Breaking News

ನಾಳೆ ಕರ್ನಾಟಕ ಬಂದ್: ಆಯಕಟ್ಟಿನ ಜಾಗಗಳಲ್ಲಿ ಪೊಲೀಸ್ ಬಂದೋಬಸ್ತ್.. ಯಾವ ಸೇವೆ ಇರುತ್ತೆ, ಯಾವುದಿರಲ್ಲ?

Spread the love

ಬೆಂಗಳೂರು : ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ಬೆಂಗಳೂರು ಬಂದ್​ಗೆ ಕರೆ ನೀಡಿದ ಬೆನ್ನಲ್ಲೇ ನಾಳೆ ಕರ್ನಾಟಕ ಬಂದ್​ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದು, ಬಹುತೇಕ ಸಂಘ-ಸಂಸ್ಥೆಗಳು ಬೆಂಬಲ ಸೂಚಿಸಿವೆ.

ಈ ಹಿನ್ನೆಲೆ ಅಂಗಡಿ-ಮುಂಗಟ್ಟು, ಕೈಗಾರಿಕೆ ಹಾಗೂ ಸಿನಿಮಾ ಥಿಯೇಟರ್ ಸೇರಿದಂತೆ ಬಹುತೇಕ ಸೇವೆಗಳು ಸ್ತಬ್ಧವಾಗುವ ಸಾಧ್ಯತೆಯಿದೆ.

ಕಾವೇರಿ ವಿಚಾರವಾಗಿ ರೈತಪರ ಸಂಘಟನೆಗಳು ಕರೆ ನೀಡಿದ್ದ ಬೆಂಗಳೂರು ಬಂದ್ ಯಶಸ್ವಿಯಾಗಿತ್ತು. ಇದಕ್ಕೂ ಮುನ್ನ ಮಂಡ್ಯ ಬಂದ್ ಸಹ ಯಶಸ್ವಿಯಾಗಿತ್ತು. ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಕರೆ ನೀಡಿರುವ ಕರ್ನಾಟಕ ಬಂದ್​ಗೆ ಬಹುತೇಕ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಬಂದ್ ನಡೆಯಲಿದೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ ಅವರು ಇಂದು ಮಧ್ಯರಾತ್ರಿ 12 ರಿಂದ ನಾಳೆ ಮಧ್ಯರಾತ್ರಿ 12ರ ವರೆಗೆ ನಿಷೇಧಾಜ್ಞೆ ವಿಧಿಸಿದ್ದಾರೆ. ಜೊತೆಗೆ ಕಮೀಷನರೇಟ್ ಹಾಗೂ ಜಿಲ್ಲಾ ಮಟ್ಟದಲ್ಲಿ ಸೂಕ್ತ ಬಂದೋಬಸ್ತ್ ಕೈಗೊಳ್ಳುವಂತೆ ಹಿರಿಯ ಪೊಲೀಸ್ ಅಧಿಕಾರಿಗಳು ನಿರ್ದೇಶನ ನೀಡಿದ್ದಾರೆ. ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಿ ಭದ್ರತೆ ಕೈಗೊಳ್ಳಲಾಗಿದೆ. ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಶುಕ್ರವಾರ ಏನಿರುತ್ತೆ ? ಏನಿರಲ್ಲ ಎಂಬುದರ ಮಾಹಿತಿ ಇಲ್ಲಿ ನೀಡಲಾಗಿದೆ.

ನಾಳೆ ಏನಿರುತ್ತೆ ? : ಔಷಧಿ ಮಳಿಗೆಗಳು, ಆಸ್ಪತ್ರೆಗಳು, ಬ್ಯಾಂಕ್​ಗಳು, ಮೆಟ್ರೋ ರೈಲು, ಪೆಟ್ರೋಲ್ ಬಂಕ್​ಗಳು, ಕೆಎಸ್‌ಆರ್​ಟಿಸಿ ಬಸ್, ಬಿಎಂಟಿಸಿ ಬಸ್ ಸೇವೆ ಇರಲಿದೆ.

ಏನಿರಲ್ಲ ? : ಆಟೋ, ಕ್ಯಾಬ್, ಓಲಾ- ಉಬರ್ ಕ್ಯಾಬ್, ಮಾಲ್​ಗಳು, ಕೆಲ ಖಾಸಗಿ ಬಸ್​ಗಳು, ಜಿಲ್ಲಾ ಕೇಂದ್ರದ ಪ್ರಮುಖ ಮಾರುಕಟ್ಟೆಗಳು, ಹೋಟೆಲ್​ಗಳು ಕೆಲ ಶಾಲಾ-ಕಾಲೇಜುಗಳು, ಗೂಡ್ಸ್ ವಾಹನಗಳು, ಆಭರಣ ಮಳಿಗೆಗಳು, ಚಿತ್ರಮಂದಿಗಳು, ಕೈಗಾರಿಕೆಗಳು, ಬೀದಿ ಬದಿ ಅಂಗಡಿಗಳು ಇರುವುದಿಲ್ಲ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ