Breaking News

ಜೆಡಿಎಸ್ ಪಕ್ಷ ಎನ್‌ಡಿಎ ಮೈತ್ರಿಕೂಟಕ್ಕೆ ಸೇರಿದ ಬೆನ್ನಲ್ಲೇ ನಿಖಿಲ್ ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ.

Spread the love

ಬೆಂಗಳೂರು : ಜೆಡಿಎಸ್ ಪಕ್ಷ ಎನ್‌ಡಿಎ ಮೈತ್ರಿಕೂಟಕ್ಕೆ ಸೇರಿದ ಬೆನ್ನಲ್ಲೇ ನಿಖಿಲ್ ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ.

ನಗರದ ಡಾಲರ್ಸ್ ಕಾಲೋನಿ ನಿವಾಸಕ್ಕೆ ಆಗಮಿಸಿದ ನಿಖಿಲ್ ಕುಮಾರಸ್ವಾಮಿ, ಯಡಿಯೂರಪ್ಪ ಅವರಿಗೆ ಹೂಗುಚ್ಛ ನೀಡಿ, ಶಾಲು ಹೊದಿಸಿ ಗೌರವಿಸಿದರು. ಆರ್.ಆರ್ ನಗರ ಶಾಸಕ ಮುನಿರತ್ನ ನಿಖಿಲ್ ಗೆ ಸಾಥ್ ನೀಡಿದರು.

ಯಡಿಯೂರಪ್ಪ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನಿಖಿಲ್, ಎನ್‌ಡಿಎ ಮೈತ್ರಿಕೂಟಕ್ಕೆ ಜೆಡಿಎಸ್ ಬೆಂಬಲ ನೀಡಿದೆ. ಬಿಜೆಪಿ-ಜೆಡಿಎಸ್ ಜಂಟಿಯಾಗಿ ಲೋಕಸಭೆ ಚುನಾವಣೆ ಎದುರಿಸಲಿದೆ. ದೇವೇಗೌಡರು ರಾಜ್ಯದ ಹಿತದೃಷ್ಟಿಯಿಂದ ಈ ನಿರ್ಧಾರ ಮಾಡಿದ್ದಾರೆ. ರಾಜ್ಯಕ್ಕೆ ಯಡಿಯೂರಪ್ಪನವರ ಕೊಡುಗೆ ಅಪಾರ. ಹಿರಿಯರ ಆಶೀರ್ವಾದ ಪಡೆದುಕೊಳ್ಳುವುದು ನಮ್ಮ ಸಂಸ್ಕೃತಿ. ಹಾಗಾಗಿ, ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದೇನೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ 28 ಕ್ಕೆ 28 ಕ್ಷೇತ್ರಗಳನ್ನೂ ಗೆಲ್ಲಲಿದೆ ಎಂದರು.

ರಾಜಕೀಯದಲ್ಲಿ ಮತ್ತೆ ಸಕ್ರಿಯರಾಗುವ ಬಗ್ಗೆ ಮಾತನಾಡಿದ ನಿಖಿಲ್, ಜೆಡಿಎಸ್ ಪ್ರಾದೇಶಿಕ ಪಕ್ಷವನ್ನು ಅನೇಕರು ಶ್ರಮವಹಿಸಿ ಕಟ್ಟಿದ್ದಾರೆ. ನಮ್ಮ ನಾಯಕರು ಪಕ್ಷವನ್ನು ಮುನ್ನಡೆಸಿದ್ದಾರೆ. ಇದೀಗ ಯುವಕರು ಪಕ್ಷದ ಜವಾಬ್ದಾರಿ ಹೊತ್ತುಕೊಳ್ಳುವ ಅನಿವಾರ್ಯತೆ ಬಂದಿದೆ. ಹಾಗಾಗಿ, ನಾನು ಓಡಾಡುತ್ತಿದ್ದೇನೆ. ಪಕ್ಷ ಯಾವುದೇ ಜವಾಬ್ದಾರಿ ಕೊಟ್ಟರೂ ನಿರ್ವಹಿಸುತ್ತೇನೆ ಎಂದು ಹೇಳಿದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ