡುವೆ ಆಗಿರುವ ಸಮಸ್ಯೆಗಳ ಪರಿಹಾರಗಳ ಬಗ್ಗೆ ಚಿಂತನೆ ಮಾಡಿದ್ದೇವೆ. ಆ ಹಿನ್ನೆಲೆಯಲ್ಲಿ ಮೈತ್ರಿ ಮುಂದುವರೆಸಬೇಕು ಎಂಬುದು ನಮ್ಮ ಪ್ರಮುಖ ಅಂಶ. ನಮ್ಮ ನಡುವೆ ಯಾವುದೇ ರೀತಿಯ ಪ್ರತಿಷ್ಠೆಗಳಿಲ್ಲ. ಅವರು ಸಹ ಹಳೆಯ ಹಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ ಎಂದು ತಿಳಿಸಿದರು.


Spread the love

About Laxminews 24x7

Check Also

ಕಾಗವಾಡ ತಾ.ಶೇಡಬಾಳದ ಬಿಎಸ್ಎಫ್ ಯೋಧ ಅನಾರೋಗ್ಯದಿಂದ ನಿಧನ

Spread the love ಕಾಗವಾಡ ತಾ.ಶೇಡಬಾಳದ ಬಿಎಸ್ಎಫ್ ಯೋಧ ಅನಾರೋಗ್ಯದಿಂದ ನಿಧನ ಬಿಎಸ್ಎಫ್ ಯೋಧ ದಗಡು ಪೂಜಾರಿ ರಜೆಯ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ