ಬೆಂಗಳೂರು: ಓವರ್ ಟೇಕ್ ಮಾಡುವ ಭರದಲ್ಲಿ ಬಿಎಂಟಿಸಿ ಬಸ್ಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದ ಸವಾರನ ಮೇಲೆ ಬಸ್ ಹರಿದಿದೆ. ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಲಹಂಕ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ನಡೆದಿದ್ದು, ಇದೀಗ ತಡವಾಗಿ ಬೆಳಕಿಗೆ ಬಂದಿದೆ.
ಅಟ್ಟೂರಿನ ಮದರ್ ಡೈರಿ ಬಳಿ ದುರಂತ ಸಂಭವಿಸಿದ್ದು, ಅವಘಡದಲ್ಲಿ ಸ್ಕೂಟರ್ ಸವಾರ ಭರತ್ ರೆಡ್ಡಿ ಸಾವನ್ನಪ್ಪಿದ್ದಾರೆ.
ಅಪಘಾತಕ್ಕೀಡಾದ ಸ್ಕೂಟಿಎಂಜಿನಿಯರಿಂಗ್ ಮುಗಿಸಿದ್ದ ಭರತ್, ಸಿವಿಲ್ ಕಂಟ್ರಾಕ್ಟರ್ ಆಗಿ ಕೆಲಸ ಮಾಡುತ್ತಿದ್ದರು. ಬುಧವಾರ ಸಂಜೆ 5 ಗಂಟೆ ವೇಳೆ ಅಟ್ಟೂರು ಕಡೆಯಿಂದ ಸ್ಕೂಟರ್ ಚಲಾಯಿಸಿಕೊಂಡು ಬರುತ್ತಿದ್ದರು. ಕಿರಿದಾದ ರಸ್ತೆಯಲ್ಲಿ ಚಾಲನೆ ಮಾಡುತ್ತಿರುವಾಗ ಮುಂದೆ ಹೋಗುತ್ತಿದ್ದ ಬಿಎಂಟಿಸಿ ಬಸ್ ಓವರ್ ಟೇಕ್ ಮಾಡಲು ಮುಂದಾಗಿದ್ದರು. ಈ ವೇಳೆ, ಬಸ್ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾರೆ. ಆಗ ಸವಾರನ ಮೇಲೆ ಬಸ್ ಹರಿದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಶವವನ್ನ ಯಲಹಂಕ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಬಿಎಂಟಿಸಿ ಚಾಲಕ ಎಸ್ಕೇಪ್ ಆಗಿದ್ದಾನೆ. ಸದ್ಯ ಯಲಹಂಕ ಟ್ರಾಫಿಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಓವರ್ ಟೇಕ್ ವೇಳೆ ಡಿಕ್ಕಿ ಹೊಡೆದು ಕೆಳಗೆ ಬಿದ್ದ ಸವಾರನ ಮೇಲೆ ಬಿಎಂಟಿಸಿ ಬಸ್ ಹರಿದಿದೆ. ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Laxmi News 24×7