Breaking News

ದಸರಾಗೆ ತಂದಿದ್ದ ಆನೆಯನ್ನು ವಾಪಸ್​ ಒಯ್ಯುತ್ತಿದ್ದ ವೇಳೆ ವಾಹನ ಅಪಘಾತ.. ಚಾಲಕ ಸ್ಥಳದಲ್ಲೇ ಸಾವು

Spread the love

ಆನೇಕಲ್( ಬೆಂಗಳೂರು): ಬನ್ನೇರುಘಟ್ಟದ ಚಂಪಕಧಾಮ ಸ್ವಾಮಿ ದಸರಾ ಮಹೋತ್ಸವಕ್ಕೆ ತಂದಿದ್ದ ಆನೆಯನ್ನು ತಿರುಚ್ಚಿಗೆ ವಾಪಸ್​ ಒಯ್ಯುತ್ತಿದ್ದ ವೇಳೆ ವಾಹನ ತಗ್ಗು ಪ್ರದೇಶಕ್ಕೆ ಹರಿದ ಪರಿಣಾಮ ಲಾರಿ ಚಾಲಕ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.

ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಸಾನಮಾವು ಅರಣ್ಯ ಪ್ರದೇಶದ ಬೆಂಗಳೂರು ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದೆ. ತಮಿಳುನಾಡಿನ ಪುದುಕ್ಕೊಟ್ಟೈ ಮೂಲದ ಆರೋಗ್ಯ ಸ್ವಾಮಿ ಮೃತ ಚಾಲಕ. ಆದರೆ ಲಾರಿಯಲ್ಲಿದ್ದ ಆನೆಯನ್ನು ರಕ್ಷಿಸಲಾಗಿದೆ.

ರಸ್ತೆ ಬದಿಯಲ್ಲಿ ವಾಹನ ನಿಲ್ಲಿಸಿ ಚಾಲಕ ಮೂತ್ರ ವಿಸರ್ಜನೆಗೆ ತೆರಳಿದ್ದನು. ಈ ವೇಳೆ ಹ್ಯಾಂಡ್‌ ಬ್ರೇಕ್‌ ಮಾಡದಿದ್ದರಿಂದ ವಾಹನ ಮುಂದಕ್ಕೆ ಚಲಿಸಿ ಚಾಲಕನ ಮೇಲೆ ಹರಿದಿದೆ. ಇದರಿಂದ ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನು, ರಸ್ತೆ ಬದಿಯ ತಗ್ಗು ಪ್ರದೇಶಕ್ಕೆ ವಾಹನ ಇಳಿದಿದ್ದರೂ ಲಾರಿಯಲ್ಲಿ ಆನೆ ನಿಂತಲ್ಲಿಯೇ ನಿಂತುಕೊಂಡಿತ್ತು. ಜೆಸಿಬಿ ಮೂಲಕ ಆನೆ ಸಹಿತ ಲಾರಿಯನ್ನು ಹೊರಕ್ಕೆ ಎಳೆಯಲಾಗಿದೆ.

ತಿರುಚ್ಚಿ ಜಿಲ್ಲೆಯ ಶ್ರೀರಂಗಂ ಪ್ರದೇಶಕ್ಕೆ ಸೇರಿದ ಭಾಸ್ಕರನ ಬಳಿ 3 ಸಾಕಾನೆಗಳು ಇದ್ದವು. ಕರ್ನಾಟಕ ರಾಜ್ಯದ ಬನ್ನೇರುಘಟ್ಟ ಪ್ರದೇಶದ ಪೆರುಮಾಳ್ ದೇವಸ್ಥಾನದಲ್ಲಿ ದಸರಾ ಹಬ್ಬವನ್ನು ಆಚರಿಸಲು ರಾಣಿ ಹೆಸರಿನ ಆನೆ ತರಲಾಗಿತ್ತು. ಈ ಆನೆಯನ್ನು ವಾಪಸ್​ ಸ್ಥಳಕ್ಕೆ ಬಿಟ್ಟುಬರಲು ತೆರಳುವ ಮುನ್ನ ಈ ದುರ್ಘಟನೆ ಸಂಭವಿಸಿದೆ. ವಾಹನದಲ್ಲಿ ಆರು ಜನರು ರಾತ್ರಿ ವಾಹನದಲ್ಲಿ ತಿರುಚ್ಚಿಗೆ ತೆರಳಿದ್ದರು. ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಈ ಘಟನಾ ಸ್ಥಳಕ್ಕೆ ಅಡ್ಕೋ ಪೊಲೀಸರು ಹಾಗೂ ಅರಣ್ಯ ಸಿಬ್ಬಂದಿ ಧಾವಿಸಿ ಆನೆ ಲಾರಿಯನ್ನು ಹೊರಕ್ಕೆ ತೆಗೆದು ರಕ್ಷಣೆ ಮಾಡಿದ್ದಾರೆ. ಅಪಘಾತದಿಂದ ಕೆಲ ಕಾಲ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು.

ಪ್ರತ್ಯೇಕ ಘಟನೆ- ಬಸ್ ಪಲ್ಟಿಯಾಗಿ 25 ಮಂದಿಗೆ ಗಾಯ: ಪಶ್ಚಿಮ‌ ಬಂಗಾಳದ ಪ್ರವಾಸಿಗರಿದ್ದ ಬಸ್ ​ಪಲ್ಟಿಯಾಗಿ 25 ಮಂದಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಸಮೀಪದ ಮೇಲುಕಾಮನಹಳ್ಳಿ ಇಳಿಜಾರಿನಲ್ಲಿ ಮಂಗಳವಾರ ಸಂಭವಿಸಿತ್ತು. ತಮಿಳುನಾಡಿನ‌ ತೀರ್ಥಕ್ಷೇತ್ರಗಳನ್ನು ನೋಡಿಕೊಂಡು ಬಂಡೀಪುರ‌ ಮಾರ್ಗವಾಗಿ ಕರ್ನಾಟಕಕ್ಕೆ ಬರುತ್ತಿದ್ದಾಗ ಇಳಿಜಾರಿನ ರಸ್ತೆಯಲ್ಲಿ ಬ್ರೇಕ್ ಫೆಲ್ಯೂರ್ ಆಗಿ ಅವಘಡ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಲ್ಲಿನ ತಾಲೂಕು ಆಡಳಿತಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿವೆ.

Spread the loveಶಿವಮೊಗ್ಗ/ಉತ್ತರಕನ್ನಡ: ರಾಜ್ಯದ ಮಲೆನಾಡು ಭಾಗದ ಹಲವೆಡೆ ಮತ್ತೆ ಮಳೆಯ ಆರ್ಭಟ ಮುಂದುವರೆದಿದೆ. ಭಾರಿ ವರ್ಷಧಾರೆ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ