Home / ರಾಜಕೀಯ / ಬೆಳಗಾವಿ: ಲಾರಿ-ಕ್ರೂಸರ್ ನಡುವೆ ಡಿಕ್ಕಿ; ಸಾವಿನ ಸಂಖ್ಯೆ ಏಳಕ್ಕೆ ಏರಿಕೆ

ಬೆಳಗಾವಿ: ಲಾರಿ-ಕ್ರೂಸರ್ ನಡುವೆ ಡಿಕ್ಕಿ; ಸಾವಿನ ಸಂಖ್ಯೆ ಏಳಕ್ಕೆ ಏರಿಕೆ

Spread the love

ಬೆಳಗಾವಿ : ಸೆಪ್ಟೆಂಬರ್ 15ರಂದು ಅಥಣಿ ತಾಲೂಕಿನ ಬಡಚಿ ಗ್ರಾಮದ ಒಂದೇ ಕುಟುಂಬದವರಿದ್ದ ಕ್ರೂಸರ್ ವಾಹನಕ್ಕೆ ಲಾರಿ ಡಿಕ್ಕಿ ಸಂಭವಿಸಿ ಸ್ಥಳದಲ್ಲಿ ಐದು ಜನ ಮೃತಪಟ್ಟಿದ್ದರು.

ಇವತ್ತು ಮತ್ತೆ ಬಸವರಾಜ್ ಗಿರಿಮಲ್ಲ ಆಜೂರ (32) ಎಂಬುವವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಡಚಿ ಗ್ರಾಮದ ಆಜೂರ್ ಕುಟುಂಬಸ್ಥರು ತಿರುಪತಿ ತಿಮ್ಮಪ್ಪನ ದರ್ಶನ ಪಡೆದುಕೊಂಡು ಸ್ವ ಗ್ರಾಮಕ್ಕೆ ಆಗಮಿಸುವ ವೇಳೆ ತೆಲಂಗಾಣದ ಸೂರ್ಯಪೇಟ ಜಿಲ್ಲೆಯ ಮಟ್ಟಮ್ ಪಲ್ಲಿಯ ಕಡಪ-ಚಿತ್ತೂರು ರಸ್ತೆಯಲ್ಲಿ ಅಪಘಾತ ಸಂಭವಿಸಿತ್ತು. ಪರಿಣಾಮ ಸ್ಥಳದಲ್ಲೇ ಐವರು ಮೃತರಪಟ್ಟಿದ್ದರು. 11 ಜನರಿಗೆ ತೀವ್ರ ಗಾಯಗಳಾಗಿದ್ದವು. ಬಳಿಕ ಗಾಯಾಳುಗಳು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕಸ್ತೂರಿ ಶೇಖರ ಆಜೂರ (35) ಆ ದಿನದಂದೇ ಸಾವನ್ನಪ್ಪಿದ್ದರು.


Spread the love

About Laxminews 24x7

Check Also

ಸರ್ಕಾರ ಜನರನ್ನು ನೇರವಾಗಿ ಸುಲಿಗೆ ಮಾಡುತ್ತಿದೆ.: ಬಿ.ಸಿ.ಪಾಟೀಲ್ ಆಕ್ರೋಶ

Spread the love ಹಾವೇರಿ: ರಾಜ್ಯ ಸರಕಾರ ಬೆಲೆ ಏರಿಕೆ ಮಾಡಿದ್ದು ದೊಡ್ಡ ಆಘಾತವಾಗಿದೆ. ನೇರವಾಗಿ ರಾಬರಿ ಮತ್ತು ಡಕಾಯತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ