Breaking News

ಬಿಜೆಪಿ-ಜೆಡಿಎಸ್​ ಮೈತ್ರಿ: ಜಾತ್ಯತೀತತೆ ಪ್ರಶ್ನಿಸಿದವರಿಗೆ ಹೆಚ್.​ಡಿ.ದೇವೇಗೌಡರಿಂದ ಖಡಕ್ ಉತ್ತರ!

Spread the love

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಜೆಡಿಎಸ್​, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಇದರ ಬೆನ್ನಲ್ಲೇ ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಹೆಚ್.​ಡಿ.ದೇವೇಗೌಡರ ಜಾತ್ಯತೀತ ನಿಲುವಿನ (ಸೆಕ್ಯುಲರ್) ಬಗ್ಗೆ ಹಲವರು ಪ್ರಶ್ನೆ ಮಾಡುತ್ತಿದ್ದಾರೆ. ಈ ಕುರಿತಾಗಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೌಡರು ಖಡಕ್ ಉತ್ತರ ನೀಡಿದರು.

ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಜಂಟಿ ಸುದ್ದಿಗೋಷ್ಠಿ ನಡೆಸಿದರು. ದೇವೇಗೌಡರು ಮಾತನಾಡುತ್ತಾ, “ನಾವು ಕಿಂಚಿತ್ತೂ ಕೂಡಾ ಸೆಕ್ಯುಲರ್ ವಿಚಾರ ತೆಗೆದು ಹಾಕುವ ಮನಸ್ಸು ಮಾಡಿಲ್ಲ. ಮುಂದೆಯೂ ಮಾಡುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

ಕುಮಾರಸ್ವಾಮಿ ಬಿಜೆಪಿ ನಾಯಕರನ್ನು ಭೇಟಿ ಮಾಡುವ ಮೊದಲು, ನಾನು ಗೃಹ ಸಚಿವ ಅಮಿತ್ ಶಾ ಬಳಿ ಚರ್ಚೆ ಮಾಡಿದ್ದೇನೆ. ಕದ್ದುಮುಚ್ಚಿ ಮಾತನಾಡುವ ಅಗತ್ಯ ಇಲ್ಲ. ಕರ್ನಾಟಕ ಪರಿಸ್ಥಿತಿಯೇನು ಅಂತ ಅಮಿತ್​ ಶಾ ಅವರ ಬಳಿ ಎಲ್ಲಾ ವಿಚಾರ ಮಾತಾಡಿದ್ದೇನೆ. ನಾವು ಯಾರಿಗೂ ಹೆದರುವ ಅವಶ್ಯಕತೆ ಇಲ್ಲ. ಕಳೆದ 60 ವರ್ಷಗಳ ನನ್ನ ಹೋರಾಟದಲ್ಲಿ ಯಾವುದೇ ಸಮುದಾಯಕ್ಕೂ ಈ ಪಕ್ಷದಿಂದ ಅನ್ಯಾಯ ಆಗಲು ಬಿಟ್ಟಿಲ್ಲ ಎಂದರು.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ