Breaking News

ಹಾವೇರಿ: ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಗ್ರಾಪಂ ಸದಸ್ಯೆಯಾಗಿದ್ದ ಮಹಿಳೆಗೆ 7 ವರ್ಷ ಜೈಲು ಶಿಕ್ಷೆ

Spread the love

ಹಾವೇರಿ: ಸುಳ್ಳು ದಾಖಲಾತಿ ಸೃಷ್ಟಿಸಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದು ಗ್ರಾಮ ಪಂಚಾಯತ್ ಸದಸ್ಯೆಯಾಗಿದ್ದ ಹಾವೇರಿ ತಾಲೂಕಿನ ಗುತ್ತಲ ಗ್ರಾಮದ ಮುಕ್ತಾಬಾಯಿ ಬೀಸೆಗೆ ಹಾವೇರಿ ಒಂದನೇ ಅಧಿಕ ಜಿಲ್ಲಾ ಮತ್ತ ಸತ್ರ ನ್ಯಾಯಾಲಯ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

ಗ್ರಾಪಂ ಸದಸ್ಯೆ ಮುಕ್ತಾಬಾಯಿಗೆ ಏಳು ವರ್ಷ ವರ್ಷಗಳ ಕಾರಾಗೃಹ ಶಿಕ್ಷೆ ಮತ್ತು 37 ಸಾವಿರ ರೂಪಾಯಿ ದಂಡ ವಿಧಿಸಿ ಕೋರ್ಟ್ ತೀರ್ಪು ನೀಡಿದೆ.

ಇನ್ನು ಮುಕ್ತಾಬಾಯಿಗೆ ಸಹಾಯ ಮಾಡಿದ ಆರೋಪದ ಮೇಲೆ ಭರಡಿ ಗ್ರಾಮದ ಮಾರುತಿ ಹನುಮಂತಪ್ಪ ಕಿಳ್ಳಿಕಾತರ್ ಎಂಬುವರಿಗೂ ಏಳು ವರ್ಷ ಜೈಲು ಶಿಕ್ಷೆ ಮತ್ತು 37 ಸಾವಿ ರೂ ದಂಡ ವಿಧಿಸಲಾಗಿದೆ.

ನ್ಯಾಯಾಲಯದ ನ್ಯಾಯಾಧೀಶ ಜಿ.ಎಲ್.ಲಕ್ಷ್ಮೀನಾರಾಯಣ ಅವರು ಈ ಆದೇಶ ನೀಡಿದ್ದಾರೆ. ಹಾವೇರಿ ತಾಲೂಕಿನ ಗುತ್ತಲ ಗ್ರಾಮದ ನಿವಾಸಿ ಮುಕ್ತಾಬಾಯಿ ಹಿಂದೂ ಗೊಂದಳಿ ಪ್ರವರ್ಗ 1 ಕ್ಕೆ ಸೇರಿದ್ದರು. ಆದಾಗ್ಯೂ ಸಹ ಕಳ್ಳಪ್ಪ ದೊಡ್ಡರಾಮಪ್ಪ ತಳವಾರ ಮತ್ತು ಮಾರುತಿ ಹನುಮಂತಪ್ಪ ಕಿಳ್ಳಿಕ್ಯಾತರ ಸಹಾಯ ಪಡೆದು ಸುಳ್ಳು ವ್ಯಾಸಂಗ ಪ್ರಮಾಣ ಪತ್ರ ದಾಖಲಾತಿ ಸೃಷ್ಟಿಸಿದ್ದರು. ಅಲ್ಲದೇ ಸುಳ್ಳು ದಾಖಲಾತಿಗಳ ಮೇಲೆ ಹಾವೇರಿ ತಹಶೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದಿದ್ದರು. ಅದೇ ಪ್ರಮಾಣ ಪತ್ರದ ಮೇಲೆ 2010 ರಲ್ಲಿ ಗುತ್ತಲ ಗ್ರಾಮ ಪಂಚಾಯತ್‌ಗೆ ನಡೆದ ಚುನಾವಣೆಯಲ್ಲಿ ವಾರ್ಡ್ ನಂಬರ್ 10 ಪರಿಶಿಷ್ಟ ಜಾತಿಗೆ ಮೀಸಲಾಗಿದ್ದ ಸ್ಥಾನಕ್ಕೆ ಸ್ಪರ್ಧಿಸಿ ಆಯ್ಕೆಯಾಗಿದ್ದರು.

ಸುಳ್ಳು ದಾಖಲಾತಿ ಸಲ್ಲಿಸಿ ಗ್ರಾಪಂ ಚುನಾವಣೆಗೆ ಸ್ಪರ್ಧಿಸಿ ಆಯ್ಕೆ ಆಗಿರುವ ಕುರಿತಂತೆ ಹಾವೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ತನಿಖಾಧಿಕಾರಿ ಬೆಳಗಾವಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಪಿಐ ಎ.ಬಿ.ಹಪ್ಪಳಿ ಪ್ರಕರಣದ ತನಿಖೆ ನಡೆಸಿ ದೋಷಾರೋಪಣ ಪತ್ರವನ್ನ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಆರೋಪಿ ಮೇಲೆ ಕಲಂ 196, 197, 198, 420, 465, 468, 471, 477ಎ, ರೆವಿ 34 ಭಾರತೀಯ ದಂಡ ಸಂಹಿತೆ ಮತ್ತು 3(1)(9) ಎಸ್ಸಿಎಸ್ಟಿ (ಪಿಎ) ಕಾಯ್ದೆ ಅಡಿ ಆರೋಪಗಳು ರುಜುವಾತಾಗಿದ್ದವು. ಈ ಹಿನ್ನೆಲೆಯಲ್ಲಿ ಆರೋಪಿತರಿಗೆ ಶಿಕ್ಷೆ ಹಾಗೂ ದಂಡ ವಿಧಿಸಿ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸರ್ಕಾರಿ ಅಭಿಯೋಜಕರಾದ ಸರೋಜಾ ಕೂಡಲಗಿಮಠ ವಾದ ಮಂಡಿಸಿದ್ದರು.


Spread the love

About Laxminews 24x7

Check Also

ಅಗಷ್ಟ 29 ಮತ್ತು 30 ರಂದು ಹುಕ್ಕೇರಿ ಅವುಜಿಕರ ಮಠದ ಜಾತ್ರಾಮಹೋತ್ಸವ ಜರಗುವದು – ಮಂಜುನಾಥ ಮಹಾರಾಜ.

Spread the loveಹುಕ್ಕೇರಿ : ಅಗಷ್ಟ 29 ಮತ್ತು 30 ರಂದು ಹುಕ್ಕೇರಿ ಅವುಜಿಕರ ಮಠದ ಜಾತ್ರಾಮಹೋತ್ಸವ ಜರಗುವದು – …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ