Breaking News

ಸಾಂಬ್ರಾ ವಿಮಾನ ನಿಲ್ದಾಣದ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚುವರಿ ಜಮೀನಿನ ಬೇಡಿಕೆ ಇಟ್ಟ ಹಿನ್ನೆಲೆ ಮಂಗಳವಾರ ಸ್ಥಳ ಪರಿಶೀಲನೆ

Spread the love

ಬೆಳಗಾವಿ: ಸಾಂಬ್ರಾ ವಿಮಾನ ನಿಲ್ದಾಣ ಅಭಿವೃದ್ಧಿಗೆ ಎಲ್ಲ ರೀತಿಯಿಂದಲೂ ನನ್ನ ಸಹಕಾರವಿದೆ.

ಆದರೆ ಸುತ್ತಲಿನ ಹಳ್ಳಿಗಳಿಗೆ ಮತ್ತು ರೈತರಿಗೆ ಯಾವುದೇ ರೀತಿ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಸಾಂಬ್ರಾ ವಿಮಾನ ನಿಲ್ದಾಣದ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚುವರಿ ಜಮೀನಿನ ಬೇಡಿಕೆ ಇಟ್ಟ ಹಿನ್ನೆಲೆ ಮಂಗಳವಾರ ಸ್ಥಳ ಪರಿಶೀಲನೆ ನಡೆಸಿದ ನಂತರ ನಡೆದ ಉನ್ನತಾಧಿಕಾರ ಮಟ್ಟದ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ವಿಮಾನ ನಿಲ್ದಾಣ ಅಭಿವೃದ್ಧಿಗೆ ಅನುಕೂಲ ಮಾಡಿಕೊಡೋಣ. ಆದರೆ ಸಾಂಬ್ರಾ ವಿಮಾನ ನಿಲ್ದಾಣಕ್ಕಾಗಿ ಈಗಾಗಲೇ ರೈತರು ಸಾಕಷ್ಟು ಜಮೀನನ್ನು ನೀಡಿದ್ದಾರೆ. ಇನ್ನು ಮುಂದೆ ಯಾವುದೇ ಮನೆಗಳನ್ನು ತೆರವುಗೊಳಿಸಲು ಅವಕಾಶ ನೀಡುವುದಿಲ್ಲ. ಜತೆಗೆ ರೈತರಿಂದ ಬಲಾತ್ಕಾರ ಉಪಯೋಗಿಸಿ ಜಮೀನು ವಶಪಡಿಸಿಕೊಳ್ಳುವಂತಿಲ್ಲ. ರೈತರೊಂದಿಗೆ ಚರ್ಚಿಸದ ಹೊರತು ಯಾವುದೇ ಮುಂದಡಿ ಇಡಲು ಅವಕಾಶ ಕೊಡುವುದಿಲ್ಲ. ರೈತರನ್ನು ಮೊದಲು ವಿಶ್ವಾಸಕ್ಕೆ ತೆಗೆದುಕೊಳ್ಳಿ ಎಂದು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಆಸೀಫ್ ಸೇಠ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ವಿಮಾನ ನಿಲ್ದಾಣ ಪ್ರಾಧಿಕಾರದ ನಿರ್ದೇಶಕ ತ್ಯಾಗರಾಜನ್, ಪೋಲಿಸ್ ಆಯುಕ್ತ ಸಿದ್ರಾಮಪ್ಪ, ಎಸ್. ಪಿ ಭೀಮಾಶಂಕರ್ ಗುಳೇದ್, ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಡಿಸಿಪಿ ಸ್ನೇಹಾ ಪಿ. ವಿ ಸೇರಿದಂತೆ ಮತ್ತಿತರರು ಇದ್ದರು.


Spread the love

About Laxminews 24x7

Check Also

ಫೆ.8ರಿಂದ ರಾಷ್ಟ್ರಮಟ್ಟದ ವಿಚಾರ ಸಂಕಿರಣ

Spread the loveಬೆಳಗಾವಿ:ನಗರದ ಕೆಎಲ್‌ಎಸ್ ಗೊಗಟೆ ಕಾಲೇಜಿನ ಕೆ.ಕೆ.ವೇಣುಗೋಪಾಲ ಸಭಾಂಗಣದಲ್ಲಿ ಫೆ.8ರಿಂದ 13ರ ವರಗೆ ಅಕಾಡೆಮಿ ಆಫ್ ಕಂಪೇರೆಟಿವ್ ಫಿಲಾಸಫಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ