Breaking News

ದಸರಾ ಪ್ರಯುಕ್ತ 2 ಸಾವಿರಕ್ಕೂ ಹೆಚ್ಚು ಕೆಎಸ್​ಆರ್​ಟಿಸಿ ವಿಶೇಷ ಬಸ್ ಸೌಲಭ್ಯ; ಪೂಜೆ ಸಲ್ಲಿಸಿ ಚಾಲನೆ

Spread the love

ಬೆಂಗಳೂರು: ನಾಡಹಬ್ಬ ಮೈಸೂರು ದಸರಾ ಹಾಗು ದಸರಾ ರಜೆ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ 2,000ಕ್ಕೂ ಹೆಚ್ಚು ಬಸ್​ಗಳ ವಿಶೇಷ ಸಾರಿಗೆ ವ್ಯವಸ್ಥೆಯನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಎಸ್​ಆರ್​ಟಿಸಿ) ಕಲ್ಪಿಸಿದ್ದು, ನಿಗಮದ ಎಲ್ಲಾ ವಿಭಾಗಗಳಲ್ಲಿ ದಸರಾ ವಿಶೇಷ ಕಾರ್ಯಾಚರಣೆಗೆ‌ ವಿಧ್ಯುಕ್ತವಾಗಿ‌ ಬಸ್​ಗಳಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು.

 

ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಮೈಸೂರು ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ದಸರಾ ವಿಶೇಷ ಕಾರ್ಯಾಚರಣೆ ಅಂಗವಾಗಿ ಅಲಂಕೃತ ವಾಹನಗಳಿಗೆ ಪೂಜೆ ಸಲ್ಲಿಸಿ ಕಾರ್ಯಾಚರಣೆ ಪ್ರಾರಂಭಿಸಲಾಯಿತು‌. ಚಾಲಕ‌, ನಿರ್ವಾಹಕರಿಗೆ ಸಿಹಿ ಹಂಚಿ ಶುಭ ಕೋರಲಾಯಿತು. ಕೇಂದ್ರ‌ ಕಚೇರಿಯ ಹಿರಿಯ ಅಧಿಕಾರಿಗಳು, ಕೇಂದ್ರೀಯ ವಿಭಾಗದ ಅಧಿಕಾರಿಗಳು, ಕೆಂಪೇಗೌಡ ಬಸ್ ನಿಲ್ದಾಣದ‌ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.

ರಾಜ್ಯ ಹಾಗೂ ದೇಶದ ವಿವಿಧೆಡೆಗಳಿಂದ ದಸರಾ ವೀಕ್ಷಣೆಗೆ ಮೈಸೂರು ನಗರಕ್ಕೆ ಬರುವ ಪ್ರವಾಸಿಗರ ಹಾಗೂ ರಜೆಗಳ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್​ಆರ್​ಟಿಸಿ, ಪ್ರಸ್ತುತ ಕಾರ್ಯಾಚರಣೆ ಮಾಡಲಾಗುತ್ತಿರುವ ಕರ್ನಾಟಕ ಸಾರಿಗೆ (ವೇಗದೂತ) ರಾಜಹಂಸ, ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್ (ಮಲ್ಟಿ ಆಯಕ್ಸಲ್‌) ಇ.ವಿ ಪವರ್ ಪ್ಲಸ್, ಅಂಬಾರಿ ಕ್ಲಬ್ ಕ್ಲಾಸ್, ಅಂಬಾರಿ ಉತ್ಸವ್ ಹಾಗೂ ಪಲ್ಲಕ್ಕಿ ಸಾರಿಗೆ ಸೇವೆಗಳ ಜತೆಗೆ ಹೆಚ್ಚುವರಿ ಬಸ್‌ಗಳ ವಿಶೇಷ ಸಾರಿಗೆ ಸೇವೆಗಳ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ.

 ದಸರಾ ಪ್ರಯುಕ್ತ ವಿಶೇಷ ಬಸ್ ವ್ಯವಸ್ಥೆಹಬ್ಬದ ರಜೆಗಳ ಪ್ರಯುಕ್ತ ಕೆಎಸ್‌ಆರ್​ಟಿಸಿ, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ 26.10.2023 ರವರೆಗೆ ಬೆಂಗಳೂರಿನಿಂದ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಗೆ 2,000ಕ್ಕೂ ಹೆಚ್ಚು ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ಈ ಬಸ್‌ಗಳನ್ನು ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು. ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ 24/10/2023 ರಿಂದ 29/10/2023 ರವರೆಗೆ ವಿಶೇಷ ಹೆಚ್ಚುವರಿ ಬಸ್‌ಗಳ ಕಾರ್ಯಾಚರಣೆ ಮಾಡಲಿದೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ