ಕಲಬುರಗಿ : ಜಿಲ್ಲೆಯ ಚಿಂಚೋಳಿ ತಾಲೂಕಿನ ಚಂದಾಪುರ ಗ್ರಾಮದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಬಾಬುರಾವ್ ಪಾಟೀಲ್ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚಂದಾಪುರದ ಬಸವ ನಗರದಲ್ಲಿರುವ ಮನೆಯ ಮೇಲೆ ಇಂದು ಬೆಳಗ್ಗೆ ಹೈದರಾಬಾದ್ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ನೆರೆ ರಾಜ್ಯದ ನೋಂದಣಿ ಹೊಂದಿರುವ ಖಾಸಗಿ ಇನ್ನೋವಾ ಕಾರುಗಳಲ್ಲಿ ಅಧಿಕಾರಿಗಳ ತಂಡದವರು ಆಗಮಿಸಿದ್ದಾರೆ. ಸದ್ಯ ಮನೆಯಲ್ಲಿ ಅಧಿಕಾರಿಗಳು ಶೋಧ ನಡೆಸಿ, ಮಹತ್ವದ ದಾಖಲೆಗಳನ್ನು ಪರಿಶೀಲನೆ ಮಾಡ್ತಿದ್ದಾರೆ.
ತಂಡದಲ್ಲಿ ಇಡಿಯ ನಾಲ್ವರು ಅಧಿಕಾರಿಗಳು, ನಾಲ್ಕು ಯೋಧರು, ಮಹಿಳಾ ಅಧಿಕಾರಿಗಳು ಇದ್ದಾರೆ. ಬಾಬುರಾವ್ ಪಾಟೀಲ್, ಮಾಜಿ ಸಚಿವರ ಸಹೋದರರಾಗಿದ್ದು, ಅವರ ಇಂಡಸ್ಟ್ರಿಗಳಿಗೆ ಸಂಬಂಧಿಸಿದ ದಾಖಲೆ ಪರಿಶೀಲನೆಗಾಗಿ ಈ ದಾಳಿ ನಡೆದಿದೆ ಎಂದು ಕರ್ನಾಟಕ ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಸ್ಥಳಕ್ಕೆ ಡಿವೈಎಸ್ಪಿ ಕೆ ಬಸವರಾಜ, ಸಿಪಿಐ ಅಂಬಾರಾಯ ಕಮಾನಮನಿ ಮೊದಲಾದವರು ಭೇಟಿ ನೀಡಿದ್ದಾರೆ.
Laxmi News 24×7