Breaking News

ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್‌ಗೆ ನೋಟಿಸ್ ಜಾರಿ ಮಾಡಿದ ಸುಪ್ರೀಂ ಕೋರ್ಟ್

Spread the love

ನವದೆಹಲಿ: ಪಕ್ಷಾಂತರ ನಿಷೇಧ ಕಾಯ್ದೆಯಡಿ ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ಅಜಿತ್ ಪವಾರ್ ಮತ್ತು ಇತರ ಏಳು ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಶರದ್ ಪವಾರ್ ಬಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಸೋಮವಾರ ನೋಟಿಸ್ ಜಾರಿ ಮಾಡಿದೆ.

ತ್ವರಿತ ನಿರ್ಧಾರ ಕೈಗೊಳ್ಳಲು ಸೂಚನೆಗಳನ್ನು ನೀಡುವಂತೆ ಆದೇಶಿಸಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರ ಪೀಠವು ಮುಂದಿನ ಶುಕ್ರವಾರ ಅರ್ಜಿಯನ್ನು ಶಿವಸೇನೆ ಪ್ರಕರಣದೊಂದಿಗೆ ಪಟ್ಟಿ ಮಾಡಲು ನಿರ್ಧರಿಸಿದೆ. ಇದರಲ್ಲಿ ನ್ಯಾಯಾಲಯವು ಅನರ್ಹತೆ ಪ್ರಕರಣಗಳ ಬಗ್ಗೆ ನಿರ್ಧರಿಸಲು ಮಹಾರಾಷ್ಟ್ರ ಸ್ಪೀಕರ್‌ಗೆ ಈ ಹಿಂದೆ ನಿರ್ದೇಶನಗಳನ್ನು ನೀಡಿತ್ತು.

ಎನ್‌ಸಿಪಿ ಪರವಾಗಿ ಅರ್ಜಿದಾರ ಜಯಂತ್ ಪಾಟೀಲ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದರು. ಅಜಿತ್‌ ಪವಾರ್‌ ಬಣದ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್‌ ರೋಹಟಗಿ, ಸೆಪ್ಟೆಂಬರ್‌ನಲ್ಲಿಯೇ ಅನರ್ಹತೆ ಅರ್ಜಿ ಸಲ್ಲಿಕೆಯಾಗಿದ್ದು, ಅರ್ಜಿದಾರರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ ಎಂದರು. ಈ ಹೇಳಿಕೆಯನ್ನು ನಿರಾಕರಿಸಿದ ಸಿಬಲ್, ಜುಲೈನಲ್ಲಿಯೇ ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂದು ಹೇಳಿದರು.

ಶಿವಸೇನೆ ಪ್ರಕರಣದ ಜೊತೆಗೆ ಪ್ರಕರಣವನ್ನು ಪಟ್ಟಿ ಮಾಡುವುದಾಗಿ ಸಿಜೆಐ ಹೇಳಿದಾಗ, ಎರಡು ಪ್ರಕರಣಗಳಲ್ಲಿನ ಸತ್ಯಗಳು ವಿಭಿನ್ನವಾಗಿವೆ ಎಂದು ರೋಹಟಗಿ ಹೇಳಿದರು. ಸೆಪ್ಟೆಂಬರ್ 18 ರಂದು ಶಿವಸೇನೆಯಿಂದ ಬಂಡೆದ್ದಿರುವ ಮಹಾರಾಷ್ಟ್ರದ ಈಗಿನ ಸಿಎಂ ಏಕನಾಥ್​ ಶಿಂಧೆ ಮತ್ತು ಅವರ ಬಣದ 16 ಶಾಸಕರ ವಿರುದ್ಧದ ಅನರ್ಹತೆ ಅರ್ಜಿಯನ್ನು ಒಂದು ವಾರದೊಳಗೆ ಕೈಗೆತ್ತಿಕೊಂಡು ವಿಚಾರಣೆ ನಡೆಸಿ, ಎರಡು ವಾರದೊಳಗೆ ಮಾಹಿತಿ ನೀಡುವಂತೆ ಸುಪ್ರೀಂಕೋರ್ಟ್​ ಸ್ಪೀಕರ್​ಗೆ ಸೂಚಿಸಿತ್ತು.

ಶಿವಸೇನೆ ಬಂಡಾಯ ಶಾಸಕರ ಅನರ್ಹತೆ ಅರ್ಜಿಯ ವಿಚಾರಣೆಯನ್ನು ಸೋಮವಾರ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು, ಪಕ್ಷ ವಿರೋಧಿ ಚಟುವಟಿಕೆಗಳ ಆರೋಪ ಹೊತ್ತಿರುವ ಸಿಎಂ ಏಕನಾಥ್​ ಶಿಂಧೆ ಮತ್ತವರ ಬಣದ ಕುರಿತ ವಿಚಾರಣೆಗೆ 4 ತಿಂಗಳ ಹಿಂದೆಯೇ ಆದೇಶಿಸಲಾಗಿದೆ. ಆದರೆ, ಈ ಬಗ್ಗೆ ಯಾವುದೇ ಪ್ರಗತಿ ಕಂಡುಬಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿತು


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ