Breaking News

ಇಂದಿನಿಂದ ಬಿಗ್​ ಬಾಸ್​ ಸೀಸನ್​ 10 ಶುರುವಾಗಿದೆ. ಬಿಗ್​ಬಾಸ್​ ಮನೆಗೆ ಎಂಟ್ರಿ ಕೊಟ್ಟ ಸ್ಫರ್ಧಿಗಳ ಪಟ್ಟಿ ಇಂತಿದೆ..

Spread the love

 

ಕನ್ನಡದ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ಬಿಗ್​ ಬಾಸ್ ಭಾನುವಾರದಿಂದ ಆರಂಭವಾಗಿದೆ. ಕಿಚ್ಚ ಸುದೀಪ್ ಸಾರಥ್ಯದಲ್ಲಿ ನಡೆಯಲಿರುವ​ ಬಿಗ್​ ಬಾಸ್​ ಸೀಸನ್​ 10ಗೆ ಅಧಿಕೃತವಾಗಿ ಚಾಲನೆ ಸಿಕ್ಕಿದೆ.

ಈ ಸೀಸನ್​ನ​​ ಗ್ರಾಂಡ್​ ಇವೆಂಟ್​ ಭಾನುವಾರದಿಂದ ಕಲರ್ಸ್​ ಕನ್ನಡದಲ್ಲಿ ಪ್ರಸಾರ ಶುರುವಾಗಿದೆ.

ಬಿಗ್​ ಬಾಸ್​ ರಿಯಾಲಿಟಿ ಶೋನ ಒಂಭತ್ತು ಆವೃತ್ತಿಗಳು ಯಶಸ್ವಿಯಾಗಿದ್ದು, ಅಪಾರ ಸಂಖ್ಯೆಯ ವೀಕ್ಷಕರನ್ನು ಪಡೆದಿದೆ. ಬಿಗ್​ ಬಾಸ್​ನಲ್ಲಿನ ಸುದೀಪ್​ ನಿರೂಪಣೆ ಅತಿ ಹೆಚ್ಚು ಜನರನ್ನು ಕಾರ್ಯಕ್ರಮ ವೀಕ್ಷಿಸುವಂತೆ ಮಾಡಿದೆ. ಈ ಬಾರಿಯ ಬಿಗ್ ಬಾಸ್​ ಸ್ಪರ್ಧಿಗಳ ಬಗ್ಗೆ ವೀಕ್ಷಕರಲ್ಲಿ ಹೆಚ್ಚಿನ ನಿರೀಕ್ಷೆಯನ್ನು ಉಂಟು ಮಾಡಿತ್ತು. ಜೊತೆಗೆ ವಿವಿಧ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಂತೆ ಜನರು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ್ದರು. ಇದರ ನಡುವೆ ಇಂದು ನಡೆದ ಬಿಗ್​ಬಾಸ್​ ಗ್ರಾಂಡ್​ ಪ್ರೀಮಿಯರ್​ನಲ್ಲಿ ಬಿಗ್​ಬಾಸ್​ ಸ್ಪರ್ಧಿಗಳನ್ನು ಪರಿಚಯಿಸಲಾಗಿದೆ.

ಬಿಗ್​ ಬಾಸ್​ ಸೀಸನ್​ 10 : ಜಗತ್ತಿನ ಅತಿದೊಡ್ಡ ರಿಯಾಲಿಟಿ ಶೋ ಎಂಬ ಹೆಗ್ಗಳಿಕೆ ಪಾತ್ರವಾಗಿರುವ ಬಿಗ್​ಬಾಸ್ ಸ್ಪರ್ಧಿಗಳ ಬಗ್ಗೆ ಜನರಲ್ಲಿ ಕುತೂಹಲ ಮೂಡಿಸಿತ್ತು. ಕೊನೆಗೂ ಅಭ್ಯರ್ಥಿಗಳ ಹೆಸರು ಬಹಿರಂಗವಾಗಿದೆ. ಇದಕ್ಕೂ ಮುನ್ನ ಬಿಗ್​ಬಾಸ್​ ಮನೆಗೆ ಹೋಗುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ವೀಕ್ಷಕರಿಗೆ ಅವಕಾಶ ಕಲ್ಪಿಸಲಾಗಿತ್ತು.

ಹೊಸ ಸಾಂಗ್​, ಹೊಸ ಮನೆ, ಹೊಸ ಸ್ಪರ್ಧಿ, ಈ ಬಾರಿ ಬೇರೆನೇ ಲೆಕ್ಕಾಚಾರ : ಈ ಬಾರಿಯ ಬಿಗ್​ಬಾಸ್​ನಲ್ಲಿ ಹಲವು ವಿಶೇಷ ಸ್ಪರ್ಧಾಳುಗಳನ್ನು ಕರೆತರಲಾಗಿದೆ. ಬಿಗ್​ಬಾಸ್​ ಮನೆಯಲ್ಲಿ ಅಬ್ಬರಿಸಲು ಮೊದಲ ಕಂಟೆಸ್ಟಂಟ್​ ಆಗಿ ಪುಟ್ಟ ಗೌರಿಯ ಮದುವೆ ಧಾರವಾಹಿಗಳಲ್ಲಿ ಮಿಂಚಿರುವ ನಮ್ರತಾ ಅವರು ಆಗಮಿಸಿದ್ದಾರೆ. ಎರಡನೇ ಸ್ಪರ್ಧಿಯಾಗಿ ಕಿರುತೆರೆ ನಟ ಸ್ನೇಹಿತ್​ ಅವರು ಬಿಗ್​ಬಾಸ್​ ಮನೆಯನ್ನು ಪ್ರವೇಶಿಸಿದ್ದಾರೆ. ಮೂರನೇ ಬಿಗ್ ಬಾಸ್​ ಸ್ಪರ್ಧಿಯಾಗಿ ರ್ಯಾಪರ್​ ಈಶಾನಿ ಆಯ್ಕೆಯಾಗಿದ್ದಾರೆ. ನಾಲ್ಕನೇ ಸ್ಪರ್ಧಿಯಾಗಿ ಹರಹರ ಮಹಾದೇವ್​ ಧಾರವಾಹಿಯಲ್ಲಿ ಶಿವನ ಪಾತ್ರದಲ್ಲಿ ಮಿಂಚಿದ್ದ ವಿನಯ್​ ಬಿಗ್​ಬಾಸ್​ ಮನೆಗೆ ಎಂಟ್ರಿ ಕೊಟ್ಟಿದ್ದಾರೆ.

ಐದನೇ ಸ್ಪರ್ಧಿಯಾಗಿ ಕಾಮಿಡಿ ಕಿಲಾಡಿಗಳು ಖ್ಯಾತಿಯ ಸಂತೋಷ್​​ ಬಿಗ್​ ಬಾಸ್​ಗೆ ಎಂಟ್ರಿಯಾಗಿದ್ದಾರೆ. ಆರನೇ ಸ್ಪರ್ಧಿಯಾಗಿ ಮಾಡೆಲಿಂಗ್​ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ತೃತೀಯ ಲಿಂಗಿ ನೀತು ವನಜಾಕ್ಷಿ ಆಯ್ಕೆಯಾಗಿದ್ದಾರೆ. ಏಳನೇ ಸ್ಪರ್ಧಿಯಾಗಿ ರಂಗೋಲಿ ಧಾರಾವಾಹಿ ಮೂಲಕ ಮನೆಮಾತಾಗಿದ್ದ ಸಿರಿ ಬಿಗ್​ಬಾಸ್​ ಅಂಗಳಕ್ಕೆ ಧುಮುಕಿದ್ದಾರೆ. ಎಂಟನೇ ಸ್ಪರ್ಧಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಚಿರಪರಿಚಿತ, ಮೈಸೂರಿನ ಸ್ನೇಕ್​ ಮಾಸ್ಟರ್​ ಸ್ನೇಕ್​ ಶ್ಯಾಮ್​ ಅವರು ಬಿಗ್​ ಬಾಸ್​ ಮನೆಗೆ ಎಂಟ್ರಿ ಕೊಟ್ಟಿದ್ದಾರೆ.

9ನೇ ಕಂಟೆಸ್ಟಂಟ್​ ಆಗಿ ಧಾರವಾಹಿ ನಟಿ ಭಾಗ್ಯಶ್ರೀ ಬಿಗ್​ ಮನೆಗೆ ಕಾಲಿರಿಸಿದ್ದಾರೆ. ಸೋಮವಾರದಿಂದ ಬಿಗ್​ಬಾಸ್​ ಕಾರ್ಯಕ್ರಮ ಆರಂಭವಾಗಿದ್ದು, ಅಸಲಿ ಆಟ ಇನ್ನು ಶುರುವಾಗಲಿದೆ.


Spread the love

About Laxminews 24x7

Check Also

ವರದಕ್ಷಿಣೆ ಕಿರುಕುಳ ಆರೋಪ, ಐಎಸ್‌ಡಿ ಡಿವೈಎಸ್‌ಪಿ ವಿರುದ್ಧ ಎಫ್ಐಆರ್

Spread the love ಬೆಂಗಳೂರು : ಡಿವೈಎಸ್‌ಪಿಯೊಬ್ಬರ ವಿರುದ್ಧ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. 41 ವರ್ಷದ ಮಹಿಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ