Breaking News

ನಾಲ್ಕು ತಿಂಗಳಲ್ಲಿ ಸಾಕಷ್ಟು ಬಾರಿ ಹಸ್ತಕ್ಷೇಪ ಆಗಿದೆ.: ಸತೀಶ್ ಜಾರಕಿಹೊಳಿ

Spread the love

ಬೆಂಗಳೂರು : ನಾಲ್ಕು ತಿಂಗಳಲ್ಲಿ ಸಾಕಷ್ಟು ಬಾರಿ ಹಸ್ತಕ್ಷೇಪ ಆಗಿದೆ.

ನನ್ನ ಮೌನ ದೌರ್ಬಲ್ಯವಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಪರೋಕ್ಷವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಡಿ‌.ಕೆ ಶಿವಕುಮಾರ್ ಬೆಳಗಾವಿ ಜಿಲ್ಲೆ ಹಸ್ತಕ್ಷೇಪ ವಿಚಾರವಾಗಿ ಪ್ರತಿಕ್ರಿಯಿಸಿ, ವರ್ಗಾವಣೆ ವಿಚಾರವಾಗಿ ಹಸ್ತಕ್ಷೇಪವಾಗಿದೆ. ಈ ಹಿಂದೆ ಸಾಕಷ್ಟು ಬಾರಿ ಆಗಿದೆ. ನಾನು ಕೂಡ ಕಾಂಪ್ರಮೈಸ್ ಮಾಡಿಕೊಂಡಿದ್ದೇನೆ. ನಾನು ಅನುಸರಿಸಿಕೊಂಡು ಬರುತ್ತಿದ್ದೇನೆ ಎಂದು ಹೇಳಿದರು.

ಪಕ್ಷದ ಹಿತದೃಷ್ಟಿಯಿಂದ ನಾನು ಹೊಂದಿಕೊಂಡು ಹೋಗುತ್ತಿದ್ದೇನೆ. ನಾನು ವರ್ಗಾವಣೆಗೆ ಶಿಫಾರಸು ಮಾಡಿದ್ದೆ. ಮಾಡೋದು ಬಿಡೋದು ಅವರಿಗೆ ಬಿಟ್ಟಿದ್ದು. ನಿಗಮ, ಮಂಡಳಿಯಲ್ಲಿ ಕಾರ್ಯಕರ್ತರಿಗೆ ಅವಕಾಶ ಕೊಡಿ ಎಂದು ಶಿಫಾರಸು ಮಾಡಿದ್ದೆ. ಕೇವಲ ಶಾಸಕರಿಗೆ ಮಾತ್ರ ಬೇಡ ಎಂದು ಹೇಳಿದ್ದೇನೆ. ಮಾಡೋದು ಬಿಡೋದು ಪಕ್ಷಕ್ಕೆ ಬಿಟ್ಟಿದ್ದು ಎಂದು ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದರು‌.

ನನ್ನ ಮೌನ ದೌರ್ಬಲ್ಯ ಅಲ್ಲವೇ ಅಲ್ಲ. ಕಳೆದ 30 ವರ್ಷದಿಂದ ರಾಜಕೀಯದಲ್ಲಿ ಇದ್ದು ಸಕ್ಸಸ್ ಆಗಿದ್ದೇವೆ. ಲಕ್ಷ್ಮಿ ಹೆಬ್ಬಾಳ್ಕರ್ ಜೊತೆ ಯಾವುದೇ ಕಿರಿಕಿರಿಯಿಲ್ಲ. ನಾವು ಅವರನ್ನು ಮೀರಿ ಬೆಳೆದಿದ್ದೇವೆ. ಎಲ್ಲರನ್ನೂ ನಾವು ಸಂಭಾಳಿಸಿಕೊಂಡು‌ ಹೋಗಬೇಕು. ನಾನು ಆರು ಬಾರಿ ಶಾಸಕನಾಗಿದ್ದೇನೆ. ಅವರು ಎರಡು ಬಾರಿ ಮಾತ್ರ ಶಾಸಕರಾಗಿದ್ದಾರೆ. ಕೆಲವರು ಒಂದೇ ಬಾರಿ ಶಾಸಕರಾಗಿ‌ ಸಚಿವರಾಗಿದ್ದಾರೆ. ಎಲ್ಲರ ಜೊತೆಗೆ ಹೊಂದಿಕೊಂಡು ಕೆಲಸ ಮಾಡಬೇಕು ಎಂದರು. ರಾಜ್ಯ ಪ್ರವಾಸ ಮುಂದೆ ಕೂಡ ಇರುತ್ತದೆ. ನಾವು ರಾಜ್ಯ ಪ್ರವಾಸ ಮಾಡಲು ಯಾವುದೇ ಅಡ್ಡಿಯಿಲ್ಲ. ಶಾಸಕರು ಕ್ಷೇತ್ರದ ಕೆಲಸ ಮಾತ್ರ ಅಲ್ಲ. ಒಟ್ಟಾಗಿ ಪ್ರವಾಸ ಕೂಡ ಮಾಡಬೇಕು.‌ ಮುಂದೆ ಆ ಬಗ್ಗೆ ಪ್ಲಾನ್​ ಮಾಡುತ್ತೇವೆ ಎಂದು ಇದೇ ವೇಳೆ ತಿಳಿಸಿದರು.

ಬೆಳಗಾವಿ ಡಿಸಿಎಂ ಭೇಟಿ ವೇಳೆ ಉಸ್ತುವಾರಿ ಸಚಿವರ ಗೈರು ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಗೈರು ಬಗ್ಗೆ ಡಿ.ಕೆ ಶಿವಕುಮಾರ್​ಗೆ ಒಂದು ದಿನ ಮೊದಲೇ ತಿಳಿಸಿದ್ದೆ. ಅವರು ಬರುವ ವಿಚಾರ ಮೊದಲೇ ಗೊತ್ತಿತ್ತು. ಹಾಗಾಗಿ ನಾವು ಬರಮಾಡಿಕೊಳ್ಳಲು ಆಗಿಲ್ಲ ಎಂದರು‌. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕು. ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ನಾನೂ ಹೆಸರನ್ನೂ ನೀಡಿದ್ದೇನೆ. ಲಕ್ಷ್ಮಣ ಸವದಿ ಎಲ್ಲೂ ಕಾರ್ಯಾಧ್ಯಕ್ಷ ಸ್ಥಾನ ಕೇಳಿಲ್ಲ. ಮಾಡೋದಾದರೆ ನಮ್ಮ ಅಭ್ಯಂತರ ಏನು ಇಲ್ಲ. ಸವದಿ, ನಿಂಬಾಳ್ಕರ್ ಯಾರೇ ಕಾರ್ಯಾಧ್ಯಕ್ಷರಾದರೂ ಮನಗೆ ಅಡ್ಡಿಯಿಲ್ಲ ಎಂದು ಸ್ಪಷ್ಟಪಡಿಸಿದರು.


Spread the love

About Laxminews 24x7

Check Also

ಆನ್‌ಲೈನ್ ಗೇಮಿಂಗ್ ಪ್ರಚಾರ-ನಿಯಂತ್ರಣ ಕಾಯಿದೆ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ: ಆ.30ಕ್ಕೆ ವಿಚಾರಣೆ

Spread the love ಬೆಂಗಳೂರು: ಹಣವನ್ನು ಪಣಕ್ಕಿಟ್ಟು ಆಡುವಂತಹ ಆನ್‌ಲೈನ್​ ಗೇಮ್​ಗಳಿಗೆ ನಿಷೇಧ ಹೇರುವುದಕ್ಕೆ ಅವಕಾಶ ಕಲ್ಪಿಸುವ ಆನ್‌ಲೈನ್ ಗೇಮಿಂಗ್ ಪ್ರಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ