ಬೆಳಗಾವಿ: ಎಣ್ಣೆ ಪಾರ್ಟಿ ಮಾಡಿದ್ದ 7 ಸಿಬ್ಬಂದಿ ಅಮಾನತು ಮಾಡಿ DHO ಆದೇಶ

Spread the love

 

ಬೆಳಗಾವಿ : ನಗರದ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಯಲ್ಲಿ ಎಣ್ಣೆ ಪಾರ್ಟಿ ಮಾಡಿದ್ದ ಆರೋಪಕ್ಕೆ ಸಂಬಂಧಪಟ್ಟಂತೆ ಏಳು ಸಿಬ್ಬಂದಿಯನ್ನು ಅಮಾನತು ಮಾಡಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.

ಮಹೇಶ ಕೋಣಿ ಬುಧವಾರ ಆದೇಶ ಹೊರಡಿಸಿದ್ದಾರೆ. ಜಿಲ್ಲಾ ಆರೋಗ್ಯಾಧಿಕಾರಿ ಕಾರು ಚಾಲಕ ಮಂಜುನಾಥ ಪಾಟೀಲ್​​, ಸಿಬ್ಬಂದಿ ಮಹೇಶ ಹಿರೇಮಠ, ರಮೇಶ ನಾಯಿಕ, ಸತ್ಯಪ್ಪ ತಮ್ಮನ್ನವರ, ಅನಿಲ ತಿಪ್ಪನ್ನವರ, ದೀಪಕ ಗಾವಡೆ, ಯಲ್ಲಪ್ಪ ಮುನ್ನವಳ್ಳಿ ಎಂಬವರನ್ನು ಅಮಾನತು ಮಾಡಲಾಗಿದೆ.

ನಗರದ ಟಿಳಕವಾಡಿಯಲ್ಲಿರುವ ಡಿಹೆಚ್​​ಒ ಕಚೇರಿ ಹಿಂಭಾಗದಲ್ಲಿರುವ ಕೊಠಡಿಯಲ್ಲಿ ಗಾಂಧಿಜೀ ಫೋಟೋ ಎದುರೇ ಸಿಬ್ಬಂದಿ ಮದ್ಯಪಾನ ಮಾಡಿರುವುದು ವಿಡಿಯೋದಲ್ಲಿ ಸೆರೆಯಾಗಿತ್ತು. ಆದರೆ, ಈ ಘಟನೆ ಯಾವಾಗ ನಡೆದಿದೆ ಎಂಬ ಬಗ್ಗೆ ಸರಿಯಾದ ಮಾಹಿತಿ ಇಲ್ಲ. ಈ ವಿಡಿಯೋದಲ್ಲಿ ಸಿಬ್ಬಂದಿ ಸಾರಾಯಿ ಕುಡಿಯುತ್ತಿರುವುದು, ಸಿಗರೇಟು ಸೇದುತ್ತಿರುವುದು, ಡ್ಯಾನ್ಸ್ ಹಾಗೂ ಹರಟೆ ಹೊಡೆಯುತ್ತಿರುವುದು ಸೆರೆಯಾಗಿತ್ತು. ಈ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ಟೀಕೆ ಕೂಡ ವ್ಯಕ್ತವಾಗಿತ್ತು. ಇದರಿಂದ ಎಚ್ಚೆತ್ತುಕೊಂಡ ಡಿಎಚ್‌ಒ ಡಾ. ಮಹೇಶ ಕೋಣಿ ಪಾರ್ಟಿಯಲ್ಲಿ ಭಾಗಿಯಾಗಿದ್ದ 7 ಸಿಬ್ಬಂದಿ ವಿರುದ್ಧ ಕ್ರಮ‌ ಕೈಗೊಂಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ್ದ ಡಿಹೆಚ್​ಒ ಡಾ. ಮಹೇಶ ಕೋಣಿ, ”ವಿಡಿಯೋದಲ್ಲಿ ನೋಡಿದಾಗ ಮೇಲ್ನೋಟಕ್ಕೆ ನಮ್ಮ ಸಿಬ್ಬಂದಿಗಳೇ ಪಾರ್ಟಿ ಮಾಡಿರುವುದು ಕಂಡುಬಂದಿದೆ. ಇದಕ್ಕೂ ಮುಂಚೆ ಈ ಘಟನೆ ನಮ್ಮ ಗಮನಕ್ಕೆ ಬಂದಿಲ್ಲ. ಕೂಲಂಕಷವಾಗಿ ತನಿಖೆ ಮಾಡಿ ಸಿಬ್ಬಂದಿ ವಿರುದ್ಧ ಕ್ರಮಕೈಗೊಳ್ಳುತ್ತೇನೆ. ಸರ್ಕಾರಿ ಸಿಬ್ಬಂದಿಗಳು ಕಚೇರಿಯಲ್ಲಿ ಎಣ್ಣೆ ಪಾರ್ಟಿ ಮಾಡುವುದು ಸರ್ಕಾರಿ ಕರ್ತವ್ಯಕ್ಕೆ ವಿರುದ್ಧವಾಗಿದೆ. ಈ ರೀತಿ ಮಾಡಿರುವುದು ತಪ್ಪು. ಈ ವಿಡಿಯೋವನ್ನು ಪರಿಶೀಲನೆ ಮಾಡಿ ತಪ್ಪು ಕಂಡು ಬಂದಲ್ಲಿ ನಮ್ಮ ಕಚೇರಿ ಸಿಬ್ಬಂದಿ ವಿರುದ್ಧ ಕ್ರಮಕೈಗೊಳ್ಳುತ್ತೇನೆ” ಎಂದು ಹೇಳಿದ್ದರು.


Spread the love

About Laxminews 24x7

Check Also

ದೀಪಾವಳಿ ಬಳಿಕ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಸಾಧ್ಯತೆ

Spread the love ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ದೀಪಾವಳಿ ಹಬ್ಬದ ಬಳಿಕ ಮತ್ತು ನವೆಂಬರ್‌ 26ರ ಮುನ್ನ ನಡೆಯುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ