Breaking News

ನಾಳೆ ಕರ್ನಾಟಕ ಬಂದ್​​ಗೆ ಸಕಲ ಸಿದ್ಧತೆ ನಡೆದಿದೆ. ಕನ್ನಡ ಚಿತ್ರರಂಗದಿಂದ ಹೋರಾಟಕ್ಕೆ ಬೆಂಬಲ

Spread the love

ನಾಳೆ ಕರ್ನಾಟಕ ಬಂದ್​​ಗೆ ಸಕಲ ಸಿದ್ಧತೆ ನಡೆದಿದೆ. ಕನ್ನಡ ಚಿತ್ರರಂಗದಿಂದ ಹೋರಾಟಕ್ಕೆ ಬೆಂಬಲ ಸಿಕ್ಕಿದೆ.

ಕಳೆದ ಮಂಗಳವಾರ ಕಾವೇರಿಗಾಗಿ ನಮ್ಮ ರಾಜ್ಯ ರಾಜಧಾನಿ ಬಂದ್ ಆಗಿತ್ತು. ನಾಳೆ ಕರ್ನಾಟಕ ಬಂದ್​​ಗೆ ಸಕಲ ಸಿದ್ಧತೆ ನಡೆದಿದೆ. ಕನ್ನಡ ಒಕ್ಕೂಟಗಳು ಕರೆ ಕೊಟ್ಟಿರುವ ಕರ್ನಾಟಕ ಬಂದ್​​ಗೆ ಚಿತ್ರರಂಗ ಕೈ ಜೋಡಿಸಿದೆ.

ಹಿರಿಯ ನಟ ಡಾ. ಶಿವರಾಜ್​ಕುಮಾರ್ ನೇತೃತ್ವದಲ್ಲಿ ಇಡೀ ಚಿತ್ರರಂಗ ನಾಳೆಯ ಹೋರಾಟದಲ್ಲಿ ಭಾಗಿಯಾಗಲಿದೆ. ಶೂಟಿಂಗ್ ಜೊತೆ ಥಿಯೇಟರ್ ಕೂಡ ಕ್ಲೋಸ್ ಆಗಲಿವೆ. ಹಾಗಾದ್ರೆ ಚಿತ್ರರಂಗದ ಮಂದಿಯಿಂದ ನಾಳೆಯ ಬಂದ್ ಹೇಗಿರಲಿದೆ? ಯಾರೆಲ್ಲಾ ಸ್ಟಾರ್ ಗಳು ಹೋರಾಟದಲ್ಲಿ ಭಾಗವಹಿಸಲಿದ್ದಾರೆ ಎಂಬುದರ ಮಾಹಿತಿ ಇಲ್ಲಿದೆ..

 ಕನ್ನಡ ಚಿತ್ರರಂಗದಿಂದ ಕಾವೇರಿ ಹೋರಾಟಕ್ಕೆ ಬೆಂಬಲಮಂಗಳವಾರವಷ್ಟೇ ಬೆಂಗಳೂರು ಬಂದ್ ಮಾಡಿ ಯಶಸ್ವಿಯಾಗಿದ್ದ ಹೋರಾಟಗಾರು, ತಮಿಳುನಾಡಿಗೆ ಕಾವೇರಿ ನೀರು ಬಿಡಬಾರದು ಎಂದು ಆಕ್ರೋಶ ಹೊರಹಾಕುವುದರ ಜೊತೆಗೆ ಕರ್ನಾಟಕ ಬಂದ್ ಮಾಡಲು ಸಕಲ ರೀತಿಯಲ್ಲೂ ಸಜ್ಜಾಗಿದ್ದಾರೆ. ಈ ಬಂದ್​ಗೆ ಕನ್ನಡ ಚಿತ್ರರಂಗ ಸಾಥ್ ನೀಡಿದೆ.

ನಿನ್ನೆ ಕನ್ನಡ ಚಳವಳಿ ವಾಟಳ್​ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಭೇಟಿ ನೀಡಿ ಕರ್ನಾಟಕ ಬಂದ್​ಗೆ ಬೆಂಬಲ ನೀಡುವಂತೆ ಕೇಳಿಕೊಂಡಿದ್ದರು. ಅದಕ್ಕೆ ವಾಣಿಜ್ಯ ಮಂಡಳಿಯ ಅಧ್ಯಕ್ಷ ಎನ್.ಎಮ್ ಸುರೇಶ್ ಚಿತ್ರರಂಗದ ಪರವಾಗಿ ಬೆಂಬಲ ಸೂಚಿಸಿದ್ದಾರೆ. ಸುರೇಶ್ ಅವರು ನಾಳೆಯ ಬಂದ್​​ನಲ್ಲಿ ಭಾಗಿಯಾಗುವಂತೆ ಶಿವರಾಜ್​​ಕುಮಾರ್ ಅವರನ್ನು ಭೇಟಿಯಾಗಿ ಮನವಿ ಮಾಡಿದ್ರು. ವಾಣಿಜ್ಯ ಮಂಡಳಿಯ ಮನವಿಗೆ ಶಿವಣ್ಣ ಸ್ಪಂದಿಸಿದ್ದು, ಶುಕ್ರವಾರದ ಬಂದ್​ನಲ್ಲಿ ಭಾಗಿಯಾಗುವುದಾಗಿ ಶಿವರಾಜ್​ಕುಮಾರ್ ಹೇಳಿದ್ದಾಗಿ ಎನ್ ಎಮ್ ಸುರೇಶ್ ತಿಳಿಸಿದ್ದಾರೆ.

 ಕಾವೇರಿ ಹೋರಾಟದಲ್ಲಿ ಕಲಾವಿದರು ಭಾಗಿಯಾಗುವ ಸಾಧ್ಯತೆ ಹೆಚ್ಚಿದೆ..ಶಿವರಾಜ್​ಕುಮಾರ್ ಭೇಟಿ ನಂತರ ಎನ್ ಎಮ್ ಸುರೇಶ್ ಅವರು ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳ ಜೊತೆ ಸೇರಿ, ಆಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ, ಯುವರಾಜ ನಿಖಿಲ್ ಕುಮಾರ್​ಸ್ವಾಮಿ, ಕೋಮಲ್ ಅವರನ್ನು ಭೇಟಿಯಾಗಿ ಬಂದ್​ನಲ್ಲಿ ಭಾಗವಹಿಸುವಂತೆ ಮನವಿ ಮಾಡಿದ್ದಾರೆ. ಚಲನಚಿತ್ರ ವಾಣಿಜ್ಯ ಮಂಡಳಿ ನಿಯೋಗದ ಮನವಿಗೆ ಪೂರಕವಾಗಿ ಸ್ಪಂದಿಸಿರುವ ಧ್ರುವಸರ್ಜಾ, ನಿಖಿಲ್ ಹಾಗೂ ಕೋಮಲ್ ಬಂದ್​ನಲ್ಲಿ ಭಾಗಿಯಾಗುವುದು ಬಹುತೇಕ ಖಚಿತವಾಗಿದೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ