Breaking News

ನಿನ್ನೆ ಕೊಲೆ ಮಾಡಿ ಇಂದು ನೇಣಿಗೆ ಶರಣಾದ ವಾಚಮನ್

Spread the love

ಯುವಕನೊಬ್ಬನ ಭೀಕರ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ನಿನ್ನೆ ಹುಬ್ಬಳ್ಳಿಯ ಸಿಲ್ವರ್ ಟೌನ್‌‌ನಲ್ಲಿ ಮೌಲಾಲಿ ಎನ್ನುವ ಯುವಕನ ಕೊಲೆ ಮಾಡಲಾಗಿತ್ತು. ಈ ಕೊಲೆ ಪ್ರಕರಣದ ಆರೋಪಿ
ಪರಸಪ್ಪ‌, ಅಪೂರ್ವ ನಗರದ ಪ್ರಮುಖ ರಸ್ತೆಯಲ್ಲಿರುವ ಗಿಡದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪರಸಪ್ಪ (50) ನೇಣಿಗೆ ಶರಣಾದ ಆರೋಪಿಯಾಗಿದ್ದು, ನಿನ್ನೆ ಹುಬ್ಬಳ್ಳಿಯ ಸಿಲ್ವರ್ ಟೌನ್‌‌ನಲ್ಲಿ ಮೌಲಾಲಿ ಎನ್ನುವ ಯುವಕನ ಕೊಲೆ ಮಾಡಿದ ಆರೋಪ ಈತನ ಮೇಲಿತ್ತು. ಪೊಲೀಸರು ಈತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವ ಮುನ್ನವೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ನಿರ್ಮಾಣ ಹಂತದ ಕಟ್ಟಡದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ ಮಾಡಲಾಗಿದ್ದ ನಿರ್ಮಾಣ ಹಂತದ ಕಟ್ಟಡದ ವಾಚ್‌ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ. ಮೂಲತಃ ಗದಗ ಜಿಲ್ಲೆಯ ಲಕ್ಷ್ಮೇಶ್ವರ ನಿವಾಸಿಯಾಗಿರುವ ಪರಸಪ್ಪ‌, ಕುಟುಂಬದ ಜೊತೆಗೆ ನಿರ್ಮಾಣ ಹಂತದಲ್ಲಿ ಕಟ್ಟಡದಲ್ಲಿ ವಾಸವಿದ್ದ. ಪರಸಪ್ಪ‌ನ ಮಗಳ ಜೊತೆಗೆ ಕೊಲೆಯಾದ ಮೌಲಾಲಿ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಎನ್ನಲಾಗಿದೆ.

ವಿವಾಹಿತ ಮಗಳ ಮೌಲಾಲಿ ಅನೈತಿಕ ಇಟ್ಟುಕೊಂಡಿದ್ದರಿಂದ ಪರಸಪ್ಪ ಕುಪಿತಗೊಂಡು, ನಿನ್ನೆ ಕೊಲೆ ಮಾಡಿ ಇಂದು ನೇಣು ಹಾಕಿಕೊಂಡಿದ್ದಾನೆ.


Spread the love

About Laxminews 24x7

Check Also

ಡಿಜಿಟಲ್ ಅರೆಸ್ಟ್ ಮೂಲಕ ಮಂಗಳೂರಿನ ಮಹಿಳೆಗೆ 3.15 ಕೋಟಿ ರೂಪಾಯಿ ವಂಚನೆ

Spread the loveಮಂಗಳೂರು: ಮಂಗಳೂರಿನ ಮಹಿಳೆಯೊಬ್ಬರು ಡಿಜಿಟಲ್ ಅರೆಸ್ಟ್ ಎಂಬ ಹೆಸರಿನಲ್ಲಿ ನಡೆದ ಆನ್‌ಲೈನ್ ವಂಚನೆಯಲ್ಲಿ 3 ಕೋಟಿ 15 ಲಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ