Breaking News

ಪ್ರತಿ ಗ್ರಾಮ ಪಂಚಾಯಿತಿಗೊಂದು ಪಬ್ಲಿಕ್ ಶಾಲೆ ನಿರ್ಮಾಣ: ಡಿಸಿಎಂ ಡಿ.ಕೆ.ಶಿ.

Spread the love

ರಾಮನಗರ: ರಾಜ್ಯದಲ್ಲಿ 2,000 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ನಿರ್ಮಾಣ ಮಾಡುವ ಶಿಕ್ಷಣ ಕ್ರಾಂತಿಗೆ ಮಾಗಡಿಯಿಂದ ಚಾಲನೆ ದೊರೆತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ನಗರ ಪ್ರದೇಶಗಳಿಗೆ ಜನರು ಶಿಕ್ಷಣಕ್ಕಾಗಿ ವಲಸೆ ಹೋಗುವುದು ತಪ್ಪಬೇಕು. ಪ್ರತಿ ಗ್ರಾ.ಪಂ.ಪಂಚಾಯಿತಿಗೆ ಅಂತರರಾಷ್ಟ್ರೀಯ ಗುಣಮಟ್ಟದ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಕಟ್ಟಬೇಕು ಎಂಬುದು ನನ್ನ ಕನಸು. ಆದಷ್ಟು ಬೇಗ ಯೋಜನೆಯನ್ನು ಕಾರ್ಯಗತಗೊಳಿಸುತ್ತೇವೆ ಎಂದು ಅವರು ತಿಳಿಸಿದರು.

ಕುದೂರಿನಲ್ಲಿ ಸುಮಾರು 6 ಕೋಟಿ ರೂ ವೆಚ್ಚದಲ್ಲಿ ಸುಸಜ್ಜಿತ ಶಾಲೆ ನಿರ್ಮಿಸಲು ಹೊರಟಿರುವ ಟೊಯೊಟೊ ಕಿರ್ಲೋಸ್ಕರ್ ಸಂಸ್ಥೆಗೆ ಅಭಾರಿಯಾಗಿರುತ್ತೇವೆ. ಈ ಸಂಸ್ಥೆಯವರು ಜಿಲ್ಲೆಯ 4 ತಾಲೂಕುಗಳಲ್ಲಿ ಒಂದೊಂದು ಶಾಲೆ ನಿರ್ಮಾಣ ಮಾಡುವುದಾಗಿ ಮಾತು ಕೊಟ್ಟಿದ್ದಾರೆ. ರಾಮನಗರ ಜಿಲ್ಲೆಯಲ್ಲಿರುವ ಎಲ್ಲ ಕೈಗಾರಿಕೆಗಳ ಸಿಎಸ್‌ಆರ್ ಹಣವನ್ನು ಶಿಕ್ಷಣಕ್ಕೆ ಮಾತ್ರ ಬಳಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಸುಮಾರು 36 ಕೋಟಿಯಷ್ಟು ಹಣ ಈಗಾಗಲೇ ಈ ಅನುದಾನದಡಿ ಬಳಕೆಗೆ ಬಂದಿದೆ ಎಂದು ಮಾಹಿತಿ ನೀಡಿದರು.

ಕಣ್ಣು ಚೆನ್ನಾಗಿದ್ದರೆ ನೋಟ ಚೆನ್ನಾಗಿರುತ್ತದೆ. ನಾಲಿಗೆ, ನಡತೆ ಚೆನ್ನಾಗಿದ್ದರೆ ಇಡೀ ಜಗತ್ತೇ ನಮ್ಮನ್ನು ಹಿಂಬಾಲಿಸುತ್ತದೆ. ಇದಕ್ಕೆ ಶಿಕ್ಷಣ ಅತ್ಯಗತ್ಯ. ಸಮಯ ನಿಲ್ಲುವುದಿಲ್ಲ, ಆಡಿದ ಮಾತು ಮತ್ತೆ ಮರಳಿ ಬರುವುದಿಲ್ಲ. ಆದ ಕಾರಣ ವಿದ್ಯೆ ಕಲಿಯುವ ವಯಸ್ಸು ಕಳೆದು ಹೋದರೆ ಮತ್ತೆ ದೊರೆಯುವುದಿಲ್ಲ. ವಿದ್ಯಾರ್ಥಿ ಜೀವನದಲ್ಲಿ ಎಷ್ಟು ಕಲಿಯಲು ಸಾಧ್ಯವೋ ಅಷ್ಟು ಕಲಿಯಬೇಕು. ನಿಮ್ಮ ತಂದೆ- ತಾಯಿ ಕನಸು ಕಂಡಿರುತ್ತಾರೆ, ಆ ಕನಸಿಗೆ ನೀವು ಸಹಕಾರಿಯಾಗಿ ಬೆಳೆಯಬೇಕು If you forget the route, you will not get the Fruit ಎಂದು ನೆರೆದಿದ್ದ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಶ್ರೀರಂಗ ನೀರಾವರಿ ಯೋಜನೆಗೆ ಮರುಜೀವ: ಜಿಲ್ಲೆಯ ಶ್ರೀರಂಗ ನೀರಾವರಿ ಯೋಜನೆಗೆ ಮರುಜೀವ ನೀಡಲಿದ್ದು, ಕೃಷಿ ಹಾಗೂ ಕುಡಿಯುವ ನೀರಿನ ಕೊರತೆಯನ್ನು ಶೀಘ್ರವೇ ಬಗೆಹರಿಸಲಿದ್ದೇವೆ. ಸಂಸದ ಡಿ.ಕೆ.ಸುರೇಶ್ ಮತ್ತು ಶಾಸಕ ಬಾಲಕೃಷ್ಣ ಅವರು ಕ್ಷೇತ್ರದಲ್ಲಿ ಅನೇಕ ಯೋಜನೆಗಳ ಜಾರಿ ಹಾಗೂ ಸಮಸ್ಯೆಗಳಿರುವ ಬಗ್ಗೆ ಗಮನ ಸೆಳೆದಿದ್ದಾರೆ. ಮುಖ್ಯವಾಗಿ, ಬಗರ್​ಹುಕುಂ ಜಮೀನುಗಳ ಬಗ್ಗೆ ಶೀಘ್ರ ಗಮನ ಹರಿಸಲಾಗುವುದು ಎಂದು ಭರವಸೆ ನೀಡಿದರು.

ಗೃಹಲಕ್ಷ್ಮೀ ತಾಂತ್ರಿಕ ಸಮಸ್ಯೆ ಶೀಘ್ರ ಪರಿಹಾರ: ಶೇ. 88ರಷ್ಟು ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ ಹಣ ತಲುಪಿದೆ. ಮಿಕ್ಕ ಅರ್ಜಿದಾರರಿಗೆ ಬ್ಯಾಂಕ್ ಖಾತೆ ಸಮಸ್ಯೆಯಿಂದ ಹಣ ತಲುಪಿಲ್ಲ. ಈ ಸಮಸ್ಯೆಯನ್ನು ಬೇಗ ಬಗೆಹರಿಸಲಾಗುವುದು. ಬೆಲೆ ಏರಿಕೆಯಿಂದ ನಮ್ಮ ಗ್ರಾಮೀಣ ಪ್ರದೇಶದ ಜನರು ತತ್ತರಿಸಿ ಹೋಗಿದ್ದರು. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಸ್ವಲ್ಪ ಉಸಿರಾಡುವಂತೆ ಮಾಡಿವೆ ಎಂದು ತಿಳಿಸಿದರು.


Spread the love

About Laxminews 24x7

Check Also

ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆ ನಿಮ್ಮ ನಂಬಿಕೆ ಉಳಿಸಿಕೊಂಡು, ತಾಲ್ಲೂಕಿನ ರೈತರು ಮತ್ತು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ

Spread the loveಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ