Breaking News

ಹೆತ್ತ ಮಗಳನ್ನೇ ನೀರಿನ ಸಂಪಿಗೆ ತಳ್ಳಿ ಕೊಲೆ ಮಾಡಿದ ಹೆತ್ತವ್ವ

Spread the love

ರಾಯಚೂರು: ಮಾನಸಿಕ ಅಸ್ವಸ್ಥೆಯಾಗಿರುವ ಹೆತ್ತ ತಾಯಿಯೊಬ್ಬಳು ತನ್ನ ಮಗಳನ್ನು ಕೊಲೆ ಮಾಡಿದ ಘಟನೆ ಜಿಲ್ಲೆಯ ಕವಿತಾಳ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

 

ಜಿಲ್ಲೆಯ ಸಿರವಾರ ತಾಲೂಕಿನ ದೋತ್ರಬಂಡಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೃತ ಬಾಲಕಿಯನ್ನು 3ನೇ ತರಗತಿಯ ಓದುತ್ತಿದ್ದ ಶ್ರೀದೇವಿ ಎಂದು ಗುರುತಿಸಲಾಗಿದೆ. ತಾಯಿ ಲಲಿತಾ ಎಂಬ ಆರೋಪಿ ತನ್ನ ಮಗಳನ್ನು ತನ್ನ ಕೈಯಿಂದಲೇ ಕೊಲೆ ಮಾಡಿದ ಆರೋಪಿಯಾಗಿದ್ದಾಳೆ. ಮನೆಯ ಪಕ್ಕದಲ್ಲಿ ಇದ್ದ ನೀರಿನ ಸಂಪಿನೊಳಗೆ ಮುಳುಗಿಸಿ ಕೊಲೆ ಮಾಡಿರುವ ತಾಯಿ ಲಲಿತಾ ಘಟನೆ ಬಳಿಕ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

ತಾಯಿ ಲಲಿತಾ ಮಾನಸಿಕ ಅಸ್ವಸ್ಥೆ ಎಂದು ತಿಳಿದುಬಂದಿದೆ. ಭಾನುವಾರ ರಾತ್ರಿಯ ವೇಳೆ ಮನೆಯಲ್ಲಿ ಮಲಗಿದ್ದ ಮಗಳನ್ನು ಎತ್ತುಕೊಂಡು ಹೋಗಿ ನೀರಿನ ಸಂಪಿನೊಳಗೆ ಮುಳುಗಿಸಿ ಕೊಲೆ ಮಾಡಿದ್ದಾಳೆ ಎಂಬ ಆರೋಪ ತಾಯಿ ಲಲಿತಾ ಮೇಲೆ ಕೇಳಿ ಬಂದಿದೆ. ಘಟನೆ ಬಳಿಕ ಲಲಿತಾ ಸಹ ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಹಿಳೆ ಈ ಕೃತ್ಯವೆಸಗಿರುವುದರಿಂದ ಪತಿ ಸೇರಿದಂತೆ ಕುಟುಂಬಸ್ಥರಿಗೆ ಆಘಾತವಾಗಿದೆ. ಸುದ್ದಿ ತಿಳಿದಾಕ್ಷಣ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ಕೈಗೊಂಡರು. ಬಳಿಕ ಮೃತ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಮರಣೋತ್ತರ ಪರೀಕ್ಷೆ ಬಳಿಕ ಬಾಲಕಿಯ ಮೃತದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಯಿತು. ಈ ವೇಳೆ ಮೃತ ಪೋಷಕರು ಮತ್ತು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಈ ಘಟನೆ ಕುರಿತು ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ