Breaking News

ಬಾಲಿವುಡ್​ಗೆ ರಾಕಿಂಗ್​ ಸ್ಟಾರ್ ಪದಾರ್ಪಣೆ

Spread the love

ಹೈದರಾಬಾದ್: ಕೆಜಿಎಫ್ ಸಿನಿಮಾದ ಯಶಸ್ಸಿನ ಮೂಲಕ ಅಪಾರ ಜನಪ್ರಿಯತೆ ಗಳಿಸಿರುವ ಕನ್ನಡದ ಸ್ಟಾರ್​ ನಟ ಯಶ್ ಈಗ ಬಾಲಿವುಡ್‌ನಲ್ಲಿ ತಮ್ಮ ಛಾಪು ಮೂಡಿಸಲು ಮುಂದಾಗಿದ್ದಾರೆ.

ಇದರ ಭಾಗವಾಗಿ ಅವರು ನಿರ್ದೇಶಕ ನಿತೇಶ್ ತಿವಾರಿ ಅವರ ಮಹತ್ವಾಕಾಂಕ್ಷೆಯ ರಾಮಾಯಣ ಸಿನಿಮಾಕ್ಕೆ ಅಧಿಕೃತವಾಗಿ ಸಹಿ ಹಾಕಿದ್ದಾರೆ. ಈ ಸಿನಿಮಾಕ್ಕೆ ಯಶ್​ ಬರೋಬ್ಬರಿ 100 ಕೋಟಿ ರೂಪಾಯಿಗೂ ಹೆಚ್ಚು ಸಂಭಾವನೆಗೆ ಬೇಡಿಕೆಯಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

ಚಿತ್ರದಂಡದ ಪ್ರಕಾರ, ನಿರ್ದೇಶಕ ತಿವಾರಿ ಅವರು ರಾಮನ ಪಾತ್ರಕ್ಕಾಗಿ ರಣಬೀರ್ ಕಪೂರ್, ಸೀತೆಯ ಪಾತ್ರಕ್ಕೆ ಸಾಯಿ ಪಲ್ಲವಿ, ರಾವಣನ ಪಾತ್ರಕ್ಕೆ ಯಶ್​ರನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಈ ಬಹು ನಿರೀಕ್ಷಿತ ಚಿತ್ರದ ಚಿತ್ರೀಕರಣ ಮುಂದಿನ ವರ್ಷ ಫೆಬ್ರವರಿಯಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದೆ. ಕೆಜಿಎಫ್​ ಮೂರನೇ ಭಾಗ ಯಶ್​ ಕೈಯಲ್ಲಿದ್ದರೂ, ಬಾಲಿವುಡ್​ಗೆ ಪದಾರ್ಪಣೆ ಮಾಡಲು ಯಶ್​ ಈ ಸಿನಿಮಾವನ್ನು ಒಪ್ಪಿಕೊಂಡಿದ್ದಾರೆಂದು ಯಶ್ ಅವರ ಆಪ್ತ ಮೂಲಗಳು ತಿಳಿಸಿವೆ. ಈ ಸಿನಿಮಾದಲ್ಲಿನ ಪಾತ್ರಕ್ಕಾಗಿ ಯಶ್ 100 ರಿಂದ 150 ಕೋಟಿ ರೂ. ಸಂಭಾವನೆ ಪಡೆಯುತ್ತಿದ್ದಾರೆ. ಕನಿಷ್ಠ 100 ಕೋಟಿ ರೂ.ಗಳು ಮತ್ತು ಚಿತ್ರೀಕರಣದ ದಿನಗಳ ಸಂಖ್ಯೆ ಮತ್ತು ಯಶ್​ ಅವರ ಕಾಲ್​ಶೀಟ್​ ಅವಲಂಬಿಸಿ ಸಂಭಾವನೆ ಅಂತಿಮಗೊಳಿಸಲಾಗುವುದು ಎಂದು ಅವರ ಆಪ್ತ ಮೂಲಗಳು ಮಾಹಿತಿ ನೀಡಿವೆ.


Spread the love

About Laxminews 24x7

Check Also

ಬಜೆಟ್ ನಲ್ಲಿ ಸಾರಿಗೆ ಇಲಾಖೆಗೆ ಸಿಕ್ಕಿದ್ದೇನು?

Spread the loveಶಕ್ತಿ ಯೋಜನೆಗೆ 5,300 ಕೋಟಿ ರೂ. ಸಾರಿಗೆ ಸಿಬ್ಬಂದಿ ವೇತನ ಬಾಕಿ ಪಾವತಿಗೆ 1,271 ಕೋಟಿ ರೂ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ