Breaking News

ಬೆಳಗಾವಿಯಲ್ಲಿ ಇಂದು ಸಾರ್ವಜನಿಕ‌ ಅದ್ಧೂರಿಯಾಗಿ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ

Spread the love

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಇಂದು ಸಾರ್ವಜನಿಕ‌ ಅದ್ಧೂರಿಯಾಗಿ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ನಡೆಯಲಿದೆ.

ಇದಕ್ಕೆ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಮತ್ತು ಮಹಾನಗರ ಪಾಲಿಕೆ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ. ಈ ನಿಟ್ಟಿನಲ್ಲಿಂದು ನಗರದಲ್ಲಿ ಪೊಲೀಸರು ಬುಧವಾರ ಪಥ ಸಂಚಲನ ನಡೆಸಿದರು. ನಗರ ಪೊಲೀಸ್ ಆಯುಕ್ತ ಎಸ್ ಎನ್ ಸಿದ್ದರಾಮಪ್ಪ ಅವರ ನೇತೃತ್ವದಲ್ಲಿ ನಗರದ ಚನ್ನಮ್ಮ ವೃತ್ತದಿಂದ ಆರಂಭವಾದ ಪಥ ಸಂಚಲನ ಶನಿವಾರ ಕೂಟ, ಗಣಪತಿ ಗಲ್ಲಿ, ಕಂಬಳಿಕೂಟ, ಮಾರುತಿ ಗಲ್ಲಿ, ಸಮಾದೇವಿ ಮಂದಿರ, ಎಂಡೆಕೂಟ, ಧರ್ಮವೀರ ಸಂಭಾಜಿವೃತ್ತ, ರಾಮಲಿಂಗಖಿಂಡ ಗಲ್ಲಿ, ಶನಿಮಂದಿರ, ಕಪಿಲೇಶ್ವರ ಮೇಲ್ಸೇತುವೆ ಸೇರಿ ಪ್ರಮುಖ ರಸ್ತೆಗಳಲ್ಲಿ ಜರುಗಿತು.

ನಗರ, ಜಿಲ್ಲೆ, ಹೊರ ಜಿಲ್ಲೆಗಳಿಂದಲೂ ಆಗಮಿಸಿದ್ದ ಪೊಲೀಸರು ಶಿಸ್ತಿನಿಂದ ಹೆಜ್ಜೆ ಹಾಕಿದರು. ರ‍್ಯಾಪಿಡ್ ಆಕ್ಷನ್​ ಫೋರ್ಸ್ ಸಿಬ್ಬಂದಿ ಪಥ ಸಂಚಲನದಲ್ಲಿ ಭಾಗವಹಿಸುವ ಮೂಲಕ ಎಲ್ಲರ ಗಮನ ಸೆಳೆದರು. ಈ ಮೂಲಕ ಶಾಂತಿಗೆ ಭಂಗ ತಂದರೆ ಹುಷಾರ್ ಎಂಬ ಎಚ್ಚರಿಕೆಯನ್ನು ಪೊಲೀಸರು ನೀಡಿದರು. ಡಿಸಿಪಿ ಪಿ.ವ್ಹಿ.ಸ್ನೇಹಾ, ಡಿಸಿಪಿ ರೋಹನ್ ಜಗದೀಶ ಸೇರಿ ಹಿರಿಯ ಅಧಿಕಾರಿಗಳು ಪಥ ಸಂಚಲನದಲ್ಲಿ ಭಾಗವಹಿಸಿದ್ದರು.

378 ಸಾರ್ವಜನಿಕ ಗಣೇಶ ಮಂಡಳಿಗಳು ಇರುವ ಹಿನ್ನೆಲೆ ಇಂದು ಸಾಯಂಕಾಲ ಆರಂಭವಾಗುವ ಗಣೇಶ ವಿಸರ್ಜನಾ ಮೆರವಣಿಗೆಯು ನಾಡಿದ್ದು ಬೆಳಗಿನವರೆಗೂ ನಡೆಯಲಿದೆ. ವಿಜೃಂಭಣೆಯಿಂದ ಜರುಗುವ ಮೆರವಣಿಯನ್ನು ಕಣ್ತುಂಬಿಕೊಳ್ಳಲು ರಾಜ್ಯ ಸೇರಿ ಪಕ್ಕದ ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳಿಂದಲೂ ಲಕ್ಷಾಂತರ ಜನ ಆಗಮಿಸುತ್ತಾರೆ. ಹಾಗಾಗಿ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ನಗರದ ಆಯಕಟ್ಟಿನ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ಅದೇ ರೀತಿ ಡ್ರೋನ್ ಕ್ಯಾಮರಾಗಳನ್ನು ಬಳಸಲು ಪೊಲೀಸ್ ಇಲಾಖೆ ತಯಾರಿ ಮಾಡಿಕೊಂಡಿದೆ. ಗಲ್ಲಿ ಗಲ್ಲಿಗಳಲ್ಲೂ ಪೊಲೀಸ್ ಸರ್ಪಗಾವಲು ನಿಯೋಜಿಸಲಾಗಿದೆ.

ಇಂದು ಅದ್ಧೂರಿ ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಬುಧವಾರ ಬೆಳಗಾವಿ ನಗರದಲ್ಲಿ ನಡೆದ ಪೊಲೀಸ್ ಪಥ ಸಂಚಲನ ಎಲ್ಲರ ಗಮನ ಸೆಳೆಯಿತು. ಕೋಟೆಕೆರೆ, ಕಪಿಲೇಶ್ವರ ಹೊಂಡ, ಜಕ್ಕೇರಿ ಹೊಂಡ ಸೇರಿ 8 ಕಡೆಗಳಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ವ್ಯವಸ್ಥೆ ಮಾಡಲಾಗಿದೆ.


Spread the love

About Laxminews 24x7

Check Also

ಮಹಿಷ ದಸರಾ | ಯಾರಿಗೂ ತೊಂದರೆ ಆಗದಂತೆ ಮಾಡಿಕೊಳ್ಳಬಹುದು: ಮಹದೇವಪ್ಪ

Spread the love ಮೈಸೂರು: ‘ಯಾರಿಗೂ, ಯಾವ ತೊಂದರೆಯೂ ಆಗದಂತೆ ಯಾರು ಬೇಕಾದರೂ ಅವರವರ ಧಾರ್ಮಿಕ ಆಚರಣೆ ಮಾಡಿಕೊಳ್ಳಬಹುದು’ ಎಂದು ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ