Breaking News

ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತಯಾರಿ: ಜನವರಿ ಮೊದಲ ವಾರದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ- ಸಲೀಂ ಅಹ್ಮದ್

Spread the love

ಧಾರವಾಡ: ಎರಡೂವರೆ ವರ್ಷದ ಬಳಿಕ ಸಚಿವ ಸಂಪುಟ ಪುನರ್‌ರಚನೆ ವಿಚಾರಕ್ಕೆ ಪರಿಷತ್​ ಮುಖ್ಯ ಸಚೇತಕ ಸಲೀಂ ಅಹ್ಮದ್ ಪ್ರತಿಕ್ರಿಯಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷರು ಈ ಬಗ್ಗೆ ಚರ್ಚೆ ಸೂಕ್ತವಲ್ಲ ಎಂದು ಹೇಳಿದ್ದಾರೆ. ಮುಖಂಡರು, ಶಾಸಕರು ಚರ್ಚಿಸಬೇಡಿ ಎಂದಿದ್ದಾರೆ. ಸಮಯ, ಸಂದರ್ಭ ಬಂದಾಗ ವರಿಷ್ಠರು ಹೇಳುತ್ತಾರೆ ಎಂದರು.

ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತಯಾರಿ ವಿಚಾರದ ಬಗ್ಗೆ ಮಾತನಾಡಿ, ಈಗಾಗಲೇ 28 ಲೋಕಸಭಾ ವೀಕ್ಷಕರ ನೇಮಕವಾಗಿದೆ. ಎಲ್ಲ ಜಿಲ್ಲೆಗಳಲ್ಲಿ ವೀಕ್ಷಕರು ಸಭೆಗಳನ್ನು ಮಾಡುತ್ತಿದ್ದಾರೆ. ಶಾಸಕರು, ಮಾಜಿ ಶಾಸಕರು, ಬ್ಲಾಕ್ ಅಧ್ಯಕ್ಷರು ಹಾಗು ಕಾರ್ಯಕರ್ತರನ್ನು ಮಾತನಾಡಿಸಿದ್ದಾರೆ. ನಂತರ ಒಂದು ಪ್ಯಾನಲ್ ಮಾಡುತ್ತಾರೆ. ಹತ್ತು ದಿನಗಳಲ್ಲಿ ಮಹತ್ವದ ಸಭೆ ಆಗುತ್ತದೆ. ಎಲ್ಲ ವೀಕ್ಷಕರು, ಸಚಿವರು ಮತ್ತು ಕೆಪಿಸಿಸಿ ಅಧ್ಯಕ್ಷರ ಜತೆ ಸಭೆ ಮಾಡುತ್ತಾರೆ. ಈ ಸಭೆಯ ಬಳಿಕ ಕೆಪಿಸಿಸಿ ಅಧ್ಯಕ್ಷರು, ಸಿಎಂ, ವರಿಷ್ಠರಿಗೆ ಪಟ್ಟಿ ರವಾನೆ ಮಾಡುತ್ತಾರೆ. ಜನವರಿ ಮೊದಲ ವಾರದಲ್ಲಿ ಪಟ್ಟಿ ಬಿಡುಗಡೆ ಆಗುತ್ತದೆ ಎಂದು ತಿಳಿಸಿದರು.

ವಿನಯ ಕುಲಕರ್ಣಿ ಹೇಳಿಕೆ ವಿಚಾರ: ಪಕ್ಷದಲ್ಲಿ ಅಂತಿಮ ತೀರ್ಮಾನ ವರಿಷ್ಠರದ್ದು. ಯಾರು ಮಂತ್ರಿ ಇರಬೇಕು, ಯಾರಿಗೆ ಬೇರೆ ಅಧಿಕಾರ ಸಿಗಬೇಕು ಎಂಬುದನ್ನು ವರಿಷ್ಠರೇ ತೀರ್ಮಾನ ಮಾಡುತ್ತಾರೆ. ಈಗಾಗಲೇ ಸಿದ್ದರಾಮಯ್ಯ ಸಿಎಂ, ಡಿಕೆಶಿ ಡಿಸಿಎಂ ಇದ್ದಾರೆ. ಮಂತ್ರಿ ಮಂಡಲ ಈಗ ಪೂರ್ಣ ಆಗಿದೆ. ಸದ್ಯಕ್ಕೆ ಅದರ ಬಗ್ಗೆ ಚರ್ಚೆ ಇಲ್ಲ ಎಂದು ಸ್ಪಷ್ಟಪಡಿಸಿದರು.


Spread the love

About Laxminews 24x7

Check Also

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

Spread the loveಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ