Breaking News

ರೈತರ ಜಮೀನಿನಲ್ಲಿ ಕೆರೆ ನಿರ್ಮಿಸಿ 14 ವರ್ಷಗಳೇ ಕಳೆದಿವೆ. ಭೂಮಿ ಕೊಟ್ಟ ರೈತರಿಗೆ ಪರಿಹಾರ ಸಿಕ್ಕಿಲ್ಲ. ಕೆರೆಯಲ್ಲಿ ಮುಳುಗಿ ಪ್ರಾಣ ಬಿಡುವ ಎಚ್ಚರಿಕೆ!

Spread the love

ಬೆಳಗಾವಿ: ಊರಲ್ಲಿ ಕುಡಿಯುವ ನೀರಿಗೆ ಹಾಹಾಕಾರವಿತ್ತು.‌ ನೀರಿನ ಬವಣೆ ನೀಗಿಸಲು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಗ್ರಾಮದ ರೈತರ ಜಮೀನಿನಲ್ಲಿ ಕೆರೆ ನಿರ್ಮಿಸಿ 14 ವರ್ಷಗಳೇ ಕಳೆದಿವೆ. ಆದರೆ, ಈವರೆಗೂ ಭೂಮಿ ಕೊಟ್ಟ ರೈತರಿಗೆ ಪರಿಹಾರ ಸಿಕ್ಕಿಲ್ಲ. ಇದರಿಂದ ಆಕ್ರೋಶಗೊಂಡ ಸಂತ್ರಸ್ಥರು ಪರಿಹಾರ ಕೊಡದಿದ್ದರೆ, ಇದೇ ಕೆರೆಯಲ್ಲಿ ಮುಳುಗಿ ಜೀವ ಬಿಡುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಸಿದ್ದಾರೆ. ಹಾಗಾದರೆ ಯಾವ ಊರು? ಏನಿವರ ವ್ಯಥೆ?

ಸಚಿವರ ತವರು ಕ್ಷೇತ್ರ ಬೆಳಗಾವಿ ಗ್ರಾಮೀಣ ವ್ಯಾಪ್ತಿಯ ಅತವಾಡ ಗ್ರಾಮದ ರೈತರು ಸಣ್ಣ ನೀರಾವರಿ ‌ಇಲಾಖೆಯ ಅಧಿಕಾರಿಗಳನ್ನು ನಂಬಿ ಕೆಟ್ಟಿದ್ದಾರೆ. ಊರಿಗೆ ನೀರು ಬೇಕಿತ್ತು, ಕೆರೆ ನಿರ್ಮಾಣಕ್ಕೆ ಅಧಿಕಾರಿಗಳಿಗೆ ಭೂಮಿ ಬೇಕಿತ್ತು. ಅಧಿಕಾರಿಗಳನ್ನು ನಂಬಿ ಫಲವತ್ತಾದ ಜಮೀನು ಬಿಟ್ಟುಕೊಟ್ಟ ರೈತರೀಗ ಸಂಕಷ್ಟದಲ್ಲಿದ್ದಾರೆ. ಪರಿಹಾರ ನೀಡದೆ ಬೆಳಗಾವಿಯ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ರೈತರನ್ನು ಸತಾಯಿಸುತ್ತಿದ್ದಾರೆ. ಹಾಗಾಗಿ, ಕೆರೆಯಲ್ಲೇ ನಿಂತುಕೊಂಡು ರೈತರು ಪರಿಹಾರಕ್ಕಾಗಿ ಅಂಗಲಾಚುತ್ತಿದ್ದಾರೆ.

ಕೆರೆ ನಿರ್ಮಾಣಕ್ಕೆ 40 ರೈತರು 60 ಎಕರೆ ಜಮೀನು ಬಿಟ್ಟು‌ಕೊಟ್ಟಿದ್ದಾರೆ. ಪರಿಹಾರ ನೀಡುವ ಭರವಸೆಯಿಂದ 14 ವರ್ಷಗಳ ಹಿಂದೆ ರೈತರು ಭೂಮಿ ‌ಬಿಟ್ಟುಕೊಟ್ಟಿದ್ದರು‌. ಆದರೆ, ಈವರೆಗೂ ಪರಿಹಾರ ಸಿಗದಿದ್ದರಿಂದ ರೈತರು ಕಂಗಾಲಾಗಿದ್ದಾರೆ. ಅತವಾಡ ಗ್ರಾಮದಲ್ಲಿ ಚಿಕ್ಕ ಚಿಕ್ಕ ಹಿಡುವಳಿದಾರರೇ ಹೆಚ್ಚಿದ್ದು, ಭೂಮಿ ಕಳೆದುಕೊಂಡು ಕೂಲಿ ನಾಲಿ ಮಾಡಿ ಬದುಕಿನ ಬಂಡಿ ಸಾಗಿಸುವ ದುಸ್ಥಿತಿ ಎದುರಾಗಿದೆ‌.


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveಬೆಳಗಾವಿ: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಬೈಲಹೊಂಗಲ ತಾಲ್ಲೂಕಿನ ಒಕ್ಕುಂದ ಗ್ರಾಮದ ವಿದ್ಯಾರ್ಥಿನಿ ಜ್ಯೋತಿ ಮಲ್ಲನಗೌಡ ಪಾಟೀಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ