Breaking News

ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ ಸ್ಟೆಬಲ್ ಕುಡಿದ ಅಮಲಿನಲ್ಲಿ ತಹಸಿಲ್ದಾರ್ ಖಾಸಗಿ ಕಾರಿಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದಾನೆ.

Spread the love

 

 

ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಬಳಿ ಘಟನೆ ನಡೆದಿದೆ. ಕಾಗವಾಡ ತಹಶಿಲ್ದಾರರ ಪ್ರಮೀಳಾ ದೇಶಪಾಂಡೆ ಹಾಗೂ ಕಾರು ಚಾಲನೆ ಮಾಡುತ್ತಿದ್ದ ಅವರ ಪತಿ  ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿಕ್ಕೋಡಿಯಿಂದ ತಮ್ಮ ಖಾಸಗಿ ವಾಹನದಲ್ಲಿ ಕರ್ತವ್ಯಕ್ಕೆ ಕಾಗವಾಡಕ್ಕೆ ಹೋಗುವಾಗ ಚಿಕ್ಕೋಡಿ ತಾಲುಕಿನ ಮಾಂಜರಿ ಗ್ರಾಮದ ಬಳಿ ಪೊಲೀಸ್ ಕಾನ್ ಸ್ಟೆಬಲ್ ಬೈಕ್  ತಹಶಿಲ್ದಾರರ ವಾಹನಕ್ಕೆ ಡಿಕ್ಕಿ ಹೊಡೆದಿದೆ .

ತಹಶಿಲ್ದಾರ ಪ್ರಮೀಳಾ ದೇಶಪಾಂಡೆ ಅವರಿಗೆ ಸಣ್ಣ ಪುಟ್ಟ ಗಾಯವಾಗಿದೆ. ಪೊಲೀಸ್ ಕಾನ್ ಸ್ಟೆಬಲ್ ಶಿವಾನಂದ ಪಾಟೀಲ್ ಗೆ ಗಂಭೀರ ಗಾಯಗೊಂಡಿದ್ದಾರೆ. ಚಿಕ್ಕೋಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೋಲಿಸ್ ಕಾನ್ ಸ್ಟೆಬಲ್ ಅಥಣಿ ತಾಲೂಕಿನ ಐಗಳಿ ಠಾಣೆ ಸಿಬ್ಬಂದಿಯಾಗಿದ್ದು, ಕೊಗನೋಳಿ ಚೆಕ್ ಪೋಸ್ಟ್ ಕರ್ತವ್ಯಕ್ಕೆ ಹೋಗುತ್ತಿದ್ದರು. ಅವರು ಕುಡಿದು ಬೈಕ್ ಓಡಿಸುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.


Spread the love

About Laxminews 24x7

Check Also

ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ಅವಹೇಳನೆ ಖಂಡಿಸಿ ಹುಕ್ಕೇರಿ ಯಲ್ಲಿ ಪ್ರತಿಟಭಟನೆ.

Spread the love ಹುಕ್ಕೇರಿ : ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ಅವಹೇಳನೆ ಖಂಡಿಸಿ ಹುಕ್ಕೇರಿ ಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ