Breaking News

ಕಾಮಗಾರಿಯ ಬಿಲ್ ​ವಿಳಂಬ ಆರೋಪ: ಬೆಳಗಾವಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಗುತ್ತಿಗೆದಾರ

Spread the love

ಬೆಳಗಾವಿ: ಕಾಮಗಾರಿಯ ಬಿಲ್ ​ವಿಳಂಬವಾಗಿದೆ ಎಂದು ಆರೋಪಿಸಿದ ಗುತ್ತಿಗೆದಾರನೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದಲ್ಲಿ ಇಂದು (ಮಂಗಳವಾರ) ನಡೆದಿದೆ. ಬೈಲಹೊಂಗಲ ತಾಲೂಕಿನ ಗಣಿಕೊಪ್ಪ ಗ್ರಾಮದ ನಾಗಪ್ಪ ಬಂಗಿ ಆತ್ಮಹತ್ಯೆಗೆ ಯತ್ನಿಸಿದ ಗುತ್ತಿಗೆದಾರ.

 

ಬಿಲ್ ​ವಿಳಂಬವಾಗಿದೆ ಎಂದು ಆರೋಪಿಸಿದ ನಾಗಪ್ಪ ಲೋಕೋಪಯೋಗಿ ಇಲಾಖೆ ಕಚೇರಿಯ ಮುಂದೆ ಕುಟುಂಬಸಹಿತ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ