Breaking News

ಬೆಳಗಾವಿ ಸಮಸ್ಯೆಯಿಂದಲೇ ಮೈತ್ರಿ ಸರ್ಕಾರ ಪತನ… ಈಗಲೂ ಅಂತಹದ್ದೇ ಲಕ್ಷಣ ಗೋಚರಿಸ್ತಿದೆ: ಮುನಿರತ್ನ

Spread the love

ಬೆಂಗಳೂರು: ”ಬೆಳಗಾವಿ ರಾಜಕಾರಣದಲ್ಲಿ ಸಮಸ್ಯೆ ಮತ್ತೆ ಉಕ್ಕುತ್ತಿದೆ. ಬೆಳಗಾವಿಯಲ್ಲಿ ಸಮಸ್ಯೆ ಪ್ರಾರಂಭ ಆದರೇನೇ ಸರ್ಕಾರಗಳು ಉರುಳುತ್ತವೆ. ಈಗಲೂ ಅಂತಹದ್ದೇ ಲಕ್ಷಣ ಕಾಣಿಸುತ್ತಿದೆ. ಮಹಾಭಾರತದ ಯುದ್ಧ ಒಂದು ಸಲಕ್ಕೆ ನಿಂತಿಲ್ಲ. ನಡೀತನೇ ಇತ್ತು, ಅದೇ ರೀತಿ ಬೆಳಗಾವಿ ರಾಜಕಾರಣದಲ್ಲಿಯೂ ಶೀತಲ ಸಮರ ನಡೆಯುತ್ತಲೇ ಇದೆ. ಯಾವಾಗ ಏನಾಗಲಿದೆಯೋ ಗೊತ್ತಿಲ್ಲ” ಎಂದು ಮಾಜಿ ಸಚಿವ ಮುನಿರತ್ನ ಅವರು ಪರೋಕ್ಷವಾಗಿ ಕಾಂಗ್ರೆಸ್ ಸರ್ಕಾರದ ಪತನದ ಹಾದಿಯಲ್ಲಿದೆ ಎನ್ನುವುದನ್ನು ಹೇಳಿದ್ದಾರೆ.

ವೈಯಾಲಿ ಕಾವಲ್​ನಲ್ಲಿರುವ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ”ಬೆಳಗಾವಿಯಲ್ಲಿ ಮತ್ತೆ ರಾಜಕಾರಣ ಶುರುವಾಗಿದೆ. ಈ ಮೊದಲು ಸಮ್ಮಿಶ್ರ ಸರ್ಕಾರ ಉರುಳಿದ್ದೇ ಬೆಳಗಾವಿ ರಾಜಕಾರಣದಿಂದ, ಬೆಳಗಾವಿಯಲ್ಲಿ ರಾಜಕಾರಣ ಶುರುವಾದಾಗಲೆಲ್ಲ ಸರ್ಕಾರಗಳಿಗೆ ಗಂಡಾಂತರ ಬರುತ್ತದೆ. ಈಗ ಕಾವೇರಿ ನೀರು ಉಕ್ಕಿ ಹರಿಯುವ ರೀತಿಯಲ್ಲಿ ಬೆಳಗಾವಿ ಕಾಂಗ್ರೆಸ್​ನಲ್ಲಿ ಆಂತರಿಕ ಜಗಳ ಉಕ್ಕಿ ಹರಿಯುತ್ತಿದೆ. ಹಿಂದೆ ಇದೇ ರೀತಿ ಅಲ್ಲಿ ಉಕ್ಕಿ ಹರಿದು ಮೈತ್ರಿ ಸರ್ಕಾರ ಪತನ ಆಗಿತ್ತು. ಈಗಿನ ಸರ್ಕಾರದಲ್ಲೂ ಅಂತಹದ್ದೇ ಸ್ಥಿತಿ ಶುರುವಾಗಿದೆ. ಇದು ಬೆಂಗಳೂರಲ್ಲಿ ಮುಕ್ತಾಯ ಆಗುತ್ತದೆ ಎಂದು ಟಾಂಗ್ ನೀಡಿದರು.

”126 ಕೋಟಿ ಅನುದಾನ ವಾಪಸ್ ಪಡೆಯಲಾಗಿದೆ. ನನ್ನ ಕ್ಷೇತ್ರದ ಅನುದಾನ ಬೇರೆ ಕ್ಷೇತ್ರಗಳಿಗೆ ವರ್ಗಾವಣೆ ಮಾಡಲಾಗಿದೆ. ನಮ್ಮ ಅನುದಾನ ಬೇರೆ ಕ್ಷೇತ್ರಗಳಿಗೆ ಹೇಗೆ ಕೊಡ್ತಾರೆ ಅವರು? ಡಿಸಿಎಂ ಅವರು ಕಾಮಗಾರಿಗಳ ಪಟ್ಟಿ ಕೇಳಿದ್ದರು. ಅವರು ಕೇಳಿದ ವಿವರ ಸಲ್ಲಿಸಿದ್ದೇನೆ. ನನಗೆ ನಂಬಿಕೆ ಇದೆ, ನನ್ನ ಕ್ಷೇತ್ರದ ಅನುದಾನ ವಾಪಸ್ ಬಂದೇ ಬರುತ್ತದೆ ಎಂದು, ನಮ್ಮ ಕ್ಷೇತ್ರದ ಹಣ ಬಿಡುವ ಪ್ರಶ್ನೆಯೇ ಇಲ್ಲ. ಅವರು ಅನುದಾನ ಕೊಡದಿದ್ದರೆ, ಮುಂದೇನು ಮಾಡಬೇಕೆಂದು ತಿಳಿಸ್ತೇನೆ. ಅನುದಾನ ವಾಪಸ್ ಬರದಿದ್ದರೆ, ಮತ್ತೆ ಪ್ರತಿಭಟನೆ ಮಾಡಲ್ಲ, ಕಾಲು ಹಿಡಿಯಲ್ಲ” ಎಂದರು.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ