ಡಿಪ್ಲೊಮಾ ವಿದ್ಯಾರ್ಥಿಗಳಿಗೆ ನಿಯಮಾನುಸಾರ 3 ಹಂತದ ಸಿಇಟಿ ಪರೀಕ್ಷೆ ನಡೆಸುವಂತೆ ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಇಂದು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿತು.
ಇಂಜಿನಿಯರಿಂಗ್ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ಪಿಜಿಸಿಇಟಿ ನಡೆಸುತ್ತಿರುವುದು ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿದೆ ಎಂದು ಆರೋಪಿಸಿ ಎಬಿವಿಪಿ ಟಿಳಕವಾಡಿಯ ಆರ್‌ಪಿಡಿ ಕ್ರಾಸ್‌ನಲ್ಲಿ ಇಂದು ಪ್ರತಿಭಟನೆ ನಡೆಸಿತು. ಡಿಪ್ಲೊಮಾ ವಿದ್ಯಾರ್ಥಿಗಳ ಅಂತಿಮ ವರ್ಷದ ಪರೀಕ್ಷೆ ಫಲಿತಾಂಶ ವಿಳಂಬವಾಗಿದೆ. ಈಗ ತರಾತುರಿಯಲ್ಲಿ ಅವರಿಗೆ ಎರಡು ಹಂತದ ಕೌನ್ಸೆಲಿಂಗ್ ಮಾತ್ರ ನಡೆಸಲಾಗುತ್ತಿದೆ.
ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಎಬಿವಿಪಿ ಆರೋಪಿಸಿದೆ. ಆದ್ದರಿಂದ ಡಿಪ್ಲೊಮಾ ವಿದ್ಯಾರ್ಥಿಗಳ ಸಿಇಟಿ ಕೌನ್ಸೆಲಿಂಗ್ ಅನ್ನು ನಿಯಮಾನುಸಾರ 3 ಹಂತಗಳಲ್ಲಿ ನಡೆಸಬೇಕು ಎಂದು ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ಹಲವು ವಿದ್ಯಾರ್ಥಿಗಳು ಟಿಳಕವಾಡಿಯ ಆರ್ ಪಿಡಿ ಕ್ರಾಸ್ ನಲ್ಲಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು .
ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಎಬಿವಿಪಿ ಪದಾಧಿಕಾರಿ ಮಲ್ಲಿಕಾರ್ಜುನ, ಸರಕಾರ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಡಿಪ್ಲೊಮಾ ವಿದ್ಯಾರ್ಥಿಗಳ ಭವಿಷ್ಯದ ಜತೆ ಆಟವಾಡುತ್ತಿದೆ. ಪಿಜಿಸಿಇಟಿ ಪ್ರಕಾರ, ಡಿಪ್ಲೊಮಾ ವಿದ್ಯಾರ್ಥಿಗಳಿಗೆ ನಿಯಮದ ಪ್ರಕಾರ 3 ಹಂತಗಳಲ್ಲಿ ಕೌನ್ಸೆಲಿಂಗ್ ನಡೆಸಬೇಕು. ಆದರೆ, ಡಿಪ್ಲೊಮಾ ಪರೀಕ್ಷೆಯ ಫಲಿತಾಂಶವನ್ನು ವಿಳಂಬಗೊಳಿಸಿ, ಗಡಿಬಿಡಿಯಲ್ಲಿ 2 ಹಂತಗಳಲ್ಲಿ ಅವರ ಕೌನ್ಸೆಲಿಂಗ್ ನಡೆಸುವುದು,