Breaking News

ಸಿಎಂ ಭೇಟಿಯಾದ ಅಶ್ವಿನಿ ಪುನೀತ್ ರಾಜಕುಮಾರ್;

Spread the love

ಬೆಂಗಳೂರು : ಖಾಸಗಿ ಕಾರ್ಯಕ್ರಮಕ್ಕೆ ಆಹ್ವಾನಿಸಲು ಅಶ್ವಿನಿ ಪುನೀತ್ ರಾಜ್​ಕುಮಾರ್ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು.

ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದರು. ಈ ವೇಳೆ ಖಾಸಗಿ ಕಾರ್ಯಕ್ರಮವೊಂದಕ್ಕೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಿದರು. ಈ ವೇಳೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಮಾಜಿ ಸಚಿವ ಹೆಚ್.ಎಂ ರೇವಣ್ಣ ಜೊತೆಗಿದ್ದರು.

ಪವರ್​ ಸ್ಟಾರ್​ ದಿ. ಪುನೀತ್ ರಾಜಕುಮಾರ್ ಅವರ ಶಿಲ್ಪದ ಸಂಗ್ರಹದ ಅನಾವರಣ ಕಾರ್ಯಕ್ರಮಕ್ಕೆ ಅಶ್ವಿನಿ ಪುನೀತ್ ರಾಜಕುಮಾರ್ ಸಿಎಂಗೆ ಆಹ್ವಾನ ನೀಡಿದರು. ನಗರದ ಖಾಸಗಿ ಹೊಟೇಲ್​ನಲ್ಲಿ ಅ.16ರಂದು ಸಂಜೆ 4 ಗಂಟೆಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಿಎಂ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.


Spread the love

About Laxminews 24x7

Check Also

ಕೇರಳ ಸಿಎಂ ಪುತ್ರಿಯ ಕಂಪನಿ ವಿರುದ್ಧ ತನಿಖೆಗೆ ಆದೇಶ ಪ್ರಶ್ನಿಸಿ ಮೇಲ್ಮನವಿ: ಕೇಂದ್ರಕ್ಕೆ ಹೈಕೋರ್ಟ್ ನೋಟಿಸ್‌

Spread the love ಬೆಂಗಳೂರು: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರ ಪುತ್ರಿ ಟಿ.ವೀಣಾ ಅವರು ನಿರ್ದೇಶಕಿಯಾಗಿರುವ ಎಕ್ಸಲಾಜಿಕ್‌ ಸಲ್ಯೂಷನ್‌ ಪ್ರೈವೇಟ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ