Breaking News

ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್​ ಸವಾರರಿಬ್ಬರ ಸಾವು, ಮೆಡಿಕಲ್​ ಶಾಪ್​ಗೆ ಬಂದಿದ್ದ ವ್ಯಕ್ತಿಗೆ ಹೃದಯಾಘಾತ​

Spread the love

ಮೈಸೂರು, ಅ.05: ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ (Accident) ಘಟನೆ ಮೈಸೂರು ಜಿಲ್ಲೆ ಹೆಚ್​.ಡಿ.ಕೋಟೆ ತಾಲೂಕಿನ ಗದ್ದಿಗೆ ಸುಂಕಲ್ ಮಂಟಿ ಬಳಿ ನಡೆದಿದೆ. ಅಪಘಾತದಲ್ಲಿ ಬೈಕ್​​ನಲ್ಲಿದ್ದ ಸೋಮಶೇಖರ್​(30), ನಾಗೇಶ್​​(28) ಮೃತಪಟ್ಟಿದ್ದಾರೆ. ಮೈಸೂರಿನಿಂದ ಹೆಚ್​.ಡಿ.ಕೋಟೆಗೆ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಈ ಸಂಬಂಧ ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ (HD Kote Police Station) ಪ್ರಕರಣ ದಾಖಲಾಗಿದೆ.

ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ನಂಜನಗೂಡು ತಾಲೂಕಿನ ಈರೇಗೌಡನ ಹುಂಡಿ ಗ್ರಾಮದಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಹೆಡಿಯಾಲ ಗ್ರಾಮದ ಮಣಿಕಂಠ (37) ಮೃತ ದುರ್ದೈವಿ. ಯುವಕ ಜಮೀನಿನಲ್ಲಿ ನೇಣಿಗೆ ಶರಣಾಗಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಹುಲ್ಲಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ರಮೇಶ್ ಕರಕಿಕಟ್ಟೆ ಸೇರಿದಂತೆ ಇತರೆ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಔಷಧಿ ಖರೀದಿಸಲು ಮೆಡಿಕಲ್​ ಶಾಪ್​ಗೆ ಬಂದಿದ್ದ ವ್ಯಕ್ತಿಗೆ ಹೃದಯಾಘಾತ​

ಮೈಸೂರಿನ ಉದಯಗಿರಿ ಮೆಡಿಕಲ್ ಸ್ಟೋರ್​ಗೆ ಔಷಧಿ ಖರೀದಿಸಲು ಬಂದಿದ್ದ ವ್ಯಕ್ತಿಗೆ ಹೃದಯಾಘಾತವಾಗಿದ್ದು ಕುಸಿದು ಬಿದ್ದು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜಗದೀಶ್(38) ಮೃತ ವ್ಯಕ್ತಿ. ಜಗದೀಶ್ ಕುಸಿದು ಬಿದ್ದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಮಾತ್ರೆ ಖರೀದಿಸಲು ಜಗದೀಶ್ ಮೆಡಿಕಲ್ ಸ್ಟೋರ್‌ಗೆ ಬಂದಿದ್ದರು. ಈ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಮೃತ ಜಗದೀಶ್ ಅವರು ಕ್ಯಾತಮಾರನಹಳ್ಳಿಯಲ್ಲಿ ಚಿಕನ್ ಅಂಗಡಿ ನಡೆಸುತ್ತಿದ್ದರು. ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ವರದಕ್ಷಿಣೆ ಕಿರುಕುಳ ಆರೋಪ, ಐಎಸ್‌ಡಿ ಡಿವೈಎಸ್‌ಪಿ ವಿರುದ್ಧ ಎಫ್ಐಆರ್

Spread the love ಬೆಂಗಳೂರು : ಡಿವೈಎಸ್‌ಪಿಯೊಬ್ಬರ ವಿರುದ್ಧ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. 41 ವರ್ಷದ ಮಹಿಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ