Breaking News

ಉಪನೋಂದಣೆ ಕಚೇರಿಗಳ ಕೆಲಸದ ಅವಧಿ ವಿಸ್ತರಣೆ: ಬೆಳಿಗ್ಗೆ 8ರಿಂದ ರಾತ್ರಿ 8ರವರೆಗೆ ಸೇವೆ ಲಭ್ಯ

Spread the love

ಬೆಂಗಳೂರು: ಸಾರ್ವಜನಿಕ ಹಿತದೃಷ್ಟಿಯಿಂದ ರಾಜ್ಯದ ಎಲ್ಲಾ ಉಪನೋಂದಣಿ ಕಚೇರಿಗಳ ಕೆಲಸದ ಅವಧಿಯನ್ನು ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ವಿಸ್ತರಿಸಲಾಗಿದೆ.

ಸೆ.23 ರಿಂದ 30ರವರೆಗೆ ಈ ಆದೇಶ ಜಾರಿಗೆಯಲ್ಲಿರಲಿದ್ದು, ಒಂದು ವಾರ ಸಾರ್ವಜನಿಕರು 12 ಗಂಟೆಗಳ ಕಾಲ ಸೇವೆ ಪಡೆಯಬಹುದಾಗಿದೆ.

ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿಯ (Valuation Committee) 2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿ ದರಗಳನ್ನು ಪರಿಷ್ಕರಣೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ನೋಂದಣಿಗೆ ಹಾಜರುಪಡಿಸುವ ದಸ್ತಾವೇಜುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳು ಇರುತ್ತವೆ. ಈ ಹಿನ್ನೆಲೆ ಉಪನೋಂದಣಿ ಕಚೇರಿಗಳ ಕೆಲಸದ ಅವಧಿಯನ್ನು ಸೆ.23 ರಿಂದ ಜಾರಿಗೆ ಬರುವಂತೆ ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ಕಾರ್ಯ ನಿರ್ವಹಿಸಲು ಕಚೇರಿ ಅವಧಿಯನ್ನು ವಿಸ್ತರಿಸಿ ಆದೇಶಿಸಲಾಗಿದೆ.

ಸೆಪ್ಟೆಂಬರ್ 23 ನಾಲ್ಕನೇ ಶನಿವಾರವದಂದೂ ಕೂಡ ಈ ಅವಧಿಯಲ್ಲಿ ಕಾರ್ಯ ನಿರ್ವಹಿಸಲಾಗುವುದು. ಈ ಕೆಲಸದ ಅವಧಿಯು ಸೆ.30 ರವರೆಗೆ ಮಾತ್ರ ಜಾರಿಯಲ್ಲಿರುತ್ತದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದು ಕೊಳ್ಳಬಹುದು ಎಂದು ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರಾದ ಬಿ.ಆರ್.ಮಮತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ