Breaking News

ಮಹಡಿ ಮೇಲೆ ಉಯ್ಯಾಲೆ ಆಡುವಾಗ ಆಯತಪ್ಪಿ ಬಿದ್ದು ಶಿಕ್ಷಕಿ ಸಾವು

Spread the love

ಚಾಮರಾಜನಗರ: ಉಯ್ಯಾಲೆಯಲ್ಲಿ ಆಟ ಆಡುತ್ತಿದ್ದ ಶಿಕ್ಷಕಿ ಆಯತಪ್ಪಿ ಬಿದ್ದು ಸಾವನ್ನಪ್ಪಿರುವ ಘಟನೆ ಕೊಳ್ಳೇಗಾಲ ಜಿ.ಪಿ.ಮಲ್ಲಪ್ಪಪುರಂ ಬಡಾವಣೆಯಲ್ಲಿ ನಡೆದಿದೆ. ಶಿಕ್ಷಕಿ ಕೆ.ಪುಟ್ಟಿ(53) ಮೃತರು.

ಪುಟ್ಟಿ ಅವರು ಯಳಂದೂರು ತಾಲೂಕಿನ ಮಾಂಬಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು ಹಾಗೂ ರಾಜ್ಯ ಸಾವಿತ್ರಿಬಾಯಿ ಪುಲೆ ಶಿಕ್ಷಕಿ ಸಂಘದ ತಾಲೂಕು ಅಧ್ಯಕ್ಷರು ಕೂಡ ಆಗಿದ್ದರು.

ಮಂಗಳವಾರ ಸಂಜೆ ಮನೆಯ ಮೇಲೆ ಉಯ್ಯಾಲೆ ಆಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಶಿಕ್ಷಕಿ ಕೆಳಗೆ ಬಿದ್ದಿದ್ದಾರೆ. ತಕ್ಷಣವೇ ಮನೆಯವರು ಅವರನ್ನು ಮೇಲೆತ್ತಿ ನಗರದ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದರು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಿದರು. ಆದರೆ, ಚಿಕಿತ್ಸೆ ಫಲಿಸದೇ ಗುರುವಾರ ರಾತ್ರಿ ಶಿಕ್ಷಕಿ ಮೃತಪಟ್ಟಿದ್ದಾರೆ. ಈ ಸಂಬಂಧ ಕೊಳ್ಳೇಗಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೊಳ್ಳೇಗಾಲದ ಇತರೆ ಸುದ್ದಿಗಳು:

ಕಾಡು ಕುರಿ ಬೇಟೆಯಾಡಿದ್ದನ ಬಂಧನ: ಕಾಡು ಕುರಿಯನ್ನು ಬೇಟೆ ಆಡಿ ಮಾಂಸ ಮಾರಾಟ ಮಾಡಲು ಯತ್ನಿಸುವಾಗ ವ್ಯಕ್ತಿ ಸಿಕ್ಕಿ ಬಿದ್ದಿರುವ ಘಟನೆ ಕೊಳ್ಳೇಗಾಲದಲ್ಲಿ ನಡೆದಿದೆ. ಕೊಳ್ಳೇಗಾಲ ತಾಲೂಕಿನ ಜಾಗೇರಿಯ ದೋಮಿದೀನ್ ಬಂಧಿತ ಆರೋಪಿ. ಜಾಗೇರಿ ಅರಣ್ಯ ಪ್ರದೇಶದಲ್ಲಿ ಈತ ಕಾಡು ಕುರಿ ಬೇಟೆಯಾಡಿ ಮಾಂಸ ಮಾರಾಟಕ್ಕೆ ಯತ್ನಿಸುತ್ತಿದ್ದಾಗ ಪೊಲೀಸರು ಬಂಧಿಸಿದ್ದಾರೆ‌‌‌. ಬಂಧಿತನಿಂದ ಕಾಡು ಕುರಿ ಮಾಂಸ, ಒಂದು‌ ನಾಡ ಬಂದೂಕು ಹಾಗೂ‌ ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕಾವೇರಿ ನೀರು ಹರಿಸುವುದನ್ನು ಖಂಡಿಸಿ 37ನೇ ದಿನದ ಪ್ರತಿಭಟನೆ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಇಂದು ಚಾಮರಾಜನಗರದಲ್ಲಿ ಕನ್ನಡಪರ ಹೋರಾಟಗಾರರು 37ನೇ ದಿನದ ಪ್ರತಿಭಟನೆ ನಡೆಸಿದರು. ಚಾಮರಾಜೇಶ್ವರ ದೇಗುಲದಿಂದ ಭುವನೇಶ್ವರಿ ವೃತ್ತದ ತನಕ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಹಾರೆ, ಪಿಕಾಸಿ, ಎಲ್ಕೊಟ್ಟು, ಬಾಂಡ್ಲಿ ಹಿಡಿದು ಸರ್ಕಾರಗಳ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

ರೈತ ಸಮುದಾಯದ ಸಂಕೇತಗಳನ್ನ ಹಿಡಿದು ಪ್ರತಿಭಟನೆ ನಡೆಸಿದ ಹೋರಾಟಗಾರರು, ಕೃಷಿ ಕಾಯಕಕ್ಕೆ ನೀರಿಲ್ಲ, ಗುದ್ದಲಿ, ಪಿಕಾಸಿ, ಸಲಿಕೆಗಳು ನಿಷ್ಪ್ರಯೋಜಕ ಆಗಿವೆ. ನಮ್ಮ ನೀರು ತಮಿಳುನಾಡಿಗೆ ಹರಿಯುತ್ತಿರುವುದರಿಂದ ರೈತರಿಗೆ ಕೆಲಸವಿಲ್ಲವಾಗಿದೆ ಎಂದು ಆಕ್ರೋಶ ಹೊರಹಾಕಿದರು‌. ಇದೇ ರೀತಿ ನೀರು ಹರಿಸುತ್ತಿದ್ದರೇ ಮುಂದಿನ ದಿನಗಳಲ್ಲಿ ರೈತರು ಗುಳೆ ಹೋಗಿ ಕೂಲಿ ಕೆಲಸ ಮಾಡಬೇಕಾಗುತ್ತದೆ, ರೈತರ ಹಿತವನ್ನು ರಾಜ್ಯ ಸರ್ಕಾರ ಬಲಿ ಕೊಡುತ್ತಿದೆ, ಕೇಂದ್ರ ಸರ್ಕಾರ ಮಾತನಾಡದೇ ಮೌನವಹಿಸಿ ನಾಟಕ ಆಡುತ್ತಿದೆ ಎಂದು ಆಕ್ರೋಶ ಹೊರಹಾಕಿದರು‌.

ರಾಷ್ಟ್ರೀಯ ಹೆದ್ದಾರಿಯನ್ನು ತಡೆದಿದ್ದರಿಂದ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕಳೆದ 37 ದಿನಗಳಿಂದ ಚಾಮರಾಜನಗರದಲ್ಲಿ ನಿರಂತರವಾಗಿ ಪ್ರತಿಭಟನೆ ನಡೆಯುತ್ತಿದೆ.


Spread the love

About Laxminews 24x7

Check Also

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ 57ನೇ ಸೆಷನ್ಸ್​ ನ್ಯಾಯಾಲಯ ವಜಾಗೊಳಿಸಿದೆ.

Spread the love ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ. ಅರ್ಜಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ