ತನ್ನ ಜಮೀನಿನಲ್ಲಿ ಗಾಂಜಾ ಬೆಳೆದ ಆರೋಪದ ಮೇಲೆ ಬೀದರ್ ಜಿಲ್ಲೆಯಲ್ಲಿ ರೈತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. 47 ವರ್ಷದ ಶಿವಾಜಿ ರಾಥೋಡ್ ಎಂಬುವವರು ವಿಜಯನಗರ ತಾಂಡಾದಲ್ಲಿರುವ ತನ್ನ ಜಮೀನಿನಲ್ಲಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಬಗ್ಗೆ ಮೂಲಗಳಿಂದ ಖಚಿತ ಮಾಹಿತಿ ಲಭ್ಯವಾಗಿತ್ತು. ಬೀದರ್: ತನ್ನ ಜಮೀನಿನಲ್ಲಿ ಗಾಂಜಾ ಬೆಳೆದ ಆರೋಪದ ಮೇಲೆ ಬೀದರ್ ಜಿಲ್ಲೆಯಲ್ಲಿ ರೈತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. 47 ವರ್ಷದ ಶಿವಾಜಿ ರಾಥೋಡ್ ಎಂಬುವವರು ವಿಜಯನಗರ ತಾಂಡಾದಲ್ಲಿರುವ ತನ್ನ ಜಮೀನಿನಲ್ಲಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಬಗ್ಗೆ ಮೂಲಗಳಿಂದ ಖಚಿತ ಮಾಹಿತಿ ಲಭ್ಯವಾಗಿತ್ತು.
ಈ ಮೇರೆಗೆ ದಾಳಿ ನಡೆಸಿದ ಪೊಲೀಸ್ ತಂಡ 63.86 ಕೆಜಿ ತೂಕದ 25.54 ಲಕ್ಷ ಮೌಲ್ಯದ 179 ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದರು. ‘ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ (ಎನ್ಡಿಪಿಎಸ್) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ರೈತನನ್ನು ಬಂಧಿಸಿದ್ದೇವೆ. ಗಾಂಜಾ ಗಿಡಗಳನ್ನು ವಶಕ್ಕೆ ಪಡೆದ ಅಧಿಕಾರಿಗಳು ಜಮೀನಿನಲ್ಲಿ ತೊಗರಿ ಹಾಗೂ ಹತ್ತಿ ಗಿಡಗಳ ಜೊತೆಗೆ ಗಾಂಜಾ ಗಿಡಗಳನ್ನು ಬೆಳೆಯಲಾಗಿತ್ತು. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.