Breaking News

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲ:ಬೊಮ್ಮಾಯಿ

Spread the love

ಬೆಂಗಳೂರು: ”ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಶಿವಮೊಗ್ಗದಲ್ಲಿ ಪೊಲೀಸರು ಮುಂಜಾಗ್ರತಾ ಕ್ರಮ ಕೈಗೊಳ್ಳದಿರುವುದೇ ಘಟನೆಗೆ ಕಾರಣವಾಗಿದೆ” ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.

ಆರ್.ಟಿ. ನಗರ ನಿವಾಸದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ”ಶಿವಮೊಗ್ಗ ಪ್ರಕ್ಷುಬ್ಧ ವಾತಾವರಣ ಇರುವ ನಗರ. ಅಲ್ಲಿ ಹಿಂದೆ ಹಲವಾರು ಘಟನೆಗಳು ನಡೆದಿವೆ. ಇಂತಹ ಧಾರ್ಮಿಕ ಘಟನೆ ನಡೆದಾಗ ಪೊಲೀಸರು ಸೂಕ್ತ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿಲ್ಲ” ಎಂದು ಆರೋಪಿಸಿದರು.

”ಶಿವಮೊಗ್ಗದ ಮೂರು ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಇಂತ ಘಟನೆ ನಡೆಯುತ್ತದೆ. ಇಂತ ಸ್ಟೇಷನ್‌ಗೆ ವರ್ಗಾವಣೆ ಮಾಡುವಾಗ ಸಮರ್ಥ ಅಧಿಕಾರಿ ಹಾಕಬೇಕು. ಸ್ವಹಿತಾಸಕ್ತಿಗಳಿಗೆ ಬಲಿಯಾಗಿ ಅಧಿಕಾರಿಗಳ ವರ್ಗಾವಣೆ ಮಾಡಿದರೆ, ಅವರು ಕಾನೂನು ಕಾಪಾಡುವ ಬದಲು ಬೇರೆ ಕೆಲಸದಲ್ಲಿಯೇ ಮಗ್ನರಾಗುತ್ತಾರೆ. ಇದರಿಂದ ಸಮಾಜಘಾತುಕ ಶಕ್ತಿಗಳಿಗೆ ಕುಮ್ಮಕ್ಕು ಸಿಗುತ್ತದೆ. ಇದರ ಮೂಲ ಪ್ರತಿ ಜಿಲ್ಲೆಯಲ್ಲಿ ಕ್ಲಬ್, ರಿಯಲ್ ಎಸ್ಟೇಟ್ ಮಾಫಿಯಾ ಶುರುವಾಗಿದೆ. ಸಮಗ್ರವಾಗಿ ನಿಭಾಯಿಸಬೇಕು. ಶಾಂತಿ ಕಾಪಾಡಬೇಕು. ಅಗತ್ಯ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು. ಸರ್ಕಾರದಿಂದ ಪೊಲೀಸರಿಗೆ ಒಂದು ಸ್ಪಷ್ಟ ನಿರ್ದೇಶನ ಹೋಗಬೇಕು. ಅಧಿಕಾರಿಗಳನ್ನು ಯಾವುದೇ ಮುಲಾಜಿಲ್ಲದೇ ಟ್ರಾನ್ಸ್‌ಫರ್ ಮಾಡಿದ್ದರೆ, ಇಂತ ಘಟನೆ ನಿಲ್ಲುತ್ತದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಾತಲ್ಲಿ ಮಾತ್ರ ಗಾಂಧಿ: ಗಾಂಧಿ ಕಂಡ ಕನಸು ಕರ್ನಾಟಕದಲ್ಲಿ ನನಸು ಅಂತ ಸರ್ಕಾರ ಜಾಹೀರಾತು ನೀಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ”ಇವರು ಮಾಡುವುದೆಲ್ಲಾ ಗಾಂಧಿ ವಿರೋಧಿ ನೀತಿ. ಸುಳ್ಳು ಹೇಳುವುದರಿಂದ ಗಾಂಧಿ ವಿರೋಧಿ ನೀತಿ ಪ್ರಾರಂಭ ಆಗುತ್ತದೆ. ಸುಳ್ಳು ಹೇಳಿ ಜನರ ದಿಕ್ಕು ತಪ್ಪಿಸುವುದು. ಸಿಕ್ಕಲ್ಲೆಲ್ಲಾ ಮದ್ಯದಂಗಡಿ ಶುರು ಮಾಡಿದ್ದಾರೆ. ಪ್ರತಿಯೊಂದು ಗ್ರಾಮ ಪಂಚಾಯತಿಯಲ್ಲಿ ಮದ್ಯದಂಗಡಿ ತೆರೆಯುತ್ತಿದ್ದಾರೆ. ಹೇಳಲು ಮಾತ್ರ ಗಾಂಧಿ ಶಾಂತಿ ಮಂತ್ರ, ಮಾಡುವುದೆಲ್ಲಾ ಗಾಂಧಿ ವಿರೋಧಿ ಕೆಲಸಗಳು” ಎಂದು ಆಕ್ರೋಶ ವ್ಯಕ್ತಪಡಿದರು.


Spread the love

About Laxminews 24x7

Check Also

ಶಾಸಕ ಯತ್ನಾಳರ ಹೊಸ ಪಾರ್ಟಿ ಭಾರತ ರಾಷ್ಟ್ರಹಿತ ಪಾರ್ಟಿ ಪೊಟೊ ವೈರಲ್: ಗಣೇಶೋತ್ಸವದಲ್ಲೇ ಘೋಷಣೆ ಮಾಡ್ತಾರಾ BRP?*

Spread the love ಶಾಸಕ ಯತ್ನಾಳರ ಹೊಸ ಪಾರ್ಟಿ ಭಾರತ ರಾಷ್ಟ್ರಹಿತ ಪಾರ್ಟಿ ಪೊಟೊ ವೈರಲ್: ಗಣೇಶೋತ್ಸವದಲ್ಲೇ ಘೋಷಣೆ ಮಾಡ್ತಾರಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ