Breaking News

ಬೆಳಗಾವಿ ಜಿಲ್ಲೆಯಲ್ಲಿ ಡಿಕೆಶಿ ಹಸ್ತಕ್ಷೇಪ ಮಾಡುತ್ತಿಲ್ಲ ,ಸುಮ್ಮನೆ ಮಾಧ್ಯಮಗಳು ಏನೆನೋ ಸೃಷ್ಟಿಸುತ್ತಿವೆ”: ಬಾಬಾಸಾಹೇಬ ಪಾಟೀಲ

Spread the love

ಬೆಳಗಾವಿ : ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್​ ಅವರ ಬೆಳಗಾವಿ ಪ್ರವಾಸ ಪೂರ್ವ ನಿಯೋಜಿತವಾಗಿರಲಿಲ್ಲ. ನಾನು ನನ್ನ ಕ್ಷೇತ್ರದ ಕೆಲಸಕ್ಕಾಗಿ ಬೆಂಗಳೂರಿಗೆ ತೆರಳಿದ್ದೆ. ಅವರು ಬೆಳಗಾವಿಗೆ ಬರುವ ಮೊದಲೇ ನಾನು ಬೆಂಗಳೂರಿನಲ್ಲಿದ್ದೆ ಎಂದು ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ ಸ್ಪಷ್ಟಪಡಿಸಿದರು.

ಬೆಳಗಾವಿ ನಗರದ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಹೂಡಿದ್ದ ಡಿ ಕೆ ಶಿವಕುಮಾರ್ ಅವರನ್ನು ಇಂದು ಭೇಟಿಯಾಗಲು ಆಗಮಿಸಿದ್ದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಳಗ್ಗೆ ಬೆಂಗಳೂರಿನಿಂದ ಬಂದ ತಕ್ಷಣವೇ ಡಿಕೆಶಿ ಭೇಟಿ ಮಾಡಲು ಆಗಮಿಸಿರುವೆ ಎಂದರು. ಬಳಿಕ, ಡಿಕೆಶಿ ಅವರ ಸ್ವಾಗತಕ್ಕೆ ಗೈರಾಗಿದ್ದರಿಂದ ಪಕ್ಷಕ್ಕೆ ಮುಜುಗರ ಆಯಿತಾ? ಎಂಬ ಮಾಧ್ಯಮಗಳ ಪ್ರಶ್ನೆಗೆ, ಆ ರೀತಿ ಏನೂ ಇಲ್ಲ. ಇದರಲ್ಲಿ ಯಾವುದೇ ರಾಜಕೀಯ ಗಿಮಿಕ್ ಇಲ್ಲ. ಡಿಕೆ ಶಿವಕುಮಾರ ಅವರು ಬೆಳಗಾವಿಯಲ್ಲಿ ಹಸ್ತಕ್ಷೇಪ ಮಾಡುತ್ತಿಲ್ಲ. ನನಗೇನೂ ಆ ಅನುಭವ ಆಗಿಲ್ಲ. ಹಾಗೆಯೇ ಡಿಸಿಎಂ ಮತ್ತು ಸತೀಶ್ ಜಾರಕಿಹೊಳಿ ಮಧ್ಯೆ ಯಾವುದೇ ವೈಮನಸ್ಸಿಲ್ಲ ಎಂದು ಹೇಳಿದರು.

ಕುಸ್ತಿ ನೋಡಲು ಮೈಸೂರಿಗೆ ತೆರಳಿದ್ದ ಕುರಿತು ಮಾತನಾಡಿ, “ಮೈಸೂರಿನಲ್ಲಿ ನಮ್ಮ ಇಬ್ಬರು ಸ್ನೇಹಿತರಿದ್ದಾರೆ. ಅವರು ಹಿಂದಿನ ವರ್ಷವೂ ಔತಣಕೂಟ ಏರ್ಪಡಿಸಿ, ನಮ್ಮನ್ನು ಕರೆದಿದ್ದರು. ಆಗಲೂ ಹೋಗಿದ್ದೆವು. ಬಸ್​ನಲ್ಲಿ ನಾವು ಹೋಗಿರಲಿಲ್ಲ, ಸುಮ್ಮನೆ ಮಾಧ್ಯಮಗಳು ಏನೆನೋ ಸೃಷ್ಟಿಸುತ್ತಿವೆ” ಎಂದರು.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ