Breaking News

ಇದು ಸಾರಾಯಿ ಗ್ಯಾರಂಟಿ ಸರಕಾರ; ಹೆಂಡ್ತಿಗೆ ನೀಡಿದ ಹಣ ಗಂಡನಿಂದ ವಸೂಲಿ ಎಂದ ಬೊಮ್ಮಾಯಿ!

Spread the love

ಬೆಂಗಳೂರು: ಬರಗಾಲದಲ್ಲಿ ನೀರು ಕೊಡದಿರುವ ಸರ್ಕಾರ ಜನರಿಗೆ ಯಥೇಚ್ಛ ಸಾರಾಯಿ ಕುಡಿಸಲು ಮುಂದಾಗಿರುವುದು ದೊಡ್ಡ ದುರಂತ. ಇದು ಸಾರಾಯಿ ಗ್ಯಾರಂಟಿ (Arrack Guarantee) ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಆರೋಪಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆಯ ಮೂಲಕ ಕೊಟ್ಟ ಹಣವನ್ನು ಇದರ ಮೂಲಕ ವಸೂಲಿ ಮಾಡಲು ಮುಂದಾಗಿದೆ ಎಂದಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ರಾಜ್ಯ ಸರ್ಕಾರ ಪಂಚಾಯತಿ ಮಟ್ಟದಲ್ಲಿ ಮದ್ಯದಂಗಡಿ (Arrack Shops at panchayat level) ತೆರೆಯಲು ಮುಂದಾಗಿರುವುದು ಸರ್ಕಾರದ ನೈತಿಕ ದಿವಾಳಿತನವನ್ನು ತೋರಿಸುತ್ತದೆ. ಒಂದೆಡೆ ಗ್ಯಾರಂಟಿ ಹೆಸರಲ್ಲಿ ಮಹಿಳೆಯರಿಗೆ 2000 ರೂ. ನೀಡುವುದಾಗಿ ಹೇಳುವ ಸರ್ಕಾರ ಅದೇ ಹಣವನ್ನು ಅವರ ಗಂಡಂದಿರಿಂದ ವಸೂಲಿ ಮಾಡಲು ಮದ್ಯ ಮಾರಾಟದ ಮಾರ್ಗ ಹುಡುಕಿಕೊಂಡಂತಿದೆ. ಹೆಂಡತಿಯ ದುಡ್ಡು ಗಂಡಂದಿರಿಂದ ಪಡೆಯುವ ಮನಿ ರಿಟರ್ನ್ ಪಾಲಿಸಿ ಹಾಕಿಕೊಂಡ ಹಾಗಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ತಡೆಯಲು ಸರ್ಕಾರಿ ಮದ್ಯದಂಗಡಿ ತೆರೆಯುತ್ತಿರುವುದಾಗಿ ಅಬಕಾರಿ ಸಚಿವರು ಹೇಳಿರುವುದು ಹಾಸ್ಯಾಸ್ಪದವಾಗಿದೆ. ಅಕ್ರಮ ತಡೆಯಲಾಗದಿದ್ದರೆ ನಿಮ್ಮ ಇಲಾಖೆ ಮಾಡುವುದಾದರೂ ಏನು ಎಂದು ಪ್ರಶ್ನಿಸಿದ್ದಾರೆ.

ಗ್ಯಾರೆಂಟಿ ಯೋಜನೆಯಲ್ಲಿ ಮನೆ ಯಜಮಾನಿ ಹುಡುಕುವ ಹೆಸರಲ್ಲಿ ಅತ್ತೆ ಸೊಸೆ ನಡುವೆ ಜಗಳ ಹಚ್ಚಿರುವ ಸರ್ಕಾರ ಇನ್ನು ಸಾರಾಯಿ ಕುಡಿಯಲು ಹಣಕ್ಕಾಗಿ ಗಂಡ ಹೆಂಡಿರ ನಡುವೆ ಜಗಳ ಹಚ್ಚಲು ಮುಂದಾಗಿದೆ. ಸರ್ಕಾರ ಆದಾಯ ಗಳಿಸಲು ಮದ್ಯ ಮಾರಾಟ ಮೊರೆ ಹೋದರೆ, ಸರ್ಕಾರದ ಗ್ಯಾರೆಂಟಿ ಪಡೆಯುವ ಮಹಿಳೆಯರೇ ಇವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಮೃತ ಸರ್ಕಾರಿ ವೈದ್ಯಾಧಿಕಾರಿ ಕೊಠಡಿಯಲ್ಲಿ ಮಾಟಮಂತ್ರ: ಸಾವಿನ ಸುತ್ತ ಅನುಮಾನದ ಹುತ್ತ

Spread the loveಕೋಲಾರ, ಜುಲೈ 07: ಜಿಲ್ಲೆ ಮಾಲೂರು ತಾಲ್ಲೂಕಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ತಮ್ಮ ಉತ್ತಮ ಸೇವೆಯಿಂದಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ