ಕರ್ನಾಟಕದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಗೆ ಸ್ಪಂದಿಸಿ, ಸಂತ್ರಸ್ತ ರೈತರ ಸಂಕಷ್ಟವನ್ನು ನಿವಾರಿಸಲು ಕೇಂದ್ರದಿಂದ ರೂ. 17,901.73 ಕೋಟಿಗಳ ಪರಿಹಾರವನ್ನು ರಾಜ್ಯ ಸರ್ಕಾರ ಕೋರಿದೆ. ನವದೆಹಲಿ/ಬೆಂಗಳೂರು: ಕರ್ನಾಟಕದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಗೆ ಸ್ಪಂದಿಸಿ, ಸಂತ್ರಸ್ತ ರೈತರ ಸಂಕಷ್ಟವನ್ನು ನಿವಾರಿಸಲು ಕೇಂದ್ರದಿಂದ
ರೂ.17,901.73 ಕೋಟಿಗಳ ಪರಿಹಾರವನ್ನು ರಾಜ್ಯ ಸರ್ಕಾರ ಕೋರಿದೆ. ಕೃಷಿ ಸಚಿವ ಎನ್.ಚಲುವರಾಯ ಸ್ವಾಮಿ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರನ್ನೊಳಗೊಂಡ ನಿಯೋಗ ಕೇಂದ್ರ ಕೃಷಿ ಕಾರ್ಯದರ್ಶಿ ಮನೋಜ್ ಕುಮಾರ್ ಅಹುಜಾ ಮತ್ತು ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರೊಂದಿಗೆ ಪ್ರತ್ಯೇಕ ಸಭೆ ನಡೆಸಿತು. ಈ ಸಭೆಗಳಲ್ಲಿ ಅವರು ರಾಜ್ಯದ ಭೀಕರ ಸ್ಥಿತಿಯ ಕುರಿತು ಸಮಗ್ರವಾದ ಮಾಹಿತಿ ನೀಡಿದರು. ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ‘ಎನ್ಡಿಆರ್ಎಫ್ ನಿಯಮಾವಳಿ ಪ್ರಕಾರ ಒಟ್ಟು ರೂ.
17,901.73 ಕೋಟಿ ಬರ ಪರಿಹಾರಕ್ಕೆ ಮನವಿ ಮಾಡಿದ್ದೇವೆ, ಶೀಘ್ರವೇ ಹಣ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇವೆ ಎಂದು ತಿಳಿಸಿದರು.