ದೇವನಹಳ್ಳಿ (ಬೆಂಗಳೂರು) : ವಿಮಾನದ ವಾಶ್ ರೂಮ್ನಲ್ಲಿ ಅಡಗಿಸಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.
ಒಂದು ಕೆಜಿ ಅಧಿಕ ತೂಕದ 80 ಲಕ್ಷ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಅಕ್ಟೋಬರ್ 24ರಂದು ಅಬುಧಾಬಿಯಿಂದ ಬಂದ ಇವೈ 238 ವಿಮಾನವನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಈ ವೇಳೆ ವಿಮಾನದ ವಾಶ್ ರೂಮ್ನಲ್ಲಿ ಕಪ್ಪು ಬಣ್ಣದ ಚೀಲದಲ್ಲಿ ಚಿನ್ನವನ್ನು ಅಡಗಿಸಿ ಇಟ್ಟಿರುವುದು ಪತ್ತೆಯಾಗಿದೆ. ಒಟ್ಟು 1331.66 ಗ್ರಾಂ ತೂಕದ 80,21,920 ರೂಪಾಯಿ ಮೌಲ್ಯದ ಚಿನ್ನವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಪ್ರತ್ಯೇಕ ಪ್ರಕರಣ : ಕಳೆದ ಅಕ್ಟೋಬರ್ 20 ಮತ್ತು 21ರ ನಡುವೆ ಕಾರ್ಯಾಚರಣೆ ನಡೆಸಿದ ಕಸ್ಟಮ್ಸ್ ಅಧಿಕಾರಿಗಳು ಚಿನ್ನ ಸಾಗಿಸುತ್ತಿದ್ದ ಮೂವರನ್ನು ಬಂಧಿಸಿದ್ದರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡಲು ಯತ್ನಿಸಿದ್ದ ಮೂವರನ್ನು ಬಂಧಿಸಲಾಗಿತ್ತು. ಬಂಧಿತರಿಂದ 67 ಲಕ್ಷ ಮೌಲ್ಯದ ಒಂದು ಕೆ.ಜಿಗೂ ಅಧಿಕ ಚಿನ್ನವನ್ನು ಅಧಿಕಾರಿಗಳು ವಶಕ್ಕೆ ಪಡೆದಿದುಕೊಂಡಿದ್ದರು.
Laxmi News 24×7