ಕಲೆಕ್ಷನ್ನಲ್ಲೂ ಸಿಎಂ, ಡಿಸಿಎಂ ನಡುವೆ ಸ್ಪರ್ಧೆ ಏರ್ಪಟ್ಟಿದೆ.: ಡಿ.ವಿ.ಸದಾನಂದಗೌಡ
Laxminews 24x7
ಅಕ್ಟೋಬರ್ 20, 2023
ರಾಜಕೀಯ, ರಾಜ್ಯ, ರಾಷ್ಟ್ರೀಯ
54 Views
ಕಲೆಕ್ಷನ್ನಲ್ಲೂ ಸಿಎಂ, ಡಿಸಿಎಂ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಸಿಎಂ ತಮ್ಮ ಕುರ್ಚಿ ಉಳಿಸಿಕೊಳ್ಳಲು ಡಿಸಿಎಂಗಿಂತ ಹೆಚ್ಚು ಕಲೆಕ್ಷನ್ಗೆ ಇಳಿದಿದ್ದಾರೆ. ಸಿಎಂ ಕುರ್ಚಿ ಎಳೆದುಕೊಳ್ಳಲು ಹೆಚ್ಚು ಹಣ ಸಂಗ್ರಹಕ್ಕೆ ಮುಂದಾಗಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದಗೌಡ ಆರೋಪಿಸಿದ್ದಾರೆ. ಬೆಂಗಳೂರು: ಕಲೆಕ್ಷನ್ನಲ್ಲೂ ಸಿಎಂ, ಡಿಸಿಎಂ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಸಿಎಂ ತಮ್ಮ ಕುರ್ಚಿ ಉಳಿಸಿಕೊಳ್ಳಲು ಡಿಸಿಎಂಗಿಂತ ಹೆಚ್ಚು ಕಲೆಕ್ಷನ್ಗೆ ಇಳಿದಿದ್ದಾರೆ. ಸಿಎಂ ಕುರ್ಚಿ ಎಳೆದುಕೊಳ್ಳಲು ಹೆಚ್ಚು ಹಣ ಸಂಗ್ರಹಕ್ಕೆ ಮುಂದಾಗಿದ್ದಾರೆ. ದೆಹಲಿ ಕಲೆಕ್ಷನ್ ಕೇಂದ್ರ ಬಿಂದು. ರಾಹುಲ್ ಗಾಂಧಿ ಇದರ ಪೂರ್ಣ ಜವಾಬ್ದಾರಿ ಹೊತ್ತಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದಗೌಡ ಆರೋಪಿಸಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿಂದು ‘ಎಟಿಎಂ ಸರಕಾರದ ಕಲೆಕ್ಷನ್ ಟ್ರೀ’ ಸಂಬಂಧ ಪೋಸ್ಟರ್ ಬಿಡುಗಡೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಲೆಕ್ಷನ್ ಸರಕಾರವಿದೆ. ಅದನ್ನು ಸಾಮಾನ್ಯ ಜನರೂ ತಿಳಿದುಕೊಂಡು ಅದನ್ನು ಅನುಭವಿಸುವಂತಾಗಿದೆ. ಅಭಿವೃದ್ಧಿ ಇಲ್ಲದೆ, ರಸ್ತೆಯ ಹೊಂಡ ಗುಂಡಿಗಳನ್ನೂ ತುಂಬಿಸಲಾಗದ ದುಸ್ಥಿತಿ ರಾಜ್ಯದ್ದು ಎಂದು ಟೀಕಿಸಿದರು. ರಾಷ್ಟ್ರೀಯ ಕಾಂಗ್ರೆಸ್ಸಿನ ಕಲೆಕ್ಷನ್ ನೇತೃತ್ವವನ್ನು ಸುರ್ಜೇವಾಲಾ, ವೇಣುಗೋಪಾಲ್ ವಹಿಸಿದ್ದಾರೆ.
ಲೂಟಿ ಹೊಡೆಯುವ ಕಾರ್ಯಯೋಜನೆ ಅಚ್ಚರಿ ತರುವಂತಿದೆ. ಸಿದ್ದರಾಮಯ್ಯರ ಹಣ ಸಂಗ್ರಹ ಅವರ ಮಗ ಯತೀಂದ್ರ ಮತ್ತು ಸ್ವಜಾತಿಯ ಬೈರತಿ ಸುರೇಶ್ ಮೂಲಕ ನಡೆಯುತ್ತದೆ ಎಂದು ವಿವರಿಸಿದರು.