Breaking News

ರಾಜ್ಯದ ರಸ್ತೆ ಸಾರಿಗೆ ನಿಗಮಗಳಿಗೆ 5600 ಬಸ್‌ ಖರೀದಿ: ಮುಖ್ಯಮಂತ್ರಿ

Spread the love

ಬೆಂಗಳೂರು: ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಅಪಾರ ಸ್ಪಂದನೆ ಮತ್ತು ಸಾರ್ವಜನಿಕರ ಮೆಚ್ಚುಗೆ ವ್ಯಕ್ತ ಆಗಿರುವ ಹಿನ್ನೆಲೆಯಲ್ಲಿ 5,675 ಹೊಸ ಬಸ್‌ ಖರೀದಿಯ ಗುರಿ ಹೊಂದಲಾಗಿದ್ದು, ಈ ಕುರಿತು ಶೀಘ್ರವೇ ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

 

ಗೃಹ ಕಚೇರಿ ಕೃಷ್ಣಾದಲ್ಲಿ ಸಾರಿಗೆ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಪ್ರಸಕ್ತ ಆಯವ್ಯಯದಲ್ಲಿ ಹೊಸ ಬಸ್‌ಗಳ ಖರೀದಿಗೆ 500 ಕೋಟಿ ರೂ. ಒದಗಿಸಲಾಗಿದ್ದು, ಖರೀದಿ ಪ್ರಕ್ರಿಯೆಯನ್ನು ಶೀಘ್ರವೇ ಪೂರ್ಣಗೊಳಿಸಲು ಸೂಚಿಸಿದರು.

ಶಕ್ತಿ ಯೋಜನೆಯಿಂದ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಪ್ರಯಾಣಿಕರ ಸಂಖ್ಯೆ ಶೇ.15 ರಷ್ಟು ಹೆಚ್ಚಾಗಿದೆ. ಇದರೊಂದಿಗೆ ಹೆಚ್ಚುವರಿ ಶೆಡ್ಯೂಲ್​ಗಳನ್ನು ಸೇರಿಸಲು, ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸಲು ಅನುವಾಗುವಂತೆ ಬಸ್‌ಗಳನ್ನು ಸೇರ್ಪಡೆಗೊಳಿಸುವಂತೆ ತಿಳಿಸಿದರು. ಸಾರಿಗೆ ಇಲಾಖೆಯ ರಾಜಸ್ವ ಗುರಿ ಸಂಗ್ರಹ ಹಾಗೂ ಸಾರಿಗೆ ನಿಗಮಗಳ ಹಣಕಾಸು ನಿರ್ವಹಣೆ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ವಾಹನ ತನಿಖೆಯಿಂದ 83 ಕೋಟಿ ರೂ. ದಂಡ ಸಂಗ್ರಹ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.


Spread the love

About Laxminews 24x7

Check Also

ಬೆಳಗಾವಿ: ಕೈಲಾಸಕ್ಕೆ ಕರೆದೊಯ್ಯುವ ನಂಬಿಕೆ, ದೇಹತ್ಯಾಗಕ್ಕೆ ಮುಂದಾದ ಕುಟುಂಬ; ಅಧಿಕಾರಿಗಳಿಂದ ತಡೆ

Spread the loveಚಿಕ್ಕೋಡಿ (ಬೆಳಗಾವಿ): ಇಂದಿನ ಆಧುನಿಕ ದಿನಗಳಲ್ಲೂ ಕುಟುಂಬವೊಂದು ಆಶ್ರಮವೊಂದರ ಚಿಂತನೆಗಳನ್ನು ಅನುಕರಿಸಿ ದೇಹತ್ಯಾಗಕ್ಕೆ ಮುಂದಾದ ಘಟನೆ ಜಿಲ್ಲೆಯ ಅಥಣಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ