Breaking News

ಬಿಗ್​ ಬಾಸ್​ ಮನೆಯಿಂದಲೇ ವರ್ತೂರು​ ಸಂತೋಷ್​ ಅರೆಸ್ಟ್​​.. ಕಾರಣವೇನು?

Spread the love

ಬೆಂಗಳೂರು: ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್​ ಬಾಸ್​ ಸೀಸನ್​ 10ರ ಸ್ಪರ್ಧಿ ವರ್ತೂರು​ ಸಂತೋಷ್​ ಅವರನ್ನು ಬಿಗ್​ ಬಾಸ್​ ಮನೆಯಿಂದಲೇ ವಶಕ್ಕೆ ಪಡೆಯಲಾಗಿದೆ.

ಹುಲಿ ಉಗುರಿನ ಡಾಲರ್​ ಧರಿಸಿದ್ದ ಆರೋಪದ ಮೇಲೆ ಅವರನ್ನು ಅರಣ್ಯಾಧಿಕಾರಿಗಳು ತಡರಾತ್ರಿ ಅರೆಸ್ಟ್​ ಮಾಡಿದ್ದಾರೆ. ಭಾನುವಾರ ರಾತ್ರಿ ಸಂತೋಷ್​ ಅವರನ್ನು ವಶಕ್ಕೆ ಪಡೆದಿದ್ದು, ಸದ್ಯ ಅವರು ಅರಣ್ಯಾಧಿಕಾರಿಗಳ ಕಸ್ಟಡಿಯಲ್ಲಿದ್ದಾರೆ. ಇಂದು ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆಯಿದೆ.

ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಬಂಧನ: ಹುಲಿಯ ಉಗುರಿನ ಡಾಲರ್ ಅನ್ನು ಕೊರಳಿಗೆ ಧರಿಸಿರುವ ಸಂತೋಷ್ ವನ್ಯಜೀವಿ ಸಂರಕ್ಷಣಾ ಕಾಯ್ದೆ ಉಲ್ಲಂಘಿಸಿದ್ದಾರೆ ಎಂದು ಅವರ ವಿರುದ್ಧ ವ್ಯಕ್ತಿಯೊಬ್ಬರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ವರ್ತೂರು ಸಂತೋಷ್ ಅವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದು, ಡಾಲರ್ ಜಪ್ತಿ ಮಾಡಿಕೊಂಡಿದ್ದಾರೆ. ಮೇಲ್ನೋಟಕ್ಕೆ ಡಾಲರ್​ನಲ್ಲಿ ಬಳಸಿರುವುದು ಹುಲಿ ಉಗುರು ಎಂಬುದು ಸಾಬೀತಾಗಿದೆ ಎಂದು ತಿಳಿದು ಬಂದಿದೆ.

ವರ್ತೂರು ಸಂತೋಷ್ ಯಾರು?: ವರ್ತೂರಿನಲ್ಲಿ ವ್ಯವಸಾಯ ಮಾಡಿಕೊಂಡಿರುವ ಸಂತೋಷ್‌, ‘ರೈತ ಅಂದರೆ ಸಗಣಿಯನ್ನೇ ಎತ್ತಬೇಕು ಎಂದೇನಿಲ್ಲ; ಶೋಕಿನೂ ಮಾಡಬಹುದು’ ಎಂದು ದಿಟ್ಟವಾಗಿ ಹೇಳುತ್ತಾರೆ. ಹಳ್ಳಿಕಾರ್ ತಳಿಯ ಎತ್ತುಗಳನ್ನು ಪ್ರೀತಿಯಿಂದ ಸಾಕಿ ಬೆಳೆಸುತ್ತಾರೆ. ಎತ್ತುಗಳ ಓಟದ ಸ್ಪರ್ಧೆಯಲ್ಲಿಯೂ ಇವರು ಖ್ಯಾತರಾದವರು. ಸದ್ಯ ಬಿಗ್​ ಬಾಸ್​ ಸೀಸನ್​ 10ರ ಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದಾರೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ