Breaking News

ತೆರಿಗೆ ವಂಚನೆ ಆರೋಪ: ಬೆಂಗಳೂರಿನ 15 ಕ್ಕೂ ಹೆಚ್ಚು ಕಡೆ ಐಟಿ ದಾಳಿ, ದಾಖಲೆಗಳ ಪರಿಶೀಲನೆ

Spread the love

ಬೆಂಗಳೂರು : ತೆರಿಗೆ ವಂಚನೆ ಆರೋಪದ ಹಿನ್ನೆಲೆಯಲ್ಲಿ ಉದ್ಯಮಿಗಳ ನಿವಾಸಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇಂದು ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದ್ದಾರೆ. ಬೆಂಗಳೂರಿನ 15 ಕ್ಕೂ ಹೆಚ್ಚು ಕಡೆ ದಾಳಿ ನಡೆಸಲಾಗಿದ್ದು, ದಾಖಲೆ ಪರಿಶೀಲನೆ ನಡೆಸಲಾಗುತ್ತಿದೆ. ಜೊತೆಗೆ, ಉದ್ಯಮಿಗಳ ಒಡೆತನದ ಸಂಸ್ಥೆಗಳ ಮೇಲೂ ದಾಳಿ ಮಾಡಲಾಗಿದೆ.

ಚೆನ್ನೈ, ದೆಹಲಿಯಿಂದ ರಾತ್ರೋರಾತ್ರಿ ಬೆಂಗಳೂರಿಗೆ ಬಂದಿರೋ ಐಟಿ ಅಧಿಕಾರಿಗಳು, ವಿಜಯನಗರ ಬಿಟಿಎಂ, ಹುಳಿಮಾವು, ಸದಾಶಿವನಗರ, ಸ್ಯಾಂಕಿ ಟ್ಯಾಂಕ್ ಸೇರಿದಂತೆ ಹಲವೆಡೆ ದಾಳಿ ನಡೆಸಿದ್ದಾರೆ. ತೆರಿಗೆ ವಂಚನೆ ಆರೋಪದ ಹಿನ್ನೆಲೆ ಖಾಸಗಿ ಕಂಪನಿಗಳು ಅದರ ಮಾಲೀಕರು ಹಾಗೂ ಚಿನ್ನದ ವ್ಯಾಪಾರಿಗಳ‌ ಮನೆ ಹಾಗೂ ಕಚೇರಿಗಳ‌ ಮೇಲೆ ದಾಳಿ‌ ನಡೆಸಿರುವ ಮಾಹಿತಿ ಲಭ್ಯವಾಗಿದೆ.

ದಂತ ವೈದ್ಯೆಯೊಬ್ಬರ ಮನೆ ಮೇಲೆ ಐಟಿ ದಾಳಿ‌ ನಡೆಸಲಾಗಿದೆ. ಪ್ರಶಾಂತ ನಗರದಲ್ಲಿ ನಿವಾಸ, ವಿಜಯನಗರದಲ್ಲಿ ಕ್ಲಿನಿಕ್ ಹೊಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ದಾಳಿ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ